ಐಟಿ ಸಮನ್ಸ್ ಹಿನ್ನಲೆ: ವಿಚಾರಣೆಗೆ ಹಾಜರಾದ ಡಿಕೆ ಶಿವಕುಮಾರ್
ಆದಾಯ ತೆರಿಗೆ ಇಲಾಖೆಯ ಸಮನ್ಸ್ ಹಿನ್ನಲೆಯಲ್ಲಿ ರಾಜ್ಯ ಇಂಧನ ಸಚಿವ ಡಿಕೆ ಶಿವಕುಮಾರ್ ಅವರು ಗುರುವಾರ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ತಿಳಿದುಬಂದಿದೆ.

Published On :
ಬೆಂಗಳೂರು: ಆದಾಯ ತೆರಿಗೆ ಇಲಾಖೆಯ ಸಮನ್ಸ್ ಹಿನ್ನಲೆಯಲ್ಲಿ ರಾಜ್ಯ ಇಂಧನ ಸಚಿವ ಡಿಕೆ ಶಿವಕುಮಾರ್ ಅವರು ಗುರುವಾರ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ತಿಳಿದುಬಂದಿದೆ.
Bengaluru: Karnataka minister DK Shivkumar reached Income Tax office pic.twitter.com/Y6D5Nhe7mJ
— ANI (@ANI) October 5, 2017
ಕಳೆದ ಆಗಸ್ಟ್ ನಲ್ಲಿ ಡಿಕೆ ಶಿವಕುಮಾರ್ ಅವರಿಗೆ ಸಂಬಂಧಿಸಿದ ಆಸ್ತಿಗಳ ಮೇಲೆ ದಾಳಿ ನಡೆಸಿದ್ದ ಅಧಿಕಾರಿಗಳು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದರು. ಸತತ ಮೂರು ದಿನಗಳ ಕಾಲ ನಡೆದ ಶೋಧ ಕಾರ್ಯಾಚರಣೆ ಬಳಿಕ ಡಿಕೆ ಶಿವಕುಮಾರ್ ಆದಾಯ ತೆರಿಗೆ ಅಧಿಕಾರಿಗಳ ಮುಂದೆ ವಿಚಾರಣೆಗೂ ಹಾಜರಾಗಿದ್ದರು. ಇದೀಗ ಮತ್ತೆ ಡಿಕೆ ಶಿವಕುಮಾರ್ ಅವರಿಗೆ ಆದಾಯ ತೆರಿಗೆ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವ ಕುರಿತು ಸಮನ್ಸ್ ನೀಡಿದ ಹಿನ್ನಲೆಯಲ್ಲಿ 2ನೇ ಬಾರಿಗೆ ಶಿವಕುಮಾರ್ ಅವರು ವಿಚಾರಣೆಗೆ ಹಾಜರಾಗಿದ್ದಾರೆ ಎಂದು ತಿಳಿದುಬಂದಿದೆ.
ಈ ಹಿಂದೆ ಐಟಿ ದಾಳಿ ಸಂಬಂಧ ಮಾತನಾಡಿದ್ದ ಡಿಕೆಶಿ, ತಾವು ಕಾನೂನು ಮೀರಿ ಯಾವುದೇ ಕೆಲಸವನ್ನೂ ಮಾಡಿಲ್ಲ. ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗುತ್ತೇನೆ ಎಂದು ಹೇಳಿದ್ದರು.
ಈ ಹಿಂದೆ ಐಟಿ ದಾಳಿ ಸಂಬಂಧ ಮಾತನಾಡಿದ್ದ ಡಿಕೆಶಿ, ತಾವು ಕಾನೂನು ಮೀರಿ ಯಾವುದೇ ಕೆಲಸವನ್ನೂ ಮಾಡಿಲ್ಲ. ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗುತ್ತೇನೆ ಎಂದು ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


