ರಾಣಿಬೆನ್ನೂರು: ಹಲಗೇರಿ ಬಳಿ ಭೀಕರ ಅಪಘಾತ, ಆರು ಸಾವು
ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿಯಾಗಿ, ಸ್ಥಳದಲ್ಲೇ ಆರು ಮಂದಿ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲ್ಲೂಕು ಹಲಗೇರಿ ಬಳಿ ನಡೆದಿದೆ.

Published On :
ರಾಣಿಬೆನ್ನೂರು: ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿಯಾಗಿ, ಸ್ಥಳದಲ್ಲೇ ಆರು ಮಂದಿ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲ್ಲೂಕು ಹಲಗೇರಿ ಬಳಿ ನಡೆದಿದೆ. ಇಂದು ಬೆಳಗಿನ ಜಾವ ಈ ಅಪಘಾತ ಸಂಭವಿಸಿದೆ.
ನಾಗರಾಜ ಪೂಜಾರ(24), ನಾಗಮ್ಮ(35), ಗೌರಮ್ಮ(38), ಪೂರ್ಣಿಮಾ(21), ಗಂಗಮ್ಮ(37), ನಾಗಮ್ಮ(39) ಸಾವನ್ನಪ್ಪಿದವರೆಂದು ಗುರುತಿಸಲಾಗಿದೆ.
ಮೃತರು ರಾಣಿಬೆನ್ನೂರು ತಾಲೂಕಿನ ಕುಮಾರಪಟ್ಟಣ, ಮಾಕನೂರು ಮತ್ತು ಕೋಡಿಯಾಲ ಗ್ರಾಮಸ್ಥರು ಎನ್ನಲಾಗಿದ್ದು ಹುಟ್ಟು ಹಬ್ಬಕ್ಕೆಂದು ಸಿಗಂಧೂರಿಗೆ ತೆರಳಿದ್ದರು. ಅಲ್ಲಿಂದ ಹಿಂತಿರುಗುವಾಗ ಈ ಭೀಕರ ಘಟನೆ ನಡೆದಿದೆ.
ಅಪಘಾತದಲ್ಲಿ ಗಾಯಗೊಂದವರನ್ನು ರಾಣಿಬೆನ್ನೂರು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.ಹಲಗೇರಿ ಪೋಲೀಸ್ ಠಾಣೆ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸಿದ್ದಾರೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


