ರಾಜ್ಯ

ರಾಜ್ಯದ ಎಲ್ಲಾ ಗ್ರಾಮ ಪಂಚಾಯ್ತಿಗಳಿಗೆ ವೈಫೈ ಸೌಲಭ್ಯ: ಸಿಎಂ ಸಿದ್ದರಾಮಯ್ಯ

ರಾಜ್ಯ ಸರ್ಕಾರ ಕರ್ನಾಟಕದ ಎಲ್ಲಾ ಗ್ರಾಮ ಪಂಚಾಯ್ತಿಗಳಿಗೆ ವೈಫೈ ಸೌಲಭ್ಯ ಕಲ್ಪಿಸುವ ಯೋಜನೆಗೆ ಜಾಲನೆ ನೀಡಿದ್ದು, ಈ ವರ್ಷ 2,500 ಗ್ರಾಮ....

ರಾಜ್ಯದ ಎಲ್ಲಾ ಗ್ರಾಮ ಪಂಚಾಯ್ತಿಗಳಿಗೆ ವೈಫೈ ಸೌಲಭ್ಯ: ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Published On :
ಬೆಂಗಳೂರು: ರಾಜ್ಯ ಸರ್ಕಾರ ಕರ್ನಾಟಕದ ಎಲ್ಲಾ ಗ್ರಾಮ ಪಂಚಾಯ್ತಿಗಳಿಗೆ ವೈಫೈ ಸೌಲಭ್ಯ ಕಲ್ಪಿಸುವ ಯೋಜನೆಗೆ ಜಾಲನೆ ನೀಡಿದ್ದು, ಈ ವರ್ಷ 2,500 ಗ್ರಾಮ ಪಂಚಾಯ್ತಿಗಳಿಗೆ ವೈಫೈ ಸೌಲಭ್ಯ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ. 
ಇಂದು ನಗರದಲ್ಲಿ ಬೆಂಗಳೂರು ತಂತ್ರಜ್ಞಾನ ಸಮ್ಮೇಳನ 2017 ಅನ್ನು ಉದ್ದೇಶಿಸಿ ಮಾತನಾಡಿದ ಸಿಎಂ, ಗ್ರಾಮ ಪಂಚಾಯ್ತಿಗಳಿಗೆ ವೈಫೈ ಸೌಲಭ್ಯ ಕಲ್ಪಿಸುವುದರಿಂದ ಡಿಜಿಟಲ್ ಯೋಜನೆಗೆ ಸಹಾಯವಾಗಲಿದೆ ಮತ್ತು ಪ್ರತಿ ನಗರ ಹಾಗೂ ಪಟ್ಟಣಗಳಲ್ಲಿರುವ ಉದ್ಯಮಿಗಳನ್ನು ತಲುಪಲು ಸಹಾಯವಾಗಲಿದೆ ಎಂದಿದ್ದಾರೆ.
ರಾಜ್ಯದಲ್ಲಿ ಒಟ್ಟು 4 ಸಾವಿರ ಗ್ರಾಮ ಪಂಚಾಯ್ತಿಗಳಿದ್ದು, ಮುಂದಿನ ದಿನಗಳಲ್ಲಿ ಈ ಎಲ್ಲಾ ಪಂಚಾಯ್ತಿಗಳಿಗೂ ವೈಫೈ ಸೌಲಭ್ಯ ಸಿಗಲಿದೆ.  ರಾಜ್ಯ ಸರ್ಕಾರ ಮತ್ತು ಗ್ರಾಮ ಪಂಚಾಯಿತಿಗಳೇ ಇದರ ನಿರ್ವಹಣೆಯನ್ನು ನೋಡಿಕೊಳ್ಳಲಿದ್ದು, ಇದಕ್ಕಾಗಿ ಸರ್ಕಾರ ಪ್ರತಿ ತಿಂಗಳು ಎರಡೂವರೆ ಲಕ್ಷ ರು. ಖರ್ಚು ಮಾಡಲಿದೆ.
ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ನವೆಂಬರ್ 16ರಿಂದ 18ರವರೆಗೆ ‘ಬೆಂಗಳೂರು ತಂತ್ರಜ್ಞಾನ ಸಮ್ಮೇಳನ’ವನ್ನು ಆಯೋಜಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.