ಪಂಚಾಯಿತಿ ಆದೇಶ: ವಿಷ ಹಾಕಿ 150 ಬೀದಿ ನಾಯಿಗಳ ಸಾಮೂಹಿಕ ಹತ್ಯೆ
ಪಂಚಾಯಿತಿ ಆದೇಶದ ಮೇಲೆಗೆ 150 ಬೀದಿ ನಾಯಿಗಳಿಗೆ ವಿಷ ಹಾಕಿ ಸಾಮೂಹಿಕವಾಗಿ ಹತ್ಯೆ ಮಾಡಿರುವ ಘಟನೆಯೊಂದು ದಾವಣಗೆರೆ ಜಿಲ್ಲೆಯ ಬೆಳಗುಟ್ಟಿ ಎಂಬ ಗ್ರಾಮದಲ್ಲಿ ನಡೆದಿದೆ...

Published On :
ದಾವಣಗೆರೆ: ಪಂಚಾಯಿತಿ ಆದೇಶದ ಮೇಲೆಗೆ 150 ಬೀದಿ ನಾಯಿಗಳಿಗೆ ವಿಷ ಹಾಕಿ ಸಾಮೂಹಿಕವಾಗಿ ಹತ್ಯೆ ಮಾಡಿರುವ ಘಟನೆಯೊಂದು ದಾವಣಗೆರೆ ಜಿಲ್ಲೆಯ ಬೆಳಗುಟ್ಟಿ ಎಂಬ ಗ್ರಾಮದಲ್ಲಿ ನಡೆದಿದೆ.
ಬೀದಿ ನಾಯಗಿಗಳಿಗೆ ವಿಷಯುಕ್ತ ಇಂಜೆಕ್ಷನ್ ನೀಡಿ ಸಾಮೂಹಿಕವಾಗಿ ಹತ್ಯೆ ಮಾಡಿರುವ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡತೊಡಗಿದ್ದು, ವಿಡಿಯೋವಿಗೆ ಸಾಕಷ್ಟು ಟೀಕೆ ಹಾಗೂ ಆಕ್ರೋಶಗಳು ವ್ಯಕ್ತವಾಗತೊಡಗಿವೆ.
ನಾಯಿಗಳ ಹತ್ಯೆ ಹೀನ ಕೃತ್ಯ. ನಾಯಿಗಳನ್ನು ಸಾಮೂಹಿಕವಾಗಿ ಹತ್ಯೆ ಮಾಡಲಾಗಿತ್ತು. ಬಳಿಕ ಸುಡಲಾಗಿದೆ. ಆದರೆ, ವಿಷ ಹಾಕಿರುವ ಕಾರಣ ಕೆಲ ನಾಯಿಗಳ ಸಂಪೂರ್ಣವಾಗಿ ದಹನವಾಗಿಲ್ಲ. 80 ನಾಯಿಗಳ ಮೃತದೇಹಗಳನನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಬೀದಿ ನಾಯಿ ಮುಕ್ತ ಗ್ರಾಮವಾಗಿಸುವ ಉದ್ದೇಶದಿಂದ ಪಂಚಾಯಿತಿ ಸದಸ್ಯರು ಈ ರೀತಿಯ ಆದೇಶವನ್ನು ನೀಡಿದ್ದಾರೆಂದು ಕಾಂಪ್ಯಾಶನ್ ಅನ್'ಲಿಮಿಟೆಡ್ ಪ್ಲಸ್ ಆ್ಯಕ್ಷನ್ (ಸಿಯುಪಿಎ) ಸಹಯೋಗದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಪ್ರಾಣಿ ಕಲ್ಯಾಣ ಅಧಿಕಾರಿ ಕೆ.ಬಿ. ಹರೀಶ್ ಅವರು ಹೇಳಿದ್ದಾರೆ.
ರಾತ್ರಿ ವೇಳೆಯಲ್ಲಿ ಮಕ್ಕಳು, ಮಹಿಳೆ ಹಾಗೂ ಹಸುಗಳ ಮೇಲೆ ನಾಯಿಗಳು ದಾಳಿ ಮಾಡುತ್ತಿದ್ದು, ನಾಯಿಗಳ ಕಾಟವನ್ನು ತಪ್ಪಿಸುವ ಸಲುವಾಗಿ ಗ್ರಾಮ ಪಂಚಾಯಿತಿ ಈ ರೀತಿಯ ಕಠಿಣ ನಿರ್ಧಾರ ತೆಗೆದುಕೊಂಡಿತ್ತು ಎಂದುಮೂಲಗಳು ಮಾಹಿತಿ ನೀಡಿವೆ.
ಪ್ರಕರಣ ಸಂಬಂಧ ಹೇಳಿಕೆ ನೀಡಿರುವ ಸಬ್ ಇನ್ಸ್ ಪೆಕ್ಟರ್ ಹನುಮಂತಪ್ಪ ಅವರು, ನಾಯಿಗಳ ದಾಳಿಗಳು ಕುರಿತಂತೆ ಸಾಕಷ್ಟು ಪ್ರಕರಣಗಳು ದಾಖಲಾಗಿವೆ ಎಂದು ಹೇಳಿದ್ದಾರೆ.
ನಾಯಿಗಳ ಹತ್ಯೆಗೆ ಆಕ್ರೋಶಗಳು ವ್ಯಕ್ತವಾಗುತ್ತಿರುವ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


