ರಾಜ್ಯ

ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ: ಡಿಸೆಂಬರ್ ನಿಂದ ಹೆಚ್ಚು ಬೋಗಿ ಅಳವಡಿಸಲು ಸರ್ಕಾರ ನಿರ್ಧಾರ

ಡಿಸೆಂಬರ್ ತಿಂಗಳ ಬಳಿಕ ನಮ್ಮ ಮೆಟ್ರೋ ಬೋಗಿಗಳ ಸಂಖ್ಯೆಯನ್ನು ಹೆಚ್ಚಿಸುತ್ತೇವೆಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಅವರು ಗುರುವಾರ ಹೇಳಿದ್ದಾರೆ...

ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ: ಡಿಸೆಂಬರ್ ನಿಂದ ಹೆಚ್ಚು ಬೋಗಿ ಅಳವಡಿಸಲು ಸರ್ಕಾರ ನಿರ್ಧಾರ
ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್
Published On :
ಬೆಳಗಾವಿ: ಡಿಸೆಂಬರ್ ತಿಂಗಳ ಬಳಿಕ ನಮ್ಮ ಮೆಟ್ರೋ ಬೋಗಿಗಳ ಸಂಖ್ಯೆಯನ್ನು ಹೆಚ್ಚಿಸುತ್ತೇವೆಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಅವರು ಗುರುವಾರ ಹೇಳಿದ್ದಾರೆ. 
ಮೇಲ್ಮನೆಯಲ್ಲಿ ಕಾಂಗ್ರೆಸ್ ಸದಸ್ಯೆ ವೀಣಾ ಅಚ್ಚಯ್ಯ ಪ್ರಶ್ನೆಗೆ ಉತ್ತರ ನೀಡಿರುವ ಅವರು, ಬೆಳಿಗ್ಗೆ ಮತ್ತು ಸಂಜೆ ಪ್ರತಿ 6 ನಿಮಿಷಕ್ಕೊಂದು ರೈಲು ಸಂಚಿಸುತ್ತಿವೆ. ಈ ವೇಳೆ ಜನದಟ್ಟಣೆ ಹೆಚ್ಚಾಗಿರುವುದರಿಂದ ಮಹಿಳೆಯರು, ಮಕ್ಕಳು, ವೃದ್ಧರು ಮತ್ತು ಅಂಗವಿಕರಿಗೆ ತೊಂದರೆಯಾಗುತ್ತಿತ್ತು. ಇದನ್ನು ಮನಗಂಡು 4 ನಿಮಿಷಕ್ಕೊಂದು ರೈಲು ಸಂಚರಿಸುವ ವ್ಯವಸಥೆ ಮಾಡಲಾಗಿದೆ. ಶೀಘ್ರದಲ್ಲಿಯೇ ಇದನ್ನು 3 ನಿಮಿಷಕ್ಕೊಂದು ರೈಲು ಸಂಚರಿಸುವ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. 
ರೈಲು ಬೋಗಿಗಳ ಹೆಚ್ಚಳಕ್ಕೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಮುಂದಿನ ತಿಂಗಳಿನಿಂದ ಹೆಚ್ಚುವರಿ ಬೋಗಿಗಳ ತಯಾರಿ ಕಾರ್ಯ ಆರಂಭಗೊಳ್ಳಲಿದೆ. 150 ಬೋಗಿಗಳ ತಯಾರಿಕೆಗೆ ಹಣವನ್ನು ಪಾವತಿ ಮಾಡಲಾಗಿದೆ. ಮುಂದಿನ ವರ್ಷದ ಡಿಸೆಂಬರ್ ವೇಳೆಗೆ ಹೆಚ್ಚುವರಿ ಬೋಗಿಗಳು ಮೆಟ್ರೋಗೆ ಅಳವಡಿಕೆಯಾಗಲಿದೆ ಎಂದು ತಿಳಿಸಿದ್ದಾರೆ. 
ಬಳಿಕ ಮೆಟ್ರೋದಲ್ಲಿ ಕನ್ನಡಿಗರ ಮೇಲಿನ ದೌರ್ಜನ್ಯ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಬಿಎಂಆರ್'ಸಿಎಲ್ ನಲ್ಲಿ ಕೆಲಸ ಮಾಡುತ್ತಿರುವ ಕನ್ನಡಿಗರ ಮೇಲೆ ದೌರ್ಜನ್ಯವೆಸಗುವುದನ್ನು ಸರ್ಕಾರ ಸಹಿಸುವುದಿಲ್ಲ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.