ಶಶಿಕಲಾ ಪೆರೋಲ್ ಅರ್ಜಿ ತಿರಸ್ಕರಿಸಿದ ಕಾರಾಗೃಹ ಇಲಾಖೆ
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿ ಕೆ ಶಶಿಕಲಾ....

Published On :
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿ ಕೆ ಶಶಿಕಲಾ ಅವರ ಪೆರೋಲ್ ಅರ್ಜಿಯನ್ನು ಕಾರಾಗೃಹ ಇಲಾಖೆ ಮಂಗಳವಾರ ತಿರಸ್ಕರಿಸಿದೆ.
ಪತಿಯ ಅನಾರೋಗ್ಯದ ಕಾರಣ ನೀಡಿ 15 ದಿನಗಳ ಕಾಲ ಪೆರೋಲ್ ಮೇಲೆ ಬಿಡುಗಡೆ ಮಾಡುವಂತೆ ಕೋರಿ ಶಶಿಕಲಾ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಲಾಗಿದ್ದು, ಅವರ ವಿರುದ್ಧ ಕ್ರಿಮಿನಲ್ ಪ್ರಕರಣಗಳು ತನಿಖಾ ಹಂತದಲ್ಲಿರುವುದರಿಂದ ಪೆರೋಲ್ ನೀಡಲು ಬರುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅನಾರೋಗ್ಯಕ್ಕೀಡಾಗಿರುವ ಪತಿ ಎಂ. ನಟರಾಜನ್ ಅವರನ್ನು ಭೇಟಿ ಮಾಡುವ ಸಲುವಾಗಿ ವಿ.ಕೆ. ಶಶಿಕಲಾ ಅವರು 15 ದಿನಗಳ ಪೆರೋಲ್ ಮೇಲೆ ಬಿಡುಗಡೆ ಮಾಡುವಂತೆ ನ್ಯಾಯಾಲಯದ ಬಳಿ ಮನವಿ ಮಾಡಿದ್ದಾರೆಂದು ಎಐಎಡಿಎಂಕೆ ಉಚ್ಛಾಟಿತ ನಾಯಕ ಟಿಟಿವಿ ದಿನಕರನ್ ಅವರು ನಿನ್ನೆ ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


