ಕೊಪ್ಪಳ: ಅಂಜನಾದ್ರಿ ದೇವಸ್ಥಾನದ ಮುಖ್ಯ ಅರ್ಚಕನ ವಿರುದ್ಧ ಲೈಂಗಿಕ ಕಿರುಕುಳ ಆರೋಪ, ಸೇವೆಯಿಂದ ವಜಾ
ಕೊಪ್ಪಳ ಜಿಲ್ಲೆ ಗಂಗಾವತಿ ತಾಲ್ಲೂಕಿನ ಅಂಜನಾದ್ರಿ ಬೆಟ್ಟದ ಆಂಜನೇಯ ದೇವಸ್ಥಾನದ ಮುಖ್ಯ ಅರ್ಚಕ ವಿದ್ಯಾದಾಸ ಬಾಬಾವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದೆ.

Published On :
ಕೊಪ್ಪಳ: ಕೊಪ್ಪಳ ಜಿಲ್ಲೆ ಗಂಗಾವತಿ ತಾಲ್ಲೂಕಿನ ಅಂಜನಾದ್ರಿ ಬೆಟ್ಟದ ಆಂಜನೇಯ ದೇವಸ್ಥಾನದ ಮುಖ್ಯ ಅರ್ಚಕ ವಿದ್ಯಾದಾಸ ಬಾಬಾವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದೆ. ದೇವಸ್ಥಾನದಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಈತ ಲೈಂಗಿಕ ಕಿರುಕುಳ ನಿಡುತ್ತಿದ್ದ ಎನ್ನಲಾಗಿದೆ.
ದೇವಸ್ಥಾನದ ಹಣವನ್ನು ಅಕ್ರಮವಾಗಿ ಬಳಸಿಕೊಂಡದ್ದು, ಲೈಂಗಿಕ ಕಿರುಕುಳ ಸೇರಿ ವಿವಿಧ ಆರೋಪ ಹೊತ್ತಿರುವ ಈತನನ್ನು ದೇವಸ್ಥಾನದ ಟ್ರಸ್ಟ್ ಕೆಲಸದಿಂದ ಕಿತ್ತು ಹಾಕಿದೆ. ಟ್ರಸ್ಟ್ ಅಧ್ಯಕ್ಷ ರಾಜಾ ನರಸಿಂಹ ದೇವರಾಯುಲು ಮತ್ತು ಮಾಜಿ ಶಾಸಕ ಶ್ರೀರಂಗ ವರಾಯುಲಾ ಅವರು ಅರ್ಚಕನ ನಿಕಟವರ್ತಿ ತುಲಸಿ ದಾಸ್ ಸಹ ಅನೈತಿಕ ಮತ್ತು ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು.ಆತನನ್ನೂ ಸಹ 2009ರಲ್ಲಿ ಸೇವೆಯಿಂದ ಕಿತ್ತು ಹಾಕಲಾಗಿತ್ತು ಎಂದು ಅವರು ತಿಳಿಸಿದರು.
ಏತನ್ಮಧ್ಯೆ, ಅರ್ಚಕ, ಮಹಿಲಾ ಮಹಿಳಾ ಸಹೋದ್ಯೋಗಿಗಳೊಡನೆ ಸ್ನಾನಕ್ಕಿಳಿಯುವಂತೆ ಪುಸಲಾಯಿಸುತ್ತಿರುವ ಅಸಭ್ಯ ವರ್ತನೆಯ ದೃಶ್ಯವಿರುವ ವೀಡಿಯೋ ಕ್ಲಿಪ್ ಮತ್ತು ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ಕಾಣಿಸಿಕೊಂಡವು. ಆದರೆ ಇದೇ ವೇಳೆ ವಿದ್ಯಾದಾಸ ಬಾಬಾ ಮಾತ್ರ ನಾನು ನಿರಪರಾಧಿ, ನಕಲಿ ವೀಡಿಯೋ ಹಾಗೂ ಫೋಟೋಗಳನ್ನು ಸಾಮಾಜಿಕ ತಾಣಗಳಲ್ಲಿ ಹರಿಬಿಟ್ಟು ನನ್ನ ವಿರುದ್ಧ ಸುಳ್ಳು ಆರೋಪ ಹೊರಿಸಲಾಗಿದೆ ಎಂದು ಕೊಪ್ಪಳದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.
ತನ್ನ ವಿರುದ್ಧ ಪಿತೂರಿ ನಡೆಸಿ ಸುಳ್ಳು ಆರೋಪ ಹೊರಿಸಿದವರ ವಿರುದ್ಧ ಹೋರಾಟ ನಡೆಸುವುದಾಗಿ ವಿದ್ಯಾದಾಸ ಬಾಬಾ ಎಚ್ಚರಿಸಿದ್ದಾರೆ. ಆದಾಗ್ಯೂ, ಗಾಂಧವತಿ ಗ್ರಾಮೀಣ ಪಿಎಸ್ಐ ಪ್ರಕಾಶ್ ಮಾಲಿ, ಪ್ರಕರಣ ಸಂಬಂಧ ಇದುವರೆಗೆ ಯಾವ ದೂರುಗಳೂ ದಾಖಲಾಗಿಲ್ಲ ಎಂದು ಎಕ್ಸ್ ಪ್ರೆಸ್ ಗೆ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Koppalಲೈಂಗಿಕ ಕಿರುಕುಳSexual harassmentGangavatiAnjanadri hill Anjaneya templechief priest of Anjaneya templeಅಂಜನಾದ್ರಿ ಬೆಟ್ಟದ ಆಂಜನೇಯ ದೇವಸ್ಥಾನಆಂಜನೇಯ ದೇವಾಲಯದ ಮುಖ್ಯ ಅರ್ಚಕ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


