ಸಚಿವ ರಮೇಶ್ ಕುಮಾರ್ ದಿಢೀರ್ ಅಸ್ವಸ್ಥ, ಬಳಿಕ ಚೇತರಿಕೆ
ಕಳೆದ ಒಂದು ವಾರದಿಂದ ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನದಲ್ಲಿ ಭಾಗವಹಿಸಿದ್ದ ರಾಜ್ಯ ಆರೋಗ್ಯ ಸಚಿವ ರಮೇಶ್ ಕುಮಾರ್ ಅವರ ಆರೋಗ್ಯದಲ್ಲಿ ಶನಿವಾರ ದಿಢೀರ್ ಏರುಪೇರು ಕಂಡಿ ಬಂದಿತ್ತು. ಕೆಲ ಸಮಯದ...

Published On :
ಕೋಲಾರ: ಕಳೆದ ಒಂದು ವಾರದಿಂದ ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನದಲ್ಲಿ ಭಾಗವಹಿಸಿದ್ದ ರಾಜ್ಯ ಆರೋಗ್ಯ ಸಚಿವ ರಮೇಶ್ ಕುಮಾರ್ ಅವರ ಆರೋಗ್ಯದಲ್ಲಿ ಶನಿವಾರ ದಿಢೀರ್ ಏರುಪೇರು ಕಂಡಿ ಬಂದಿತ್ತು. ಕೆಲ ಸಮಯದ ಬಳಿಕ ಚೇತರಿಸಿಕೊಂಡರು.
ಖಾಸಗಿ ಕಾರ್ಯಕ್ರಮಕ್ಕೆ ನಿನ್ನೆ ಸಂಜೆ ಹಾಜರಾಗಿದ್ದ ರಮೇಶ್ ಕುಮಾರ್ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದಿತ್ತು. ಕಾರ್ಯಕ್ರಮಕ್ಕೆ ಹಾಜರಾದ ಕೆಲ ನಿಮಿಷಗಳ ಬಳಿಕ ಸಚಿವರಿಗೆ ವಾಂತಿಯಾಗಿದೆ. ಬಳಿಕ ಶ್ರೀನಿವಾಸಪುರದಲ್ಲಿರುವ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆಕೊಡಿಸಲಾಗಿದೆ ಎಂದು ತಿಳಿದುಬಂದಿದೆ.
ಸಚಿವರಿಗೆ ಚಿಕಿತ್ಸೆ ನೀಡಿದ ವೈದ್ಯರು ಮಾತನಾಡಿ, ವಿಶ್ರಾಂತಿ ಇಲ್ಲದೆಯೇ ಕೆಲಸ ಮಾಡಿರುವುದರಿಂದ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದೆ. ಪ್ರಸ್ತುತ ಸಚಿವರ ಆರೋಗ್ಯವಾಗಿದ್ದು, ವಿಶ್ರಾಂತಿಯ ಅಗತ್ಯವಿರುವ ಹಿನ್ನಲೆಯಲ್ಲಿ ಬೆಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಂತೆ ಸಲಹೆ ನೀಡಲಾಗಿದೆ ಎಂದು ಹೇಳಿದ್ದಾರೆ.
ಸಚಿವ ರಮೇಶ್ ಅವರು ಸಂಪೂರ್ಣವಾಗಿ ಚೇತರಿಸಿಕೊಳ್ಳುವವರೆಗೂ ಬೌರಿಂಗ್ ಆಸ್ಪತ್ರೆಯಲ್ಲಿಯೇ ದಾಖಲು ಮಾಡುವುದಾಗಿ ಕುಟುಂಬದ ಮೂಲಗಳು ಮಾಹಿತಿ ನೀಡಿದೆ.
ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿ ಭಾಗಿಯಾಗಿದ್ದ ಅವರಿಗೆ ಖಾಸಗಿ ವೈದ್ಯರ ಪ್ರತಿಭಟನೆ ದೊಡ್ಡ ತಲೆನೋವಾಗಿ ಪರಿಣಮಿಸಿತ್ತು. ಇದೇ ಒತ್ತಡದಿಂದಾಗಿ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದೆ ಎಂದು ರಮೇಶ್ ಅವರ ಆಪ್ತರು ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


