ಬಿಎಂಆರ್ ಸಿಎಲ್ ನೌಕರರ ವಿರುದ್ಧ ಎಸ್ಮಾ ಜಾರಿ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ
ಬಿಎಂಆರ್ ಸಿಎಲ್ ನೌಕರರ ವಿರುದ್ಧ ರಾಜ್ಯ ಸರ್ಕಾರ ಜಾರಿಗೊಳಿಸಿದ್ದ ಎಸ್ಮಾ ಕಾಯ್ದೆ ಗೆ ಹೈಕೋರ್ಟ್ ಇಂದು ಮಧ್ಯಂತರ ತಡೆಯಾಜ್ಞೆ ನೀಡಿದೆ

Published On :
ಬೆಂಗಳೂರು: ಬಿಎಂಆರ್ ಸಿಎಲ್ ನೌಕರರ ವಿರುದ್ಧ ರಾಜ್ಯ ಸರ್ಕಾರ ಜಾರಿಗೊಳಿಸಿದ್ದ ಎಸ್ಮಾ ಕಾಯ್ದೆ ಗೆ ಹೈಕೋರ್ಟ್ ಇಂದು ಮಧ್ಯಂತರ ತಡೆಯಾಜ್ಞೆ ನೀಡಿದೆ.
ಎಸ್ಮಾ ಜಾರಿ ಗೊಳಿಸಿದ್ದ, ರಾಜ್ಯ ಸರ್ಕಾರ ಸೇರಿದಂತೆ ಕೇಂದ್ರ ಸರ್ಕಾರ, ಬಿಎಂಆರ್ ಸಿಎಲ್ ಮುಖ್ಯಸ್ಥರಿಗೆ ಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಕಳೆದ ಜು.7ರಂದು ರಾಜ್ಯ ಸರ್ಕಾರ ಬಿಎಂಆರ್ ಸಿಎಲ್ ನೌಕರರ ವಿರುದ್ಧ ಅಗತ್ಯ ಸೇವೆಗಳ ನಿರ್ವಹಣಾ ಕಾಯ್ದೆ (ಎಸ್ಮಾ) ಜಾರಿ ಮಾಡಿ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಬಿಎಂಆರ್ ಸಿಎಲ್ ನೌಕರರ ಒಕ್ಕೂಟ ಹೈಕೋರ್ಟ್ ಮೊರೆ ಹೋಗಿತ್ತು. 2002ರ ಮೆಟ್ರೋ ಕಾಯ್ದೆ ಅನ್ವಯ ರಾಜ್ಯ ಸರ್ಕಾರಕ್ಕೆ ಬಿಎಂಆರ್ ಸಿಎಲ್ ನೌಕರರ ಮೇಲೆ ಎಸ್ಮಾ ಜಾರಿಗೊಳಿಸುವ ಅಧಿಕಾರ ಇಲ್ಲ, ಹೀಗಾಗಿ ಸರ್ಕಾರ ಜಾರಿಗೊಳಿಸಿದ್ದ ಎಸ್ಮಾ ರದ್ದು ಮಾಡಬೇಕೆಂದು ಬಿಎಂಆರ್ ಸಿಎಲ್ ನೌಕರರ ಒಕ್ಕೂಟ ಕೋರ್ಟ್ ನಲ್ಲಿ ವಾದ ಮಂಡಿಸಿತ್ತು.
ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ, ಎಸ್ಮಾ ಜಾರಿಗೆ ತಾತ್ಕಾಲಿಕ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
State Governmentರಾಜ್ಯ ಸರ್ಕಾರಹೈಕೋರ್ಟ್interim stayಮಧ್ಯಂತರ ತಡೆಯಾಜ್ಞೆESMAಎಸ್ಮಾThe High CourtBMRCLಬಿಎಂಆರ್ ಸಿಎಲ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


