ರಾಜ್ಯ

ರಾಷ್ಟ್ರಪ್ರಶಸ್ತಿ ವಾಪಸ್ ಮಾಡಲ್ಲ: ಪ್ರಕಾಶ್ ರೈ ಸ್ಪಷ್ಟನೆ

ತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ಸಂಬಂಧ ಪ್ರಧಾನಿ ಮೌನ ಪ್ರಶ್ನಿಸಿ ನಟ ಪ್ರಕಾಶ್ ರೈ ನೀಡಿದ್ದ ಹೇಳಿಕೆಯಿಂದಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೋಲ್ ...

ರಾಷ್ಟ್ರಪ್ರಶಸ್ತಿ ವಾಪಸ್ ಮಾಡಲ್ಲ: ಪ್ರಕಾಶ್ ರೈ ಸ್ಪಷ್ಟನೆ
ಪ್ರಕಾಶ್ ರೈ
Published On :
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ಸಂಬಂಧ ಪ್ರಧಾನಿ ಮೌನ ಪ್ರಶ್ನಿಸಿ ನಟ ಪ್ರಕಾಶ್ ರೈ ನೀಡಿದ್ದ ಹೇಳಿಕೆಯಿಂದಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೋಲ್ ಗೊಳಗಾದ ನಂತರ ರೈ ಸ್ಪಷ್ಟನೆ ನೀಡಿದ್ದಾರೆ.
ಟ್ವಿಟ್ಟರ್ ಮತ್ತು ಫೇಸ್ ಬುಕ್ ನಲ್ಲಿ ವಿಡಿಯೋ ಮೂಲಕ ಪ್ರಕಾಶ್ ರೈ ಸ್ಪಷ್ಟನೆ ನೀಡಿದ್ದಾರೆ, ತಮಗೆ ಬಂದಿರುವ ರಾಷ್ಟ್ರ ಪ್ರಶಸ್ತಿಗಳನ್ನು ವಾಪಸ್ ಮಾಡುವಂತ ಮೂರ್ಖ ನಾನಲ್ಲ, ನನ್ನ ಕೆಲಸಕ್ಕೆ ಸಿಕ್ಕಿರುವ ಪ್ರತಿಫಲ, ಪ್ರಶಸ್ತಿ ಬಗ್ಗೆ ನನಗೆ ಹೆಮ್ಮೆಯಿದೆ ಎಂದು ಹೇಳಿದ್ದಾರೆ.
ಸಾಮಾಜಿಕ ಮಾಧ್ಯಮಗಳಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯನ್ನು ಸಂಭ್ರಮಿಸಿದವರು ಪ್ರಧಾನಿ ನರೇಂದ್ರ ಮೋದಿಯವರನ್ನು ಅವರ ಅಧಿಕೃತ ಟ್ವಿಟ್ಟರ್ ನಲ್ಲಿ ಹಿಂಬಾಲಿಸುವವರಾಗಿದ್ದಾರೆ ಎಂದು ಕಿಡಿ ಕಾರಿದ್ದಾರೆ.
ಗೌರಿ ಲಂಕೇಶ್ ಮತ್ತು ಕಲಬುರಗಿ ಅವರನ್ನು ಯಾರು ಕೊಂದರು ಎಂಬುದು ನಮಗೆ ತಿಳಿದಿಲ್ಲ, ಅದನ್ನು ಪತ್ತೆ ಹಚ್ಚಲು ಪೊಲೀಸ್ ಇಲಾಖೆ, ಮತ್ತು ಎಸ್ಐಟಿ ಇದೆ, ಆದರೆ ಯಾರು ಹತ್ಯೆಯನ್ನು ಸಂಭ್ರಮಿಸಿದರು ಎಂಬುದು ತಿಳಿದಿದೆ, ಅದರ ಬಗ್ಗೆ ನನಗೆ ನೋವಿದೆ, ಅದರ ಬಗೆಗಿನ ಅಸಮಾಧಾನ ಹೊರ ಹಾಕಿದ್ದಕ್ಕೆ ನನ್ನ ವಿರುದ್ಧ ನಿಂದನಾತ್ಮಕ ಪದಗಳನ್ನು ಬಳಸಿ ನನ್ನನ್ನು ಟ್ರಾಲ್ ಮಾಡಲಾಗಿದೆ ಎಂದು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಗೌರಿ ಲಂಕೇಶ್ ಹತ್ಯೆಯನ್ನು ಸಂಭ್ರಮಿಸಿದವರ ಟ್ವಿಟ್ಟರ್ ಫಾಲೋಯರ್ ಆಗಿದ್ದಾರೆ, ದೇಶದ ಪ್ರದಾನಿಯಾಗಿ ಈ ಪ್ರಕರಣದ ಬಗ್ಗೆ ಅವರು ಮೌನವಾಗಿರುವುದು ನನಗೆ ನೋವು ತಂದಿದೆ. ನಾನು ಭಯಗೊಂಡಿದ್ದೇನೆ, ಇದರಿಂದ ನಾನು ವಿಚಲಿತನಾಗಿದ್ದೇನೆ ಎಂದು ಹೇಳಿದ್ದಾರೆ.
ನಾನು ದೇಶದ ಒಬ್ಬ ನಾಗರಿಕ, ನಾನು ಯಾವುದೇ ಪಕ್ಷದ  ವಿರೋಧಿಯಲ್ಲ, ನಾನು ನನ್ನ ದೇಶದ ಪ್ರಧಾನಿಯ ಬಗ್ಗೆ ಮಾತನಾಡುತ್ತಿದ್ದೇನೆ, ನನಗೆ ಈ ಬಗ್ಗೆ ಮಾತನಾಡುವ ಹಕ್ಕಿದೆ, ನಾನು ರಾಷ್ಟ್ರ ಪ್ರಶಸ್ತಿಗಳನ್ನು ವಾಪಸ್ ಮಾಡುತ್ತೇನೆ ಎಂದು ಹೇಳಿದ್ದೇನೆ ಎಂಬ ಆರೋಪ ಆಧಾರರಹಿತವಾದದ್ದು ಎಂದು ಸ್ಪಷ್ಟ ಪಡಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.