ಕುಡಿತಕ್ಕೆ ದಾಸನಾದ ಪತಿ: ಬೇಸತ್ತು 3 ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ
ಪತಿ ಬಸವರಾಜು ಕುಡಿತಕ್ಕೆ ದಾಸನಾಗಿದ್ದರಿಂದ ಬೇಸತ್ತ ಪತ್ನಿ ಮೂವರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಫರಹತಾಬಾದ್ ನಲ್ಲಿ ನಡೆದಿದೆ...

Published On :
ಕಲಬುರಗಿ: ಪತಿ ಬಸವರಾಜು ಕುಡಿತಕ್ಕೆ ದಾಸನಾಗಿದ್ದರಿಂದ ಬೇಸತ್ತ ಪತ್ನಿ ಮೂವರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಫರಹತಾಬಾದ್ ನಲ್ಲಿ ನಡೆದಿದೆ.
40 ವರ್ಷದ ಜಯಶ್ರೀ ಅವರು ಪತಿಯ ಕುಡಿತಕ್ಕೆ ದಾಸನಾಗಿದ್ದರಿಂದ ಬೇಸತ್ತು ಮಕ್ಕಳಾದ 12 ವರ್ಷದ ಪವಿತ್ರ, 10 ವರ್ಷದ ಸುನೀಲ್ ಹಾಗೂ 5 ವರ್ಷದ ಅನಿಲ್ ಅವರೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸದ್ಯ ಪೊಲೀಸರು ಸ್ಥಳೀಯರ ಸಹಾಯದೊಂದಿಗೆ ಜಯಶ್ರೀ ಅವರ ಮೃತದೇಹವನ್ನು ಮೇಲಕ್ಕೆ ಎತ್ತಿದ್ದು ಮಕ್ಕಳ ಮೃತದೇಹಕ್ಕಾಗಿ ಶೋಧ ಕಾರ್ಯ ಮುಂದುವರೆಸಿದ್ದಾರೆ. ಪ್ರಕರಣ ಪರಹತಾಬಾದ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


