ರಾಜ್ಯ

ಸರಣಿ ಹಂತಕ ಸೈನೈಡ್ ಮೋಹನ್ ಗೆ ಗಲ್ಲು ಶಿಕ್ಷೆ ಖಾಯಂಗೊಳಿಸಿದ ಹೈಕೋರ್ಟ್

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ನಿವಾಸಿ ಸುನಂದಾ ಎಂಬ ಮಹಿಳೆಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿ ಸೈನೈಡ್ ಮೋಹನ್ ಗೆ....

ಸರಣಿ ಹಂತಕ ಸೈನೈಡ್ ಮೋಹನ್ ಗೆ ಗಲ್ಲು ಶಿಕ್ಷೆ ಖಾಯಂಗೊಳಿಸಿದ ಹೈಕೋರ್ಟ್
ಸೈನೈಡ್ ಮೋಹನ್
Published On :
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ನಿವಾಸಿ ಸುನಂದಾ ಎಂಬ ಮಹಿಳೆಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸರಣಿ ಹಂತಕ ಸೈನೈಡ್ ಮೋಹನ್ ಗೆ ವಿಧಿಸಿದ್ದ ಗಲ್ಲು ಶಿಕ್ಷೆಯನ್ನು ಕರ್ನಾಟಕ ಹೈಕೋರ್ಟ್ ಬುಧವಾರ ಎತ್ತಿ ಹಿಡಿದಿದೆ. 
ಮಹಿಳೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ನಾಲ್ಕನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ವಿಧಿಸಿದ್ದ ಗಲ್ಲು ಶಿಕ್ಷೆಯನ್ನು ಪ್ರಶ್ನಿಸಿ ಸೈನೈಡ್ ಮೋಹನ್ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವಿ ಮಳಿಮಠ್ ಮತ್ತು ನ್ಯಾಯಮೂರ್ತಿ ಮೈಕೆಲ್ ಕುನ್ಹಾ ಅವರು, ಗಲ್ಲು ಶಿಕ್ಷೆಯನ್ನು ಖಾಯಂಗೊಳಿಸಿದ್ದಾರೆ.
ಮೋಹನ್ 2008 ಜನವರಿಯಲ್ಲಿ 28 ವರ್ಷದ ಸುನಂದಾ ಅವರನ್ನು ಮದುವೆಯಾಗುವುದಾಗಿ ನಂಬಿಸಿ ಮೈಸೂರಿಗೆ ಕರೆದೊಯ್ದು ಲಾಡ್ಜ್ ವೊಂದರಲ್ಲಿ ಸೈನೈಡೆ ನೀಡಿ ಹತ್ಯೆ ಮಾಡಿದ್ದ. 2008, ಫೆಬ್ರವರಿ 12ರಂದು ಮೈಸೂರಿನಲ್ಲಿ ಸುನಂದಾ ಮೃತದೇಹ ಪತ್ತೆಯಾಗಿತ್ತು.
2003 ರಿಂದ 2009 ರವರೆಗೆ ಮೋಹನ್ ಇದೇ ರೀತಿ ಸುಮಾರು 20 ಅಪರಾಧಗಳನ್ನು ಮಾಡಿದ್ದು, ಸರಣಿ ಹಂತಕ ಮೋಹನ್ ಗೆ ನಾಲ್ಕು ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆಯಾಗಿದ್ದು, ಮೂರು ಪ್ರಕರಣಗಳಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದಾನೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.