ಕಲಬುರಗಿ: ಟ್ರಾಕ್ಟರ್ ಗೆ ಕಾರು ಡಿಕ್ಕಿಯಾಗಿ ವಕೀಲರಿಬ್ಬರ ಸಾವು
ವೇಗವಾಗಿ ಬಂದ ಕಾರೊಂದು ಟ್ರ್ಯಾಕ್ಟರ್ ಗೆ ಗುದ್ದಿದ ಪರಿಣಾಮ ಇಬ್ಬರು ವಕೀಲರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬುಧವಾರ ಕಲಬುರಗಿಯಲ್ಲಿ ನಡೆದಿದೆ.

Published On :
ಕಲಬುರಗಿ: ವೇಗವಾಗಿ ಬಂದ ಕಾರೊಂದು ಟ್ರ್ಯಾಕ್ಟರ್ ಗೆ ಗುದ್ದಿದ ಪರಿಣಾಮ ಇಬ್ಬರು ವಕೀಲರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬುಧವಾರ ಕಲಬುರಗಿಯಲ್ಲಿ ನಡೆದಿದೆ.
ಕಲಬುರಗಿಯ ಅಫ್ಜಲ್ ಪುರ ತಾಲ್ಲೂಕಿನ ಮಲ್ಲಾಬಾದ್ ಕ್ರಾಸ್ ಬಳಿ ಈ ಅಪಘಾತವಾಗಿದ್ದು, ಮೃತರನ್ನು ಶ್ರೀರಂಗ ಖೇಡ್ಕರ್ ಹಾಗೂ ರಮೇಶ್ ದೊಡ್ಡಮನಿ ಎಂದು ಗುರುತಿಸಲಾಗಿದೆ. ಅಪಘಾತದ ಬಗ್ಗೆ ಅಫ್ಜಲ್ ಪುರ ವೃತ್ತ ನಿರೀಕ್ಷಕ ಜೆ ಹೆಚ್ ಇನಾಮ್ದಾರ್ ಅವರು ಮಾಹಿತಿ ನೀಡಿದ್ದು, ವಕೀಲರು ತಮ್ಮ ಕಕ್ಷೀದಾರರನ್ನು ಕರೆತರುವಾಗ ಕಾರು ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಗೆ ಡಿಕ್ಕಿಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಇಬ್ಬರು ವಕೀಲರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಕಕ್ಷೀದಾರರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕಲಬುರಗಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಅಂತೆಯೇ ಅಪಘಾತಕ್ಕೆ ಅತಿಯಾದ ವೇಗವೇ ಕಾರಣ ಎಂದು ತಿಳಿದುಬಂದಿದ್ದು, ಅಪಘಾತದ ಸಂದರ್ಭದಲ್ಲಿ ಕಾರು ಸುಮಾರು 140 ಕಿ.ಮೀ ವೇಗದಿಂದ ಬರುತ್ತಿತ್ತು. ಪ್ರಸ್ತುತ ಅಫ್ಜಲ್ ಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ಮುಂದುವರೆಸಲಾಗಿದೆ ಎಂದು ತಿಳಿಸಿದ್ದಾರೆ.
ನಿನ್ನೆಯಷ್ಟೇ ಇದೇ ಕಲಬುರಗಿಯಲ್ಲಿ ಕ್ರೂಸರ್ ವಾಹನ ಇಂಧನ ಟ್ಯಾಂಕರ್ ಗೆ ಗುದ್ದಿದ ಪರಿಣಾಮ ಕ್ರೂಸರ್ ನಲ್ಲಿದ್ದ 5 ಮಂದಿ ಸಾವನ್ನಪ್ಪಿದ್ದರು. ಕ್ರೂಸರ್ ನಲ್ಲಿದ್ದವೆರಲ್ಲರೂ ಮದುವೆಗೆ ತೆರಳುತ್ತಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


