ಮಳೆ ನೀರಿನಲ್ಲಿ ಕೊಚ್ಚಿ ಹೋಗಿದ್ದ ಅರ್ಚಕ ವಾಸುದೇವ್ ಕುಟುಂಬಕ್ಕೆ ಸಿಎಂ ಪರಿಹಾರ!
ಶುಕ್ರವಾರ ಸುರಿದ ಭಾರಿ ಮಳೆಯಲ್ಲಿ ನೀರುಪಾಲಾಗಿದ್ದ ಅರ್ಚಕ ವಾಸುದೇವ ಭಟ್ ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ ಶನಿವಾರ ಪರಿಹಾರ ಘೋಷಣೆ ಮಾಡಿದೆ.

Published On :
ಬೆಂಗಳೂರು: ಶುಕ್ರವಾರ ಸುರಿದ ಭಾರಿ ಮಳೆಯಲ್ಲಿ ನೀರುಪಾಲಾಗಿದ್ದ ಅರ್ಚಕ ವಾಸುದೇವ ಭಟ್ ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ ಶನಿವಾರ ಪರಿಹಾರ ಘೋಷಣೆ ಮಾಡಿದೆ.
ಈ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದು, ಮಳೆ ನೀರಿನಲ್ಲಿ ಕೊಚ್ಚಿ ಹೋಗಿ ಸಾವನ್ನಪ್ಪಿರುವ ಅರ್ಚಕ್ ವಾಸುದೇವ್ ಅವರ ಪತ್ನಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದಾರೆ. ಅಲ್ಲದೆ ವಾಸುದೇವ್ ಅವರ ಮಕ್ಕಳ ವಿದ್ಯಾಭ್ಯಾಸದ ವೆಚ್ಚವನ್ನೂ ಕೂಡ ಸರ್ಕಾರವೇ ಭರಿಸಲಿದೆ ಎಂದು ಹೇಳಿದ್ದಾರೆ.
ಇಂದು ಬೆಳಗ್ಗೆ ಘಟನೆ ನಡೆದಿದ್ದ ಕುರುಬರ ಹಳ್ಳಿಗೆ ಭೇಟಿ ನೀಡಿದ್ದ ಸಿಎಂ ಸಿದ್ದರಾಮಯ್ಯ ಮಳೆ ಸಂತ್ರಸ್ಥ ಕುಟುಂಬಸ್ಥರನ್ನು ಭೇಟಿಯಾದರು. ಈ ವೇಳೆ ಅರ್ಚಕರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಸಿಎಂ, ರಾತ್ರಿ ಮಳೆಗೆ ಜೀವ ತೆತ್ತವರ ಬಗ್ಗೆ ಬಹಳ ದುಃಖವಾಗಿದೆ. ಎಲ್ಲ ಮೃತರ ಕುಟುಂಬಗಳಿಗೆ ಪರಿಹಾರ ನೀಡಲಾಗುವುದು ಎಂದರು. ಅಂತೆಯೇ ಸಾವಿನ ಸಂದರ್ಭದಲ್ಲಿ ಯಾರೂ ರಾಜಕೀಯ ಮಾಡಬಾರದು ಎಂದು ಹೇಳಿದ ಸಿದ್ದರಾಮಯ್ಯ ಕೇವಲ ರಾಜಕೀಯ ಕಾರಣಕ್ಕೆ ಬಿಜೆಪಿ ನಾಯಕರು ಸುಳ್ಳು ಆರೋಪ ಮಾಡುತ್ತಿದ್ದಾರೆ. ಈ ಬಾರಿ ಹೆಚ್ಚು ಮಳೆ ಬಂದಿರುವುದೇ ಅನಾಹುತಕ್ಕೆ ಕಾರಣ. ಈ ಸಂಬಂಧ ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಬಿಡುವಿಲ್ಲದೇ ಮಳೆ ಸುರಿಯುತ್ತಿರುವ ಕಾರಣ ರಾಜಕಾಲುವೆಯ ಹೂಳು ತೆಗೆಯಲೂ ಸಾಧ್ಯವಾಗುತ್ತಿಲ್ಲ ಎಂದು ಸಿದ್ದರಾಮಯ್ಯ ತಿಳಿಸಿದರು.
ಪ್ರತಿಪಕ್ಷಗಳಿಂದಲೂ ಸಂತ್ರಸ್ಥ ಕುಟುಂಬಕ್ಕೆ ಪರಿಹಾರ
ಇದೇ ವೇಳೆ ಪ್ರತಿಪಕ್ಷ ಬಿಜೆಪಿ ಕೂಡ ಮಳೆ ಸಂತ್ರಸ್ಥ ಕುಟುಂಬಕ್ಕೆ ಪರಿಹಾರ ನೀಡಿದ್ದು, ತಲಾ 1 ಲಕ್ಷ ರು. ಪರಿಹಾರ ನೀಡಿದ್ದಾರೆ. ನೀರಿನಲ್ಲಿ ಕೊಚ್ಚಿ ಹೋದ ವಾಸುದೇವ್ ಕುಟುಂಬ ಹಾಗೂ ಮನೆ ಗೋಡೆ ಕುಸಿದು ಸಾವನ್ನಪ್ಪಿದ ಶಂಕರಪ್ಪ-ಕಮಲಮ್ಮ ದಂಪತಿಗಳ ಕುಟುಂಬವನ್ನು ಭೇಟಿ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ, ಕೇಂದ್ರ ಸಚಿವರಾದ ಸದಾನಂದಗೌಡ ಮತ್ತು ಮಾಜಿ ಉಪಮುಖ್ಯಮಂತ್ರಿ ಆರ್ ಅಶೋಕ್ ಅವರು ಸಾಂತ್ವನ ಹೇಳಿದರು. ಬಳಿಕ ಸಂತ್ರಸ್ಥ ಕುಟುಂಬಗಳಿಗೆ ತಲಾ 1 ಲಕ್ಷ ರು.ಗಳ ಪರಿಹಾರ ನೀಡಿದರು. ಅಂತೆಯೇ ಜೆಡಿಎಸ್ ರಾಷ್ಟ್ರಾಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರೂ ಕೂಡ ಮಳೆ ಸಂತ್ರಸ್ಥರ ಕುಟುಂಬಕ್ಕೆ ಭೇಟಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್Siddaramaiahಸಿದ್ದರಾಮಯ್ಯBengaluru Heavy Rainಬೆಂಗಳೂರು ಮಳೆ ಅವಾಂತರRain Victimsಮಳೆ ಸಂತ್ರಸ್ಥರು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


