ಐಎಎಸ್ ಅಧಿಕಾರಿಗಳ ವರ್ಗಾವಣೆ: ಶಾಲಿನಿ ರಜನೀಶ್ ದಿಢೀರ್ ಎತ್ತಂಗಡಿ!
ಮಂಗಳವಾರದಿಂದಲೇ ಜಾರಿಗೆ ಬರುವಂತೆ ಹಲವು ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ...

Published On :
ಬೆಂಗಳೂರು: ಮಂಗಳವಾರದಿಂದಲೇ ಜಾರಿಗೆ ಬರುವಂತೆ ಹಲವು ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಆರೋಗ್ಯ ಇಲಾಖೆಯಲ್ಲಿ ವಿವಿಧ ಉಪಕರಣಗಳ ಖರೀದಿ ಪ್ರಕ್ರಿಯೆಯಲ್ಲಿ ನಿಯಮ ಉಲ್ಲಂಘಿಸಿರುವ ಆರೋಪ ಎದುರಾದ ಬೆನ್ನಲ್ಲೇ ಇಲಾಖೆ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ದಿಢೀರ್ ಎತ್ತಂಗಡಿ ಮಾಡಲಾಗಿದೆ.
ಇವರಲ್ಲದೆ, ಇನ್ನೂ ಒಂಬತ್ತು ಹಿರಿಯ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.ಇಂಧನ ಇಲಾಖೆ ಹೆಚ್ಚುವರಿ ಮುಖ್ಯಕಾರ್ಯದರ್ಶಿಯಾಗಿದ್ದ ರಜನೀಶ್ ಗೋಯಲ್ ಅವರನ್ನು ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಯೋಜನೆ ಮತ್ತು ಸಾಂಖ್ಯಿಕ ಇಲಾಖೆಗೆ ವರ್ಗಾಯಿಸಲಾಗಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ಅಜಯ್ ಸೇಟ್ ಅವರಿಗೆ ಆರೋಗ್ಯ ಇಲಾಖೆಯಲ್ಲಿ ಅದೇ ಹುದ್ದೆಯ ಜವಾಬ್ದಾರಿ ವಹಿಸಲಾಗಿದೆ.
ಇಂಧನ ಇಲಾಖೆಯಲ್ಲಿ ಹಿಂದೆ ಕೆಲಸ ನಿರ್ವಹಿಸಿ, ಅರಣ್ಯ ಇಲಾಖೆಗೆ ವರ್ಗಾವಣೆ ಮಾಡಲಾಗಿದ್ದಪಿ. ರವಿಕುಮಾರ್ ಅವರನ್ನು ಮತ್ತೆ ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಹುದ್ದೆಗೆ ವರ್ಗ ಮಾಡಲಾಗಿದೆ.
ಋತ್ವಿಕ್ ರಂಜನ್ ಪಾಂಡೆ–ಕಾರ್ಯದರ್ಶಿ, ಹಣಕಾಸು ಇಲಾಖೆ (ಬಜೆಟ್ ಮತ್ತು ಸಂಪನ್ಮೂಲ). ಎಂ.ಎಸ್. ಶ್ರೀಕರ–ಆಯುಕ್ತ, ವಾಣಿಜ್ಯ ತೆರಿಗೆ. ಕೆ.ಜಿ. ಜಗದೀಶ್–ನಿರ್ದೇಶಕ, ಗಣಿ ಮತ್ತು ಭೂವಿಜ್ಞಾನ ಇಲಾಖೆ. ಜಿ.ಸಿ. ಪ್ರಕಾಶ್– ವ್ಯವಸ್ಥಾಪಕ ನಿರ್ದೇಶಕ, ಮೈಸೂರು ಸೇಲ್ಸ್ ಅಂಡ್ ಇಂಟರ್ ನ್ಯಾಷನಲ್ ಲಿಮಿಟೆಡ್, ಆಯುಕ್ತ, ಕಬ್ಬು ಅಭಿವೃದ್ಧಿ.
ಶಶಿಕಾಂತ್ ಸೆಂಥಿಲ್–ಜಿಲ್ಲಾಧಿಕಾರಿ, ದಕ್ಷಿಣ ಕನ್ನಡ ಜಿಲ್ಲೆ. ಕೆ.ಎಸ್. ಮಂಜುನಾಥ್ (ಕೆಎಎಸ್ ಅಧಿಕಾರಿ)–ವ್ಯವಸ್ಥಾಪಕ ನಿರ್ದೇಶಕ, ಕೈಮಗ್ಗ ಅಭಿವೃದ್ಧಿ ನಿಗಮಕ್ಕೆ ವರ್ಗಾಯಿಸಿ ಆದೇಶ ಹೊರಡಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ರಾಜ್ಯ ಸರ್ಕಾರKarnataka Governmentಐಎಎಸ್ ಅಧಿಕಾರಿShalini Rajneeshವರ್ಗಾವಣೆtransferredಶಾಲಿನಿ ರಜನೀಶ್:IAS officers
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


