ಜೈಲು ಶಿಕ್ಷೆಯಲ್ಲಿರುವ ಎಐಎಡಿಎಂಕೆ ನಾಯಕಿ ಶಶಿಕಲಾಗೆ ಐದು ದಿನಗಳ ಪೆರೋಲ್
ಅಕ್ರಮ ಆಸ್ತಿ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಎಐಎಡಿಎಂಕೆ ನಾಯಕಿ ಶಶಿಕಲಾ ಅವರಿಗೆ ಪರಪ್ಪನ ಅಗ್ರಹಾರ ಐದು ದಿನಗಳ ಪೆರೋಲ್...

Published On :
ಬೆಂಗಳೂರು: ಅಕ್ರಮ ಆಸ್ತಿ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಎಐಎಡಿಎಂಕೆ ನಾಯಕಿ ಶಶಿಕಲಾ ಅವರಿಗೆ ಪರಪ್ಪನ ಅಗ್ರಹಾರ ಐದು ದಿನಗಳ ಪೆರೋಲ್ ನೀಡಿದೆ.
ತಮಿಳುನಾಡು ಸರ್ಕಾರದ ಶಿಫಾರಸಿನ ಮೇರೆಗೆ ಅನಾರೋಗ್ಯ ಪೀಡಿತ ಪತಿಯ ಭೇಟಿಗಾಗಿ ಆದು ದಿನಗಳ ಪೆರೋಲ್ ನೀಡಲಾಗಿದೆ ಎಂದು ಜೈಲಿನ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಕೆಲವು ಷರತ್ತುಗಳ ಮೇಲೆ ಶಶಿಕಲಾ ಅವರಿಗೆ ಪೆರೋಲ್ ನೀಡಲಾಗಿದೆ ಎಂದು ಶಶಿಕಲಾ ಪರ ವಕೀಲ ಕೃಷ್ಣಪ್ಪನ್ ತಿಳಿಸಿದ್ದಾರೆ.
ಶಶಿಕಲಾ ಅವರನ್ನು ಕರೆದೊಯ್ಯಲು ಅವರ ಆಪ್ತ ಸಂಬಂಧಿ ಟಿಟಿವಿ ದಿನಕರನ್ ಗುರುವಾರ ರಾತ್ರಿಯೇ ಬೆಂಗಳೂರಿಗೆ ಆಗಮಿಸಿದ್ದಾರೆ. ಪೆರೋಲ್ ಮೇಲೆ ಬಿಡುಗಡೆಗೊಳ್ಳುವ ಶಶಿಕಲಾ ಅವರನ್ನು ನೋಡಲು ಅವರ ಸುಮಾರು 500 ಬೆಂಬಲಿಗರು ಪರಪ್ಪನ ಅಗ್ರಹಾರ ಜೈಲಿಗೆ ಆಗಮಿಸುವ ಸಾಧ್ಯತೆಯಿದೆ.
ಶಶಿಕಲಾ ಅವರನ್ನು ಪೆರೋಲ್ ಮೇಲೆ ಬಿಡುಗಡೆ ಗೊಳಿಸಲು ತಮಿಳುನಾಡು ಪೊಲೀಸರಿಂದ ಎನ್ ಒಸಿಗಾಗಿ ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳು ಕಾಯುತ್ತಿದ್ದಾರೆ. ತಮಿಳುನಾಡು ಪೊಲೀಸರು ಆಕೆಯ ಭದ್ರತೆ ಬಗ್ಗೆ ದಾಖಲಾತಿ ನೀಡಬೇಕಿದೆ. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ತಮ್ಮ ಪತಿಯನ್ನು ನೋಡಲು 15 ದಿನಗಳ ಪೆರೋಲ್ ನೀಡಬೇಕೆಂದು ಎರಡು ದಿನಗಳ ಹಿಂದೆ ಶಶಿಕಲಾ ಅರ್ಜಿ ಸಲ್ಲಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಪರಪ್ಪನ ಅಗ್ರಹಾರ ಜೈಲುಶಶಿಕಲಾSasikalaನಟರಾಜನ್Parappana Agrahara prisonNatarajan5 days parole5 ದಿನಗಳ ಪೆರೋಲ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


