ಕೆಪಿಎಂಇಎ ತಿದ್ದುಪಡಿ ಕಾಯ್ದೆ ವಿವಾದ: ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ತೃಪ್ತಿಪಟ್ಟ ಜನತೆ
ಕೆಪಿಎಂಇಎ ತಿದ್ದುಪಡಿ ಕಾಯ್ದೆಗೆ ತೀವ್ರ ವಿರೋಧ ವ್ಯಕ್ತಪಡಿಸಿ ಖಾಸಗಿ ವೈದ್ಯರು ನಿನ್ನೆ ಪ್ರತಿಭಟನೆ ನಡೆಸಿದ್ದು, ಖಾಸಗಿ ವೈದ್ಯರ ಪ್ರತಿಭಟನೆ ನಡುವೆಯೂ ಸರ್ಕಾರಿ ಆಸ್ಪತ್ರೆಗಳು ಪರಿಸ್ಥಿತಿಯನ್ನು...

Published On :
ಬೆಂಗಳೂರು: ಕೆಪಿಎಂಇಎ ತಿದ್ದುಪಡಿ ಕಾಯ್ದೆಗೆ ತೀವ್ರ ವಿರೋಧ ವ್ಯಕ್ತಪಡಿಸಿ ಖಾಸಗಿ ವೈದ್ಯರು ನಿನ್ನೆ ಪ್ರತಿಭಟನೆ ನಡೆಸಿದ್ದು, ಖಾಸಗಿ ವೈದ್ಯರ ಪ್ರತಿಭಟನೆ ನಡುವೆಯೂ ಸರ್ಕಾರಿ ಆಸ್ಪತ್ರೆಗಳು ಪರಿಸ್ಥಿತಿಯನ್ನು ಉತ್ತಮವಾಗಿ ನಿಭಾಯಿಸಿವೆ.
ಸರ್ಕಾರಿ ಆಸ್ಪತ್ರೆಯೆಂದರೆ ಹಿಂದಕ್ಕೆ ಸರಿಯುತ್ತಿದ್ದ ಜನತೆ ನಿನ್ನೆ ಯಾವುದೇ ದಾರಿಯಿಲ್ಲದೆಯೇ ಸರ್ಕಾರಿ ಆಸ್ಪತ್ರೆಗಳ ಮೊರೆ ಹೋಗುವಂತಾಗಿತ್ತು. ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಸಾಕಷ್ಟು ಮಂದಿ ಸಂತಸ ವ್ಯಕ್ತಪಡಿಸಿದ್ದಾರೆ.
ಖಾಸಗಿ ವೈದ್ಯರ ಪ್ರತಿಭಟನೆ ಹಿನ್ನಲೆಯಲ್ಲಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗುವ ರೋಗಿಗಳ ಸಂಖ್ಯೆ ಶೇ.25 ರಷ್ಟು ಹೆಚ್ಚಾಗಿದೆ ಎಂದು ಮಲ್ಲೇಶ್ವರಂನಲ್ಲಿರುವ ಕೆ.ಸಿ. ಜನರಲ್ ಆಸ್ಪತ್ರೆಯ ವೈದ್ಯ ಬಿ.ಆರ್. ಮೋಹನ್ ಅವರು ಹೇಳಿದ್ದಾರೆ.
ಪ್ರತಿಭಟನೆ ಹಿನ್ನಲೆಯಲ್ಲಿ ರೋಗಿಗಳನ್ನು ನಿಭಾಯಿಸಲು ನಾವು ಸರ್ವಸನ್ನದ್ಧರಾಗಿದ್ದೆವು. ಆಸ್ಪತ್ರೆಗೆ ಬರುವ ಎಲ್ಲಾ ರೋಗಿಗಳಿಗೂ ಸೂಕ್ತ ರೀತಿಯಲ್ಲಿ ಚಿಕಿತ್ಸೆ ನೀಡಲಾಯಿತು ಎಂದು ತಿಳಿಸಿದ್ದಾರೆ.
ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡ ರೋಗಿಯೊಬ್ಬರು ಪ್ರತಿಕ್ರಿಯೆ ನೀಡಿ, ಆಸ್ಪತ್ರೆಯಲ್ಲಿ ನೀಡಿದ ಚಿಕಿತ್ಸೆಯಿಂದ ತೃಷ್ತಿಯಾಗಿದೆ. ಖಾಸಗಿ ಆಸ್ಪತ್ರೆಗಳಿಗಿಂತ ಸರ್ಕಾರಿ ಆಸ್ಪತ್ರೆ ಉತ್ತಮವಾಗಿದೆ ಎಂದು ಇದೀಗ ಎನಿಸತೊಡಗಿದೆ ಎಂದು ಹೇಳಿದ್ದಾರೆ.
ಸಮಯಕ್ಕೆ ಸರಿಯಾಗಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಪ್ರತಿಭಟನೆ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗುತ್ತಿರುವ ರೋಗಿಗಳ ಸಂಖ್ಯೆ ಕೂಡ ಹೆಚ್ಚಾಗಿದೆ. ವಿಶ್ರಾಂತಿ ಪಡೆಯಲು ನಮಗೆ ಸಮಯ ದೊರಕುತ್ತಿಲ್ಲ. ಆಸ್ಪತ್ರೆಯಲ್ಲಿ ಜನರ ಸಂಖ್ಯೆ ಕೂಡ ಹೆಚ್ಚಾಗಿದೆ ಎಂದು ನರ್ಸ್ ಎಸ್ ಭಾರತಿ ಅವರು ಹೇಳಿದ್ದಾರೆ.
ಚಿಕಿತ್ಸೆ ಕುರಿತಂತೆ ಯಾವುದೇ ಸಮಸ್ಯೆಗಳಿಲ್ಲ. ರೋಗಿಗಳಿಗೆ ಸೂಕ್ತ ರೀತಿಯ ಚಿಕಿತ್ಸೆ ಹಾಗೂ ವ್ಯವಸ್ಥೆಗಳನನು ಮಾಡಲಾಗಿದೆ ಎಂದು ಜಯನಗರದ ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ರೋಗಿ ಶಿವಕುಮಾರ್ ಎಂಬುವವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


