ಹೈಕಮಾಂಡ್ ಗೆ ಕಪ್ಪ: ಸಿಡಿ ವಿಡಿಯೋದಲ್ಲಿರುವ ಬಿಎಸ್ ವೈ, ಅನಂತ್ ಸಂಭಾಷಣೆ ಅಸಲಿ!
ಹೈಕಮಾಂಡ್ ಗೆ ಕಪ್ಪಕಾಣಿಕೆ ನೀಡಿದ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ಅನಂತ್ ಕುಮಾರ್ ನಡುವಿನ ಸಂಭಾಷಣೆ ಕುರಿತಂತೆ ಭ್ರಷ್ಟಾಚಾರ ನಿಗ್ರಹದಳ ಅಧಿಕಾರಿಗಳು ದೂರು ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Published On :
ಬೆಂಗಳೂರು: ಹೈಕಮಾಂಡ್ ಗೆ ಕಪ್ಪಕಾಣಿಕೆ ನೀಡಿದ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ಅನಂತ್ ಕುಮಾರ್ ನಡುವಿನ ಸಂಭಾಷಣೆ ಕುರಿತಂತೆ ಭ್ರಷ್ಟಾಚಾರ ನಿಗ್ರಹದಳ ಅಧಿಕಾರಿಗಳು ದೂರು ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಈ ಹಿಂದೆ ಮಾಧ್ಯಮಗಳಲ್ಲಿ ವೈರಲ್ ಆಗಿದ್ದ ಹೈಕಮಾಂಡ್ ಗೆ ಕಪ್ಪ ನೀಡಿದ ಆರೋಪ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ಅನಂತಕುಮಾರ್ ನಡೆಸಿರುವ ಸಂಭಾಷಣೆ ಅಸಲಿ ಎಂದು ಎಫ್‌ಎಸ್‌ಎಲ್ (ವಿಧಿ ವಿಜ್ಞಾನ ಪ್ರಯೋಗಾಲಯ)ವರದಿ ಸ್ಪಷ್ಟಪಡಿಸಿದ್ದು, ಈ ಸಂಬಂಧ ಎಸಿಬಿ ಅಧಿಕಾರಿಗಳು ದೂರು ದಾಖಲಿಕೊಂಡು ಎಫ್ ಐಆರ್ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.
ಯಡಿಯೂರಪ್ಪ, ಅನಂತಕುಮಾರ್ ಹೈಕಮಾಂಡ್ ಗೆ ಕಪ್ಪಕಾಣಿಕೆ ಸಲ್ಲಿಸಿರುವ ಬಗ್ಗೆ ನಡೆಸಿರುವ ಸಂಭಾಷಣೆ ಸಿಡಿಯನ್ನು ಕಾಂಗ್ರೆಸ್ ಮುಖಂಡರು ಬಿಡುಗಡೆ ಮಾಡಿದ್ದರು, ಅಲ್ಲದೆ ಬಳಿಕ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಸಿಡಿಯ ಸಂಭಾಷಣೆ ಧ್ವನಿ ಸಂಬಂಧ ದೂರು ಕೂಡ ದಾಖಲಾಗಿತ್ತು. ಬಿ.ಎಸ್.ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಅನಂತಕುಮಾರ್ ಕಾನೂನು ಬಾಹಿರವಾಗಿ ಹಣ ಸಂಗ್ರಹಿಸಿ ತಮ್ಮ ಪಕ್ಷದ ಹೈಕಮಾಂಡ್ ಗೆ ಲಂಚ ನೀಡಿದ್ದಾರೆ. ಈ ಕುರಿತು ತನಿಖೆ ನಡೆಸಬೇಕೆಂದು ಕೆಪಿಸಿಸಿ ಕಾನೂನು ಘಟಕ ಎಸಿಬಿಗೆ ದೂರು ನೀಡಿತ್ತು.
ಈ ಸಂಬಂಧ ಅಕ್ಟೋಬರ್ 4 ರಂದು ಸೈಬರ್ ಕ್ರೈಂ ಪೊಲೀಸರಿಗೆ ಫಾರೆನ್ಸಿಕ್ ವಿಭಾಗದ(ಎಫ್‌ಎಸ್‌ಎಲ್) ಸಹಾಯಕ ನಿರ್ದೇಶಕಿ ಸಿ.ಶ್ರೀವಿದ್ಯಾ ವರದಿಯೊಂದನ್ನು ಸಲ್ಲಿಸಿದ್ದು, ಇದರಲ್ಲಿ ಯಡಿಯೂರಪ್ಪ-ಅನಂತಕುಮಾರ್ ನಡೆಸಿರುವ ಸಂಭಾಷಣೆ ಅಸಲಿಯಾಗಿದೆ ಎಂದು ವರದಿಯಲ್ಲಿ ತಿಳಿಸಿದ್ದರು ಎಂದು ತಿಳಿದುಬಂದಿದೆ.
ಇದೇ ವರದಿಯನ್ನು ಮುಂದಿಟ್ಟುಕೊಂಡು ರಾಜ್ಯ ಭ್ರಷ್ಟಚಾರ ನಿಗ್ರಹ ದಳ(ಎಸಿಬಿ) ಎಫ್‌ಐಆರ್ ದಾಖಲಿಸಲು ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.
ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಕಳೆದ ಫೆಬ್ರವರಿ 12ರಂದು ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಭಾಷಣ ಮಾಡುತ್ತಿರುವ ವೇಳೆ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ಅನಂತ ಕುಮಾರ್ ನಡುವೆ ಪರಸ್ಪರ ಮಾತನಾಡಿಕೊಂಡಿದ್ದರು. ಈ ವೇಳೆ ಸಿದ್ದರಾಮಯ್ಯ ಅವರ ಕುರಿತ ಡೈರಿ ಸಂಬಂಧ ಮಾತನಾಡಿದ್ದ ಉಭಯ ನಾಯಕರು ಹೈ ಕಮಾಂಡ್ ಗೆ ಕಪ್ಪ ಕಾಣಿಕೆ ನೀಡಿದ್ದರ ಕುರಿತು ಚರ್ಚಿಸಿದ್ದರು ಎಂದು ಹೇಳಲಾಗಿದೆ. ಈ ಸಂಬಂಧ ಸಿಡಿ ಬಿಡುಗಡೆ ಮಾಡಿದ್ದ ಕಾಂಗ್ರೆಸ್ ಮುಖಂಡರು ದೂರು ಕೂಡ ಸಲ್ಲಿಕೆ ಮಾಡಿದ್ದರು.

Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುBengalurubjpPoliticsರಾಜಕೀಯAnanth kumarಅನಂತ್ ಕುಮಾರ್B S Yeddyurappaಬಿಎಸ್ ಯಡಿಯೂರಪ್ಪCD Video tape Issueಆಡಿಯೋ ಟೇಪ್ ವಿವಾದ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.