ಖ್ಯಾತ ಪತ್ರಕರ್ತ ಪಿ. ಸಾಯಿನಾಥ್ ಗೆ 2016 ನೇ ಸಾಲಿನ ಬಸವಶ್ರೀ ಪ್ರಶಸ್ತಿ
ಹಿರಿಯ ಪತ್ರಕರ್ತ ಪಿ.ಸಾಯಿನಾಥ್ 2016 ನೇ ಸಾಲಿನ ಬಸವಶ್ರೀ ಪ್ರಶಸ್ತಿ ಗೆ ಆಯ್ಕೆ ಆಗಿದ್ದಾರೆ.

Published On :
ಚಿತ್ರದುರ್ಗ: ಹಿರಿಯ ಪತ್ರಕರ್ತ ಪಿ.ಸಾಯಿನಾಥ್ 2016 ನೇ ಸಾಲಿನ ಬಸವಶ್ರೀ ಪ್ರಶಸ್ತಿ ಗೆ ಆಯ್ಕೆ ಆಗಿದ್ದಾರೆ.
ಚಿತ್ರದುರ್ಗದ ಮುರುಘಾಮಠ ದಿಂದ ಕೊಡಮಾಡುವ ಈ ಪ್ರಶಸ್ತಿಗೆ ರಾಮನ್ ಮ್ಯಾಗ್ಸೆಸೆ ಪ್ರಶಸ್ತಿ ವಿಜೇತ ಪಿ. ಸಾಯಿನಾಥ್ ಆಯ್ಕೆ ಆಗಿದ್ದಾರೆ ಎಂದು ಶಿವಮೂರ್ತಿ ಮುರುಘಾಶರಣರು ಪ್ರಕಟಿಸಿದರು. ಪತ್ರಿಕೋದ್ಯಮ ಕ್ಷೇತ್ರಕ್ಕೆ ಸಾಯಿನಾಥ್ ನೀಡಿರುವ ಕೊದುಗೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ.
ಬಸವಶ್ರೀ ಪ್ರಶಸ್ತಿ ಯು ರೂ. 5 ಲಕ್ಷ ನಗದು, ಪ್ರಮಾಣಪತ್ರ ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಅ.23 ರಂದು ಮಠದ ಆವರಣದಲ್ಲಿರುವ ಅನುಭವ ಮಂಟಪದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
12 ನೆಯ ಶತಮಾನದ ಸಾಮಾಜಿಕ ಸುಧಾರಕ ಬಸವೇಶ್ವರನ ತತ್ವಗಳನ್ನು ಅನುಸರಿಸಿ ಸಮಾಜಕ್ಕೆ ತಮ್ಮ ವಿಶೇಷ ಕೊಡುಗೆ ನೀಡಿದವರನ್ನು ಗುರುತಿಸಿ ಈ ಪ್ರಶಸ್ತಿ ನೀದಲಾಗುತ್ತದೆ ಎಂದು ಸ್ವಾಮೀಜಿ ಹೇಳಿದರು.
'ಪೀಪಲ್ಸ್ ಆರ್ಚಿವ್ ಆಫ್ ರೂರಲ್ ಇಂಡಿಯಾ' ದ ಸಂಸ್ಥಾಪಕ ಸಂಪಾದಕರಾಗಿರುವ ಸಾಯಿನಾಥ್ 'ದಿ ಹಿಂದೂ' ಪತ್ರಿಕೆಯ ಗ್ರಾಮೀಣ ವ್ಯವಹಾರಗಳ ವಿಭಾಗದ ಸಂಪಾದಕರಾಗಿಯೂ ಕಾರ್ಯ ನಿರ್ವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬಸವಶ್ರೀ ಪ್ರಶಸ್ತಿP SainathBasavashree awardSri Murugha MathaSenior journalist SainathPeople\'s Archive of Rural Indiaಪಿ ಸಾಯಿನಾಥ್ಶ್ರೀ ಮುರುಘಾ ಮಠಹಿರಿಯ ಪತ್ರಕರ್ತ ಸಾಯಿನಾಥ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


