5 ದಿನಗಳ ಪೆರೋಲ್ ಮುಕ್ತಾಯ; ಮತ್ತೆ ಪರಪ್ಪನ ಅಗ್ರಹಾರ ಜೈಲಿನತ್ತ ಶಶಿಕಲಾ
ಅನಾರೋಗ್ಯದಿಂದ ಬಳಲುತ್ತಿರುವ ಪತಿ ನಟರಾಜನ್ ಅವರನ್ನು ನೋಡುವ ಸಲುವಾಗಿ ಎಐಎಡಿಎಂಕೆ ಉಚ್ಛಾಟಿತ ಪ್ರಧಾನ ಕಾರ್ಯದರ್ಶಿ ಶಶಿಕಲಾ ಅವರಿಗೆ ನೀಡಲಾಗಿದ್ದ 5 ದಿನಗಳ ಪರೋಲ್ ಅವಧಿ ಮುಕ್ತಾಯಗೊಂಡಿದ್ದು, ಮತ್ತೆ ನಗರದ ಪರಪ್ಪನ...

Published On :
ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿರುವ ಪತಿ ನಟರಾಜನ್ ಅವರನ್ನು ನೋಡುವ ಸಲುವಾಗಿ ಎಐಎಡಿಎಂಕೆ ಉಚ್ಛಾಟಿತ ಪ್ರಧಾನ ಕಾರ್ಯದರ್ಶಿ ಶಶಿಕಲಾ ಅವರಿಗೆ ನೀಡಲಾಗಿದ್ದ 5 ದಿನಗಳ ಪರೋಲ್ ಅವಧಿ ಮುಕ್ತಾಯಗೊಂಡಿದ್ದು, ಮತ್ತೆ ನಗರದ ಪರಪ್ಪನ ಅಗ್ರಹಾರದತ್ತ ಮರಳಿದ್ದಾರೆಂದು ಗುರುವಾರ ತಿಳಿದುಬಂದಿದೆ.
ಶಶಿಕಲಾ ಆವರ ಪೆರೋಲ್ ಅವಧಿ ಇಂದಿಗೆ ಮುಕ್ತಾಯಗೊಳ್ಳುತ್ತಿರುವ ಹಿನ್ನಲೆಯಲ್ಲಿ ಸಂಜೆ 6 ಗಂಟೆಯೊಳಗಾಗಿ ಪರಪ್ಪನ ಅಗ್ರಹಾರ ಜೈಲಿಗೆ ವಾಪಸಾಗಬೇಕಿದೆ.
ನಟರಾಜನ್ ಅವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಚೆನ್ನೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಶಶಿಕಲಾ ನಟರಾಜನ್ ಅವರಿಗೆ 5 ದಿನಗಳ ಪೆರೋಲ್ ನ್ನು ಮಂಜೂರು ಮಾಡಲಾಗಿತ್ತು.
ಪರೋಲ್ ಮಂಜೂರು ಮಾಡುವುದಕ್ಕೂ ಮುನ್ನ ನ್ಯಾಯಾಲಯಕ ಕೆಲ ಕಠಿಣ ಷರತ್ತುಗಳನ್ನು ವಿಧಿಸಿತ್ತು. ಪತಿ ನಟರಾಜನ್ ಅವರ ಆರೋಗ್ಯ ವಿಚಾರಿಸುವುದರ ಹೊರತಾಗಿ ಎಐಎಡಿಎಂಕೆ ಪಕ್ಷಯ ಯಾವುದೇ ಚಟುವಟಿಕೆ, ಸಭೆ, ಸಮಾಲೋಚನೆ ಹಾಗೂ ಮಾಧ್ಯಮಗಳೊಂದಿಗೆ ಮಾತನಾಡುವಂತಿಲ್ಲ ಎಂದು ಷರತ್ತುಗಳನ್ನು ವಿಧಿಸಿತ್ತು. ನ್ಯಾಯಾಲಯದ ಷರತ್ತಿನಂತೆಯೇ ಶಶಿಕಲಾ ಅವರು 5 ದಿನ ಮನೆಯಿಂದ ಆಸ್ಪತ್ರೆಗೆ ಭೇಟಿ ನೀಡುತ್ತಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುBengaluruAIADMKparoleಪೆರೋಲ್ಎಐಎಡಿಎಂಕೆParappana Agrahara Central JailVK. Sasikalaವಿಕೆ. ಶಶಿಕಲಾಪರಪ್ಪನ ಅಗ್ರಹಾರ ಕೇಂದ್ರೀಯ ಕಾರಾಗೃಹ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


