ರಾಜ್ಯ

ಯೋಗೇಶ್ ಗೌಡ ಹತ್ಯೆ ಪ್ರಕರಣ: ಸಚಿವರ ವಿರುದ್ಧ ಪ್ರಕರಣ ದಾಖಲಿಸುವಂತೆ ಕುಟುಂಬಸ್ಥರ ಆಗ್ರಹ

ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ವಿನಯ್ ಕುಲಕರ್ಣಿ ಹಾಗೂ ಡಿವೈಎಸ್ಪಿ ತಳಜಪ್ಪ ಸುಲ್ಫಿ ಮತ್ತು ಬಿಪಿ ಚಂದ್ರಶೇಖರ್ ವಿರುದ್ಧ ಪ್ರಕರಣ ದಾಖಲಿಸುವಂತೆ ಕುಟುಂಬಸ್ಥರು ಬುಧವಾರ ಆಗ್ರಹಿಸಿದ್ದಾರೆ...

ಯೋಗೇಶ್ ಗೌಡ ಹತ್ಯೆ ಪ್ರಕರಣ: ಸಚಿವರ ವಿರುದ್ಧ ಪ್ರಕರಣ ದಾಖಲಿಸುವಂತೆ ಕುಟುಂಬಸ್ಥರ ಆಗ್ರಹ
ಬಿಜೆಪಿ ಮುಖಂಡ ಯೋಗೇಶ್ ಗೌಡ
Published On :
ಧಾರವಾಡ: ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ವಿನಯ್ ಕುಲಕರ್ಣಿ ಹಾಗೂ ಡಿವೈಎಸ್ಪಿ ತುಳಜಪ್ಪ ಸುಲ್ಫಿ ಮತ್ತು ಬಿಪಿ ಚಂದ್ರಶೇಖರ್ ವಿರುದ್ಧ ಪ್ರಕರಣ ದಾಖಲಿಸುವಂತೆ ಕುಟುಂಬಸ್ಥರು ಬುಧವಾರ ಆಗ್ರಹಿಸಿದ್ದಾರೆ. 
ಹತ್ಯೆ ಪ್ರಕರಣ ಸಂಬಂಧ ಸಚಿವ ವಿನಯ್ ಕುಲರ್ಣಿ ಹಾಗೂ ಡಿವೈಎಸ್ಪಿ ನಮ್ಮ ಮೇಲೆ ಒತ್ತಡ ಹೇರುತ್ತಿದ್ದು, ಅಧಿಕಾರಿ ಹಾಗೂ ಸಚಿವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳುವಂತೆ ಹತ್ಯೆಯಾದ ಯೋಗೇಶ್ ಅವರ ಸಹೋದರ ಗುರುನಾಥ್ ಗೌಡ ಅವರು ಧಾರವಾಡ ಎಸ್ಪಿ ಸಂಗೀತಾ ಪೀ ಅವರ ಬಳಿ ಮನವಿ ಮಾಡಿಕೊಂಡಿದ್ದಾರೆ. 
ಪ್ರಕರಣ ಸಂಬಂಧ ನಿನ್ನೆ ಧಾರವಾಡ ಎಸ್ಪಿ ಸಂಗೀತಾ ಅವರ ಕಚೇರಿಗೆ ಭೇಟಿ ನೀಡಿರುವ ಗುರುನಾಥ್ ಗೌಡ ಅವರು ಅಧಿಕಾರಿಗಳು ವಿರುದ್ಧ ಪ್ರಕರಣ ದಾಖಲಿಸಿಕೊಳ್ಳುವಂತೆ ಮನವಿ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ. 
ಗುರುನಾಥ್ ಗೌಡ ಹಾಗೂ ಮಲ್ಲಮ್ಮ ಎಂಬುವವರು ಪ್ರಕರಣ ಸಂಬಂಧ ತಮ್ಮನ್ನು ಭೇಟಿ ಮಾಡಿದ್ದು, ಪ್ರಕರಣ ದಾಖಲಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆಂದು ಎಸ್'ಪಿ ಸಂಗೀತಾ ಅವರು ಹೇಳಿದ್ದಾರೆ. 
ಕಳೆದ ವರ್ಷ ಜೂನ್ 15ರಂದು ಬಿಜೆಪಿ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಅವರನ್ನು ಅವರ ಜಿಮ್ ನಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಸಂಬಂಧ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.