ವೈದ್ಯರು ಮುಷ್ಕರ ಹಿಂಪಡೆದ ಬೆನ್ನಲ್ಲೇ ಖಾಸಗಿ ಅಸ್ಪತ್ರೆಗಳತ್ತ ಮುಖ ಮಾಡಿದ ರೋಗಿಗಳು
ವೈದ್ಯರು ಪ್ರತಿಭಟನೆ ಹಿಂದಕ್ಕೆ ಪಡೆದುಕೊಳ್ಳುತ್ತಿದ್ದಂತೆಯೇ ಖಾಸಗಿ ಆಸ್ಪತ್ರೆಯತ್ತ ಮುಖ ಮಾಡುತ್ತಿರುವ ರೋಗಿಗಳು ವೈದ್ಯಕೀಯ ಸಲಹೆಯ ವಿರುದ್ಧವಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯನ್ನು...

Published On :
ಹುಬ್ಬಳ್ಳಿ: ವೈದ್ಯರು ಪ್ರತಿಭಟನೆ ಹಿಂದಕ್ಕೆ ಪಡೆದುಕೊಳ್ಳುತ್ತಿದ್ದಂತೆಯೇ ಖಾಸಗಿ ಆಸ್ಪತ್ರೆಯತ್ತ ಮುಖ ಮಾಡುತ್ತಿರುವ ರೋಗಿಗಳು ವೈದ್ಯಕೀಯ ಸಲಹೆಯ ವಿರುದ್ಧವಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯನ್ನು ತೊರೆಯುತ್ತಿದ್ದಾರೆಂದು ತಿಳಿದುಬಂದಿದೆ.
ಕೆಪಿಎಂಇ ಕಾಯ್ದೆಗೆ ತೀವ್ರ ವಿರೋಧ ವ್ಯಕ್ತಪಡಿಸಿ 4 ದಿನಗಳ ಕಾಲ ಸುದೀರ್ಘ ಪ್ರತಿಭಟನೆಗಳನ್ನು ನಡೆಸಿದ್ದ ಖಾಸಗಿ ವೈದ್ಯರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ ಬಳಿಕ ಪ್ರತಿಭಟನೆಗಳನ್ನು ಹಿಂದಕ್ಕೆ ಪಡೆದುಕೊಂಡಿದ್ದರು. ವೈದ್ಯರು ಪ್ರತಿಭಟನೆಯನ್ನು ಹಿಂದಕ್ಕೆ ಪಡೆದುಕೊಳ್ಳುತ್ತಿದ್ದಂತೆಯೇ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿ ಸುಮಾರು 153 ರೋಗಿಗಳು ವೈದ್ಯಕೀಯ ಸಲಹೆಯ ಬಳಿಕವೂ ಆಸ್ಪತ್ರೆಯಿಂದ ಹೊರನಡೆದಿದ್ದಾರೆಂದು ತಿಳಿದುಬಂದಿದೆ.
ಶುಕ್ರವಾರ ಬೆಳಿಗ್ಗೆ 8 ಯಿಂದ 11.30ರವರೆಗೂ ಸುಮಾರು 153 ರೋಗಿಗಳು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆಂದು ಮೂಲಗಳು ತಿಳಿಸಿವೆ.
ಆಸ್ಪತ್ರೆಯಲ್ಲಿ ಕರ್ತವ್ಯ ಮುಗಿಸಿದ ವೈದ್ಯರು ಉಳಿದ ಸಂದರ್ಭಗಳಲ್ಲಿ ಖಾಸಗಿಯಾಗಿ ಕ್ಲಿನಿಕ್ ಹಾಗೂ ನರ್ಸಿಂಗ್ ಹೋಂಗಳನ್ನು ನಡೆಸುತ್ತಿದ್ದು, ಕಿಮ್ಸ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡುವ ವೈದ್ಯರು ಉತ್ತಮ ಚಿಕಿತ್ಸೆಗಾಗಿ ತಮ್ಮ ಕ್ಲಿನಿಕ್ ಹಾಗೂ ನರ್ಸಿಂಗ್ ಹೋಂಗಳಿಗೆ ದಾಖಲಾಗುವಂತೆ ಸಲಹೆಗಳನ್ನು ನೀಡುತ್ತಾರೆ. ವೈದ್ಯರು ಪ್ರತಿಭಟನೆ ನಡೆಸುತ್ತಿರುವ ಹಿನ್ನಲೆಯಲ್ಲಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದ ರೋಗಿಗಳು, ವೈದ್ಯರು ಮುಷ್ಕರವನ್ನು ಹಿಂದಕ್ಕೆ ಪಡೆದುಕೊಂಡ ಬಳಿಕ ಆಸ್ಪತ್ರೆಯನ್ನು ತೊರೆಯುತ್ತಿದ್ದಾರೆಂಬ ಆರೋಪಗಳು ಕೇಳಿ ಬರತೊಡಗಿವೆ.
ಮತ್ತೊಂದು ಆರೋಪಗಳ ಪ್ರಕಾರ, ವೈದ್ಯರು ಮುಷ್ಕರ ಕೈಗೊಂಡ ಹಿನ್ನಲೆಯಲ್ಲಿ ಖಾಸಗಿ ಆಸ್ಪತ್ರೆಗಳಿಗೆ ಭಾರೀ ಹೊಡೆತ ಬಿದ್ದಿದೆ. ಹೀಗಾಗಿ ತಮಗಾಗಿರುವ ನಷ್ಟವನ್ನು ಸರಿಪಡಿಸಿಕೊಳ್ಳಲು ರೋಗಿಗಳ ಮನವೊಲಿಸಿ ತಮ್ಮ ಆಸ್ಪತ್ರೆಗಳಿಗೆ ದಾಖಲಾಗುವಂತೆ ವೈದ್ಯರು ತಿಳಿಸುತ್ತಿದ್ದಾರೆಂದು ಹೇಳಲಾಗುತ್ತಿದೆ.
ಖಾಸಗಿ ವೈದ್ಯರು ಪ್ರತಿಭಟನೆ ಕೈಗೊಂಡ ಹಿನ್ನಲೆಯಲ್ಲಿ ರೋಗಿಗಳು ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಇದರಲ್ಲಿ ಕಿಮ್ಸ್ ಆಸ್ಪತ್ರೆಯ ದೊಡ್ಡತನವೇನೂ ಇಲ್ಲ. ಕಿಮ್ಸ್ ಜನರ ನಂಬಿಕೆಯನ್ನು ಕಳೆದುಕೊಂಡಿದೆ. ಉತ್ತಮ ಚಿಕಿತ್ಸೆಯನ್ನು ಪಡೆಯಲು ಇಚ್ಛಿಸುವವರು ಕಿಮ್ಸ್ ಆಸ್ಪತ್ರೆಗೆ ಹೋಗುವುದಿಲ್ಲ. ರೋಗಿಗಳ ಮನವೊಲಿಸುವ ಅಗತ್ಯ ವೈದ್ಯರಿಗಿಲ್ಲ. ನಮ್ಮ ಆಸ್ಪತ್ರೆಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ವೈದ್ಯರು ಹೇಳಿಕೊಂಡಿದ್ದಾರೆ.
ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಕಿಮ್ಸ್ ಆಸ್ಪತ್ರೆಯ ನಿರ್ದೇಶಕರಾದ ಡಾ.ಡಿಡಿ ಬಂತ್ ಅವರು, ಬಡವರಿಗಾಗಿಯೇ ಕಿಮ್ಸ್ ಆಸ್ಪತ್ರೆಯಿದ್ದು, ಬಡತನ ಹಿನ್ನಲೆಯುಳ್ಳವರೇ ಆಸ್ಪತ್ರೆ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ಆಸ್ಪತ್ರೆಯಲ್ಲಿ ಬಿಡುಗಡೆಯಾಗುವ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿರುವುದರ ಬಗ್ಗೆ ನಾನು ಯಾವುದೇ ರೀತಿಯ ಪ್ರತಿಕ್ರಿಯೆಗಳನ್ನು ನೀಡುವುದಿಲ್ಲ. ಇದು ನನ್ನ ನೀತಿಗಳಿಗೆ ವಿರುದ್ಧವಾದದ್ದು. ಸಾರ್ವಜನಿಕರಿಗೆ ಸೇವೆ ಸಲ್ಲಿಸುವ ಗುರಿಯನ್ನು ಕಿಮ್ಸ್ ಹೊಂದಿದೆ. ಪರಿಸ್ಥಿತಿಯನ್ನು ನಾವು ಉತ್ತಮವಾಗಿ ನಿಭಾಯಿಸಿದ್ದೇವೆ. ನಮ್ಮ ಕಾರ್ಯದಿಂದ ನಾವು ತೃಪ್ತಿಪಟ್ಟುಕೊಂಡಿದ್ದೇವೆಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


