ರಾಜ್ಯ

ಮುಂದಿನ ಚುನಾವಣೆ ಗೆಲ್ಲಬೇಕೆಂದರೆ ಗುಂಡಿಗಳನ್ನು ಮುಚ್ಚಿ: ಸಿಎಂ, ಸಚಿವರಿಗೆ 'ಉಸ್ತುವಾರಿ' ಕ್ಲಾಸ್

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹಲವೆಡೆ ಪ್ರವಾಹ ಪರಿಸ್ಥತಿ ಉಂಟಾಗಿದ್ದು, ನಗರದ ಬಹುತೇಕ ರಸ್ತೆಗಳು ...

ಮುಂದಿನ ಚುನಾವಣೆ ಗೆಲ್ಲಬೇಕೆಂದರೆ ಗುಂಡಿಗಳನ್ನು ಮುಚ್ಚಿ: ಸಿಎಂ, ಸಚಿವರಿಗೆ 'ಉಸ್ತುವಾರಿ' ಕ್ಲಾಸ್
ಕೆ.ಸಿ ವೇಣುಗೋಪಾಲ್
Published On :
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹಲವೆಡೆ ಪ್ರವಾಹ ಪರಿಸ್ಥತಿ ಉಂಟಾಗಿದ್ದು, ನಗರದ ಬಹುತೇಕ ರಸ್ತೆಗಳು ಕಿತ್ತು ಗುಂಡಿಗಳಾಗಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈ ಕಮಾಂಡ್ ಸಿಎಂ ಹಾಗೂ ಸಚಿವರ ವಿರುದ್ಧ ಗರಂ ಆಗಿದೆ.
ರಾಜ್ಯ ವಿಧಾನ ಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಸ್ತೆ ಗುಂಡಿಗಳನ್ನು ಕೂಡಲೇ ಸರಿಪಡಿಸುವಂತೆ ಸರ್ಕಾರಕ್ಕೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ಎಚ್ಚರಿಕೆ ನೀಡಿದ್ದಾರೆ.
ಶುಕ್ರವಾರ ನಡೆದ ಸಿಎಂ ಹಾಗೂ ಸಚಿವರೊಂದಿಗಿನ ಸಭೆಯಲ್ಲಿ ಮಾತನಾಡಿದ ವೇಣುಗೋಪಾಲ್ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆಯನ್ನು ಶೀಘ್ರವೇ ಮುಗಿಸುವಂತೆ ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ಸೂಚಿಸಿದ್ದಾರೆ.
ಬೆಂಗಳೂರಿಗೆ ಸಂಬಂಧಿಸಿದ ಸಮಸ್ಯೆಗಳನ್ನ ಕುರಿತು ಚರ್ಚಿಸಲು ಸಿಎಂ ಸಿದ್ದರಾಮಯ್ಯ ಶನಿವಾರ ಸಭೆ ಕರೆದಿದ್ದಾರೆ. ನಗರದಲ್ಲಿ ಉಂಟಾಗುತ್ತಿರುವ ಸಮಸ್ಯೆಗಳು ಸಿದ್ದರಾಮಯ್ಯ ಸರ್ಕಾರದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಹೀಗಾಗಿ ಬೆಂಗಳೂರಿನ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯ ಬಗ್ಗೆ ಹೆಚ್ಚಿನ ಗಮನ ನೀಡುವಂತೆ ಸಲಹೆ ನೀಡಿದ್ದಾರೆ.
ರಾಜ್ಯದ 224 ವಿಧಾನಸಭೆ ಕ್ಷೇತ್ರಗಳಲ್ಲಿ ಬೆಂಗಳೂರು ನಗರದಲ್ಲೇ 28 ಕ್ಷೇತ್ರಗಳಿವೆ.  ಹೀಗಾಗಿ ಸಿಎಂ ಮತ್ತು ಸಚಿವರುಗಳು ಕೂಡಲೇ ತಮ್ಮ ಕೆಲಸ ಆರಂಭಿಸಬೇಕೆಂದು ಹೇಳಿದ್ದಾರೆ. ಜೊತೆಗೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳನ್ನು ಶೀಘ್ರವೇ ಬಂಧಿಸಬೇಕೆಂದು ಅವರು ಸೂಚಿಸಿದ್ದಾರೆ.
ಇನ್ನೂ ವೇಣುಗೋಪಾಲ್ ಅವರ ಸೂಚನೆಯಂತೆ ಶನಿವಾರ ಸಿಎಂ ಸಿದ್ದರಾಮಯ್ಯ ಸಭೆ ಕರೆದಿದ್ದು ನಗರದ ಸಮಸ್ಯೆಗಳ ಕುರಿತು ಚರ್ಚಿಸಲಿದ್ದಾರೆ, ಸಭೆಯಲ್ಲಿ ನಗರದ ಸಚಿವರು ಶಾಸಕರು ಸೇರಿದಂತೆ ಬಿಬಿಎಂಪಿ, ಬಿಡಿಎಸ ಬಿಡಬ್ಲ್ಯೂ ಎಸ್ ಎಸ್ ಬಿ  ಮತ್ತು ಬೆಸ್ಕಾಂ ನ ಉನ್ನತ ಅಧಿಕಾರಿಗಳು ಭಾಗವಹಿಸುವಂತೆ ಸೂಚಿಸಲಾಗಿದೆ. ರಾಜ ಕಾಲುವೆಗಳ ಒತ್ತುವರಿ, ಪ್ರವಾಹ ನಿಯಂತ್ರಣ ರಸ್ತೆ ಗುಂಡಿಗಳನ್ನು ಮುಚ್ಚುವುದು ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ ಚರ್ಚಿಸಲಾಗುವುದು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.