ಕಲಬುರ್ಗಿ: ಟಂಟಂ-ಕಾರ್ ಮುಖಾಮುಖಿ ಡಿಕ್ಕಿ, ಇಬ್ಬರ ಸಾವು, ಐವರಿಗೆ ಗಾಯ
ಕಾರ್ ಮತ್ತು ಟಂಟಂ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಸತ್ತು ಐವರು ಗಾಯಗೊಂಡಿರುವ ಘಟನೆ ಕಲಬುರ್ಗಿ ಜಿಲ್ಲೆ ಅಫಜಲಪೂರದಲ್ಲಿ ನಡೆದಿದೆ.

Published On :
ಕಲಬುರ್ಗಿ: ಕಾರ್ ಮತ್ತು ಟಂಟಂ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಸತ್ತು ಐವರು ಗಾಯಗೊಂಡಿರುವ ಘಟನೆ ಕಲಬುರ್ಗಿ ಜಿಲ್ಲೆ ಅಫಜಲಪೂರದಲ್ಲಿ ನಡೆದಿದೆ. ಅಫಜಲಪೂರನ ಚವಡಾಪೂರ ಗ್ರಾಮದ ಬಳಿ ಈ ಘಟನೆ ಸಂಭವಿಸಿದ್ದು ಟಂಟಂನಲ್ಲಿದ್ದ ಈರಯ್ಯ(34) ಮತ್ತು ಮಹೇಶ ಶೆಟ್ಟಿ (36) ಸಾವನ್ನಪ್ಪಿದ್ದಾರೆ.
ಇನ್ನು ಇದೇ ಘಟನೆಯಲ್ಲಿ ಗಾಯಗೊಂಡ ಐವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಂಜಾನೆ ಕಲಬುರ್ಗಿಯಿಂದ ಚಿನ್ಮಯಗಿರಿ ದೇವಸ್ಥಾನದ ಜಾತ್ರೆಗೆ ಹೊರಟಿದ್ದ ಸಮಯ ಈ ಅವಘಡ ಸಂಭವಿಸಿದ್ದು ಪ್ರಕರಣ ಸಂಬಂಧ ಗಾಣಗಾಪೂರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಇಬ್ಬರ ಸಾವುಕಲಬುರ್ಗಿgulbargaTwo persons killedTam-Tam car collidedAfzalpurಟಂಟಂ-ಕಾರು ಡಿಕ್ಕಿಅಫ್ಝಲ್ಪುರ್ಅಫಜಲಪೂರ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


