ರಾಜ್ಯ

ಖಾಸಗಿ ವೈದ್ಯರ ಪ್ರತಿಭಟನೆ: ರೋಗಿಗಳಿಗೆ ಚಿಕಿತ್ಸೆ ನೀಡಲು ಸರ್ವಸನ್ನದ್ಧವಾಗಿದ್ದ ಸರ್ಕಾರಿ ಆಸ್ಪತ್ರೆಗಳು

ಕೆಪಿಎಂಇಎ ತಿದ್ದುಪಡಿ ಕಾಯ್ದೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಖಾಸಗಿ ವೈದ್ಯಕೀಯ ಸಂಘಗಳು ಪ್ರತಿಭಟನೆಗಳಿಗೆ ಕರೆ ನೀಡಿದ್ದ ಹಿನ್ನಲೆಯಲ್ಲಿ, ಆಸ್ಪತ್ರೆ ಬರುವ ರೋಗಿಗಳಿಗೆ ಚಿಕಿತ್ಸೆ ನೀಡಲು ಸರ್ಕಾರಿ ಆಸ್ಪತ್ರೆಗಳು ಸರ್ವಸನ್ನದ್ಧವಾಗಿದ್ದವು...

ಖಾಸಗಿ ವೈದ್ಯರ ಪ್ರತಿಭಟನೆ: ರೋಗಿಗಳಿಗೆ ಚಿಕಿತ್ಸೆ ನೀಡಲು ಸರ್ವಸನ್ನದ್ಧವಾಗಿದ್ದ ಸರ್ಕಾರಿ ಆಸ್ಪತ್ರೆಗಳು
ವಿಕ್ಟೋರಿಯಾ ಆಸ್ಪತ್ರೆ (ಸಂಗ್ರಹ ಚಿತ್ರ)
Published On :
ಬೆಂಗಳೂರು: ಕೆಪಿಎಂಇಎ ತಿದ್ದುಪಡಿ ಕಾಯ್ದೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಖಾಸಗಿ ವೈದ್ಯಕೀಯ ಸಂಘಗಳು ಪ್ರತಿಭಟನೆಗಳಿಗೆ ಕರೆ ನೀಡಿದ್ದ ಹಿನ್ನಲೆಯಲ್ಲಿ, ಆಸ್ಪತ್ರೆ ಬರುವ ರೋಗಿಗಳಿಗೆ ಚಿಕಿತ್ಸೆ ನೀಡಲು ಸರ್ಕಾರಿ ಆಸ್ಪತ್ರೆಗಳು ಸರ್ವಸನ್ನದ್ಧವಾಗಿದ್ದವು.
ವೈದ್ಯರ ಪ್ರತಿಭಟನೆ ಹಿನ್ನಲೆಯಲ್ಲಿ ಪ್ರತಿಯೊಂದು ವಿಭಾಗ ಹಾಗೂ ಇಲಾಖೆಯಲ್ಲಿಯೂ ಹೆಚ್ಚುವರಿಯಾಗಿ ವೈದ್ಯರನ್ನು ನೇಮಿಸಲಾಗಿತ್ತು. ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳಿಗೆ ಚಿಕಿತ್ಸೆ ನೀಡಲು ಹಾಗೂ ಪರಿಸ್ಥಿತಿಯನ್ನು ನಿಭಾಯಿಸಲು ಹೆಚ್ಚುವರಿಯಾಗಿ ಬೆಡ್ ಗಳನ್ನು ನೀಡುವಂತೆ ಮನವಿ ಮಾಡಿಕೊಳ್ಳಲಾಗಿತ್ತು ಎಂದು ವಾಣಿ ವಿಲಾಸ್ ಆಸ್ಪತ್ರೆಯ ವೈದ್ಯೆ ಗೀತಾ ಶಿವಮೂರ್ತಿಯವರು ಹೇಳಿದ್ದಾರೆ. 
ಖಾಸಗಿ ವೈದ್ಯರ ಪ್ರತಿಭಟನೆ ಹಿನ್ನಲೆಯಲ್ಲಿ ತುರ್ತು ಚಿಕಿತ್ಸೆ ನೀಡುವ ರೋಗಿಗಳ ಸಂಖ್ಯೆ ಕೂಡ ಹೆಚ್ಚಾಗಿಯೇ ಇದ್ದವು. 108 ಸಹಾಯವಾಣಿ ಮೂಲಕ ಸಾಮಾನ್ಯವಾಗಿ ದಿನದಲ್ಲಿ 28 ರೋಗಿಗಳು ಆಸ್ಪತ್ರೆಗೆ ದಾಖಲಾಗುತ್ತಿದ್ದರು. ಆದರೆ, ಗುರುವಾರ ಒಂದೇ ದಿನದಲ್ಲಿ 48 ರೋಗಿಗಳು ದಾಖಲಾಗಿದ್ದಾರೆಂದು ತಿಳಿಸಿದ್ದಾರೆ. 
ರೋಗಿಗಳಿಗೆ ಚಿಕಿತ್ಸೆ ನೀಡಲು ಆಡಳಿತ ಮಂಡಳಿ ವಿಶೇಷ ವ್ಯವಸ್ಥೆಗಳನ್ನೂ ಕೂಡ ಮಾಡಿಕೊಂಡಿತ್ತು. ರಜೆ ಪಡೆದುಕೊಂಡು ಹೋಗಿದ್ದ ಎಲ್ಲಾ ನರ್ಸ್ ಗಳನ್ನು ಕರ್ತವ್ಯಕ್ಕೆ ಹಾಜರಾಗುವಂತೆ ತಿಳಿಸಲಾಗಿತ್ತು. ಇದಲ್ಲದೆ ನರ್ಸಿಂಗ್ ವಿದ್ಯಾರ್ಥಿಗಳನ್ನು ಈ ವೇಳೆ ಬಳಕೆ ಮಾಡಿಕೊಂಡೆವು ಎಂದು ವಿಕ್ಟೋರಿಯಾ ಆಸ್ಪತ್ರೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಆರ್.ಯಶೋಧ ಅವರು ಹೇಳಿದ್ದಾರೆ. 
ಇದಲ್ಲದೆ, ಊಟದ ಸಮಯದಲ್ಲಿಯೂ ಆಸ್ಪತ್ರೆಯನ್ನು ಬಂದ್ ಮಾಡದಂತೆ ತಿಳಿಸಲಾಗಿತ್ತು. ದಿನದಲ್ಲಿ ಹೆಚ್ಚುವರಿಯಾಗಿ ಕೆಲಸ ಮಾಡುವಂತೆಯೂ ಸಿಬ್ಬಂದಿಗಳಿಗೆ ಸೂಚಿಸಲಾಗಿತ್ತು ಎಂದು ಮಿಂಟೋ ಕಣ್ಣು ಆಸ್ಪತ್ರೆಯ ಹೊರರೋಗಿ ವಿಭಾಗದ ಟಿಕೆಟ್ ಕೌಂಟರ್ ನಲ್ಲಿ ಕೆಲಸ ಮಾಡುವ ಜಯಲಕ್ಷ್ಮಮ್ಮ ಅವರು ಹೇಳಿದ್ದಾರೆ. 
ಪ್ರತೀನಿತ್ಯ ಆಸ್ಪತ್ರೆಗೆ 300 ರೋಗಿಗಳು ಬರುವುದು ಸಾಮಾನ್ಯವಾಗಿತ್ತು. ಆದರೆ, ಗುರುವಾರ 477 ರೋಗಿಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರತಿಭಟನೆ ಕುರಿತು ಮಾಹಿತಿ ಇಲ್ಲದ ಜನರು ಸಂಕಷ್ಟಕ್ಕೆ ಸಿಲುಕಿಕೊಂಡಿದ್ದರು. ಎಂದು ನಿಮ್ಹಾನ್ಸ್ ಆಸ್ಪತ್ರೆಯ ವೈದ್ಯ ಬಿ.ಎನ್. ಗಂಗಾಧರ್ ಅವರು ತಿಳಿಸಿದ್ದಾರೆ. 
ಹಲವು ದಿನಗಳಿಂದಲೂ ನನ್ನ ಪತ್ನಿ ಜ್ವರದಿಂದ ಬಳಲುತ್ತಿದ್ದು, ಮನೆಯ ಹತ್ತಿರದಲ್ಲಿರುವ ಕ್ಲಿನಿಕ್ ಕರೆದುಕೊಂಡು ಹೋಗಿದ್ದೆ. ಆದರೆ, ಕ್ಲಿನಿಕ್ ಬಂದ್ ಆಗಿತ್ತು ಹೀಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಬಂದಿದ್ದೇವೆಂದು ಚಂದ್ರ ಲೇ ಔಟ್ ನಿವಾಸಿ ಕೃಷ್ಣ ಮೋಹನ್ ಎಂಬುವವರು ಹೇಳಿಕೊಂಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.