ಮೈಸೂರು: ಲಾರಿ-ಟೆಂಪೋ ಟ್ರಾವೆಲರ್ ಡಿಕ್ಕಿ, ಮೂವರ ಸಾವು, 12 ಜನರಿಗೆ ಗಾಯ
ಮೈಸೂರಿನ ಹುಣಸೂರು ರಸ್ತೆ ಸಮೀಪ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪ್ರವಾಸಿಗರು ಸಾವನ್ನಪ್ಪಿದ್ದಾರೆ.

Published On :
ಮೈಸೂರು: ಮೈಸೂರಿನ ಹುಣಸೂರು ರಸ್ತೆ ಸಮೀಪ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪ್ರವಾಸಿಗರು ಸಾವನ್ನಪ್ಪಿದ್ದಾರೆ.
ಲಾರಿ ಟೆಂಪೋ ಟ್ರಾವೆಲರ್ ನಡುವೆ ಸಂಭವಿಸಿದ ಅಪಗಾತದಲ್ಲಿ ಟೆಂಪೋ ದಲ್ಲಿದ್ದ 15 ಜನರಲ್ಲಿ ಮೂವರು ಮೃತಪಟ್ಟು 12 ಜನ ಗಾಯಗೊಂಡಿದ್ದಾರೆ.
ಮೀದ್(5೦), ಹಕೀಬ್ (18),ಇಕ್ಬಾಲ್ (36) ಮೃತಪಟ್ಟವರೆಂದು ಗುರುತಿಸಲಾಗಿದ್ದು ಇವರೆಲ್ಲರೂ ಮಂಗಳೂರಿನ ಉಳ್ಳಾಲ ಮೂಲದವರಾಗಿದ್ದಾರೆ.
ಮೃತ ಹಮೀದ್ ಸ್ಟಿಕ್ಕರ್ ಕಟ್ಟಿಂಗ್ ಅಂಗಡಿ ನಡೆಸಿದ್ದರೆ ಇಕ್ಬಾಲ್ ಕೆಲ ಕಾಲ ವಿದೇಶದಲ್ಲಿ ಇದ್ದು ವಾಪಾಸಾಗಿದ್ದರು. ಹಕೀಬ್ ವಿದ್ಯಾಭ್ಯಾಸ ನಡೆಸುತ್ತಿದ್ದರೆನ್ನಲಾಗಿದೆ. ಇವರೆಲ್ಲರೂ ಒಟ್ಟಾಗಿ ಮೈಸೂರು ಪ್ರವಾಸಕ್ಕಾಗಿ ಹೊರಟಿದ್ದರು ಎಂದು ಪೋಲೀಸ್ ಮಾಹಿತಿ ತಿಳಿಸಿದ್ದು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


