ಬೆಂಗಳೂರಿನಲ್ಲಿ ರಸ್ತೆಗುಂಡಿಗೆ ಮತ್ತೊಂದು ಬಲಿ, ದೇವನಹಳ್ಳಿಯಲ್ಲಿ ಮಹಿಳೆ ಸಾವು!
ಬೆಂಗಳೂರಿನ ಕಿಲ್ಲರ್ ರಸ್ತೆಗುಂಡಿಗಳಿಗೆ ಮತ್ತೊಂದು ಬಲಿಯಾಗಿದ್ದು, ದೇವನಹಳ್ಳಿಯಲ್ಲಿ ದ್ವಿಚಕ್ರ ಸವಾರಿ ಮಾಡುತ್ತಿದ್ದ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ.

Published On :
ಬೆಂಗಳೂರು: ಬೆಂಗಳೂರಿನ ಕಿಲ್ಲರ್ ರಸ್ತೆಗುಂಡಿಗಳಿಗೆ ಮತ್ತೊಂದು ಬಲಿಯಾಗಿದ್ದು, ದೇವನಹಳ್ಳಿಯಲ್ಲಿ ದ್ವಿಚಕ್ರ ಸವಾರಿ ಮಾಡುತ್ತಿದ್ದ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ.
ಸುದ್ದಿಸಂಸ್ಥೆಯೊಂದು ವರದಿ ಮಾಡಿರುವಂತೆ ದೇವನ ಹಳ್ಳಿ ಮುಖ್ಯರಸ್ತೆಯಲ್ಲಿ ಈ ಘಟನೆ ನಡೆದಿದ್ದು, ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ 21 ವರ್ಷದ ಮಹಿಳೆ ರಸ್ತೆಗುಂಡಿ ತಪ್ಪಿಸಲು ಬ್ರೇಕ್ ಹಾಕಿದ್ದಾರೆ. ಕೂಡಲೇ ವಾಹನ ಅವರ ನಿಯಂತ್ರಣ ತಪ್ಪಿ ಕೆಳಕ್ಕೆ ಬಿದ್ದಿದ್ದು, ಈ ವೇಳೆ ಹಿಂಬದಿಯಲ್ಲಿ ಬರುತ್ತಿದ್ದ ಟ್ರಕ್ ಅವರ ಮೇಲೆ ಹರಿದಿದೆ. ತೀವ್ರ ಗಾಯಗೊಂಡಿದ್ದ ಮಹಿಳೆ ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿದ್ದು, ಘಟನೆ ಬಳಿಕ ಟ್ರಕ್ ಚಾಲಕ ಪರಾರಿಯಾಗಿದ್ದಾನೆ.
ಪ್ರಸ್ತುತ ದೇವನಹಳ್ಳಿ ಪೊಲೀಸರು ಪ್ರಕರಣ ದಾಖಲಸಿಕೊಂಡಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ ಎಂದು ತಿಳಿದುಬಂದಿದೆ.
ಇತ್ತೀಚೆಗಷ್ಟೇ ಬೆಂಗಳೂರಿನ ಸಿರ್ಸಿ ಸರ್ಕಲ್ ಮೇಲ್ಸೇತುವೆ ಹಾಗೂ ನಾಯಂಡಹಳ್ಳಿ ಜಂಕ್ಷನ್ ರಸ್ತೆಗುಂಡಿಯಿಂದಾಗಿ ಮೂವರು ಸಾವನ್ನಪ್ಪಿದ್ದರು.
ಪ್ರಸ್ತುತ ದೇವನಹಳ್ಳಿ ಪೊಲೀಸರು ಪ್ರಕರಣ ದಾಖಲಸಿಕೊಂಡಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ ಎಂದು ತಿಳಿದುಬಂದಿದೆ.
ಇತ್ತೀಚೆಗಷ್ಟೇ ಬೆಂಗಳೂರಿನ ಸಿರ್ಸಿ ಸರ್ಕಲ್ ಮೇಲ್ಸೇತುವೆ ಹಾಗೂ ನಾಯಂಡಹಳ್ಳಿ ಜಂಕ್ಷನ್ ರಸ್ತೆಗುಂಡಿಯಿಂದಾಗಿ ಮೂವರು ಸಾವನ್ನಪ್ಪಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


