15 ದಿನಗಳೊಳಗೆ ರಸ್ತೆಗುಂಡಿ ಮುಚ್ಚಿ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಡೆಡ್ ಲೈನ್!
ರಾಜಧಾನಿಯ ರಕ್ಕಸ ರಸ್ತೆಗುಂಡಿಗೆ ಬಿದ್ದು ದಂಪತಿ ಹಾಗೂ ಓರ್ವ ಮಹಿಳೆ ಬಲಿಯಾದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ 15 ದಿನಗಳೊಳಗೆ ರಸ್ತೆ ಗುಂಡಿ ಮುಚ್ಚುವಂತೆ ಅಧಿಕಾರಿಗಳಿಗೆ ಅಂತಿಮ ಗಡುವು ನೀಡಿದೆ.

Published On :
ಬೆಂಗಳೂರು: ರಾಜಧಾನಿಯ ರಕ್ಕಸ ರಸ್ತೆಗುಂಡಿಗೆ ಬಿದ್ದು ದಂಪತಿ ಹಾಗೂ ಓರ್ವ ಮಹಿಳೆ ಬಲಿಯಾದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ 15 ದಿನಗಳೊಳಗೆ ರಸ್ತೆ ಗುಂಡಿ ಮುಚ್ಚುವಂತೆ ಅಧಿಕಾರಿಗಳಿಗೆ ಅಂತಿಮ ಗಡುವು ನೀಡಿದೆ.
ಇಂದು ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ರಸ್ತೆಗುಂಡಿಗಳಿಂದ ಆಗುತ್ತಿರುವ ಅನಾಹುತ ಸರ್ಕಾರದ ಗಮನಕ್ಕೆ ಬಂದಿದೆ. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅಂತೆಯೇ ಇನ್ನು 15 ದಿನದೊಳಗೆ ಬೆಂಗಳೂರಿನ ರಸ್ತೆ ಗುಂಡಿಗಳನ್ನು ಮುಚ್ಚಲು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಹಾಗೂ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಒಂದು ವೇಳೆ 15 ದಿನಗಳೊಳಗೆ ರಸ್ತೆ ಗುಂಡಿ ಮುಚ್ಚದಿದ್ದರೆ ಸಂಬಂಧ ಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
ಬೆಂಗಳೂರಿನ ಎಲ್ಲ ರಸ್ತೆಗಳಿಗೂ ವೈಟ್ ಟ್ಯಾಪಿಂಗ್
ಇದೇ ವೇಳೆ ಸುರಕ್ಷಿತ ರಸ್ತೆಗಳನ್ನು ನಿರ್ಮಿಸುವ ಕುರಿತು ಸರ್ಕಾರ ಕ್ರಮ ಕೈಗೊಂಡಿದೆ. ಬೆಂಗಳೂರಿನ ಎಲ್ಲ ರಸ್ತೆಗಳಿಗೂ ವೈಟ್ ಟ್ಯಾಪಿಂಗ್ ಮಾಡುವ ಕುರಿತು ಕ್ರಮ ಕೈಗೊಳ್ಳಲಾಗಿದೆ. ಈ ಬಗ್ಗೆ ಟೆಂಡರ್ ಪ್ರಕ್ರಿಯೆ ಆರಂಭವಾಗಿದ್ದು, ಬೆಂಗಳೂರಿನ 92 ಕಿ.ಮೀ ರಸ್ತೆಗಳನ್ನು ವೈಟ್ ಟಾಪಿಂಗ್ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.
ಇತ್ತೀಚೆಗೆ ಮೈಸೂರು ರಸ್ತೆಯ ಮೇಲ್ಸೇತುವೆ ಮೇಲೆ ಹೋಗುವ ರಸ್ತೆಯಲ್ಲಿ ಗುಂಡಿ ಕಾರಣದಿಂದ ದಂಪತಿ ಜೀವ ಕಳೆದುಕೊಂಡಿದ್ದರು. ಭಾನುವಾರ ರಸ್ತೆ ಗುಂಡಿ ತಪ್ಪಿಸಲು ಪ್ರಯತ್ನಿಸಿದ ಸಂದರ್ಭದಲ್ಲಿ ಬೈಕ್ ಹಿಂಬದಿ ಕುಳಿತಿದ್ದ ನಾಗವಾರದ ನಿವಾಸಿ ರಾಧಿಕಾ(47) ಕೆಳಗೆ ಬಿದ್ದಿದ್ದು, ಅದೇ ವೇಳೆ ಹಿಂಬದಿಯಿಂದ ಬರುತ್ತಿದ್ದ ಲಾರಿಯ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದರು.

Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.