'ಕೇವಲ ನೋಡಿಕೊಂಡು ಹೋಗೋದಲ್ಲ... ಕೂಡಲೇ ಪರಿಹಾರ ಕೊಡಿ': ಸಿಎಂಗೆ ಮಳೆ ಸಂತ್ರಸ್ತರ ತರಾಟೆ
ನಗರದಲ್ಲಿ ಶುಕ್ರವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ 5 ಮಂದಿ ಬಲಿಯಾದ ಬೆನ್ನಲ್ಲೇ ಮಳೆ ಸಂತ್ರಸ್ಥ ಪ್ರದೇಶಗಳಿಗೆ ಸಿಎಂ...

Published On :
ಬೆಂಗಳೂರು: ನಗರದಲ್ಲಿ ಶುಕ್ರವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ 5 ಮಂದಿ ಬಲಿಯಾದ ಬೆನ್ನಲ್ಲೇ ಮಳೆ ಸಂತ್ರಸ್ಥ ಪ್ರದೇಶಗಳಿಗೆ ಸಿಎಂ ಸಿದ್ದರಾಮಯ್ಯ ಶನಿವಾರ ಭೇಟಿ ನೀಡಿದ್ದಾರೆ.
ಅರ್ಚಕ ವಾಸುದೇವ್ ಹಾಗೂ ತಾಯಿ ಮಗಳು ಕೊಚ್ಚಿಹೋಗಿದ್ದ ಕುರುಬರಹಳ್ಳಿ ಪ್ರದೇಶಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಮತ್ತು ಅಧಿಕಾರಿಗಳ ತಂಡ ಭೇಟಿ ನೀಡಿದ್ದು, ಈ ವೇಳೆ ಸಂತ್ರಸ್ಥರ ಕುಟುಂಬ ಸಿಎಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿತು. ಈ ವೇಳೆ ಅಧಿಕಾರಿಗಳು ಹಾಗೂ ಸಿಎಂ ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡ ಮೃತರ ಸಂಬಂಧಿಕರು, ಪ್ರತೀ ಬಾರಿ ಮಳೆಯಾದಾಗಲೂ ಇದೇ ಪರಿಸ್ಥಿತಿ ಇರುತ್ತದೆ. ಇಂತಹ ದುರ್ಘಟನೆಗಳು ಸಂಭವಿಸಿದಾಗ ಅಧಿಕಾರಿಗಳು ಬರುತ್ತಾರೆ..ನೋಡಿಕೊಂಡು ಹೋಗುತ್ತಾರೆ. ಅದರೆ ಯಾವುದೇ ಕಾರ್ಯಗಳೂ ಆಗುವುದಿಲ್ಲ. ಹೀಗಾಗಿ ಕೂಡಲೇ ಸಂತ್ರಸ್ಥ ಕುಟುಂಬಕ್ಕೆ ಪರಿಹಾರ ನೀಡಿ ಎಂದು ಆಗ್ರಹಿಸಿದ್ದಾರೆ.
ಈ ವೇಳೆ ಸಂತ್ರಸ್ಥರನ್ನು ಸಂತೈಸಿದ ಸಿದ್ದರಾಮಯ್ಯ ಅವರು ತುರ್ತು ಕಾರ್ಯ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸುತ್ತೇನೆ ಎಂದು ಹೇಳಿದರು. ಅಲ್ಲದೆ ಮಳೆ ಅನಾಹುತದಲ್ಲಿ ಮೃತಪಟ್ಟ ಕುಟುಂಬಗಳಿಗೆ ತಕ್ಷಣ ಪರಿಹಾರ ನೀಡುವಂತೆ ಬಿಬಿಎಂಪಿ ಆಯುಕ್ತರಿಗೆ ಸೂಚಿಸಿದ್ದಾರೆ. ಮಳೆ ಪ್ರದೇಶಕ್ಕೆ ಸಿಎಂ ಭೇಟಿ ವೇಳೆ ಬಿಬಿಎಂಪಿ ಉಪಾಯುಕ್ತರೂ ಕೂಡ ತೆರಳಿದ್ದು, ಈ ವೇಳೆ ಬಿಬಿಎಂಪಿಯಿಂದ ಸಂತ್ರಸ್ಥರಿಗೆ ದೊರಯಬೇಕಿರುವ ಪರಿಹಾರವನ್ನು ತುರ್ತಾಗಿ ನೀಡುವಂತೆ ಆದೇಶ ನೀಡಿದ್ದಾರೆ. ಅಲ್ಲದೆ ಮಳೆ ಅನಾಹುತದ ಕುರಿತು ಬಿಬಿಎಂಪಿ ಉಪಾಯುಕ್ತರಿಂದ ಸಿಎಂ ಮಾಹಿತಿ ಪಡೆದಿದ್ದಾರೆ. ಆಯುಕ್ತ ಮಂಜುನಾಥ ಪ್ರಸಾದ್ ಅವರು ಮುಖ್ಯಮಂತ್ರಿಯವರಿಗೆ ಈ ಬಗ್ಗೆ ಮಾಹಿತಿ ನೀಡಿದರು. ಅಲ್ಲದೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಎಂಜಿನಿಯರ್ ಗಳಿಗೆ ಹಾಗೂ ಅಧಿಕಾರಿಗಳಿಗೆ ಸಿಎಂ ನಿರ್ದೇಶನ ನೀಡಿದ್ದಾರೆ.
ಅಲ್ಲದೆ ಬೆಂಗಳೂರಿನ ಸಚಿವರು, ಶಾಸಕರು, ಪಾಲಿಕೆಯ ಸದಸ್ಯರು ಆಯಾ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಸಿಎಂ ಸಿದ್ದರಾಮಯ್ಯ ನಿರ್ದೇಶನ ನೀಡಿದ್ದಾರೆ. ಇನ್ನು ಬೆಂಗಳೂರಿನಲ್ಲಿ ಇನ್ನೂ ನಾಲ್ಕು ದಿನ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಆದ್ದರಿಂದ ಹೆಚ್ಚಾಗಿ ಅನಾಹುತ ಸಂಭವಿಸುವ ಸಾಧ್ಯತೆಯಿರುವ ಪ್ರದೇಶಗಳಿಗೆ ಎಂಜಿನಿಯರುಗಳನ್ನು ಕಳುಹಿಸಿ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


