ಬೆಂಗಳೂರಿನಲ್ಲಿ ಇನ್ನೂ ಐದು ದಿನ ಭರ್ಜರಿ ಮಳೆ: ಹವಾಮಾನ ಇಲಾಖೆ
ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ನಾನಾ ಕಡೆ ಎಡಬಿಡದೇ ಮಳೆ ಸುರಿಯುತ್ತಿದ್ದು ಇನ್ನು ಐದು ದಿನಗಳ ಕಾಲ ವರುಣನ ಆರ್ಭಟ ಮುಂದುವರೆಯಲಿದೆ...

Published On :
ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ನಾನಾ ಕಡೆ ಎಡಬಿಡದೇ ಮಳೆ ಸುರಿಯುತ್ತಿದ್ದು ಇನ್ನು ಐದು ದಿನಗಳ ಕಾಲ ವರುಣನ ಆರ್ಭಟ ಮುಂದುವರೆಯಲಿದೆ.
ಅರಬ್ಬಿ ಸಮುದ್ರದ ಪೂರ್ವ ಕೇಂದ್ರದ ಮೇಲ್ಮೈ ಸುಳಿಗಾಳಿ ಬೀಸುತ್ತಿರುವುದರಿಂದ ರಾಜ್ಯದ ಕರಾವಳಿ ಭಾಗ ಹಾಗೂ ಕೇರಳದ ಉತ್ತರ ಭಾಗದಲ್ಲಿ ಇನ್ನು ಐದು ದಿನಗಳ ಕಾಲ ಮಳೆ ಹೀಗೆ ಮುಂದುವರೆಯಲಿದೆ ಎಂದು ಹವಾಮಾನ ನಿರ್ದೇಶಕ ಸುಂದರ ಮೇತ್ರಿ ಹೇಳಿದ್ದಾರೆ.
ಸದ್ಯ ಸುರಿಯುತ್ತಿರುವ ಮಳೆಯಿಂದಾಗಿ ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ಎದುರಾಗಿದೆ. ಮಳೆಯ ರಭಸಕ್ಕೆ ನೈಸ್ ರಸ್ತೆಯಲ್ಲಿ ವಾಹನ ಚಲಾಯಿಸಲು ಆಗದೆ ಸವಾರರು ರಸ್ತೆಯಲ್ಲೇ ವಾಹನಗಳನ್ನು ನಿಲ್ಲಿಸಿರುವುದರಿಂದ ಟ್ರಾಫಿಕ್ ಜಾಮ್ ಶುರುವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


