ಬೆಂಗಳೂರು ಮಳೆಗೆ ಮತ್ತೊಂದು ಬಲಿ: ಚರಂಡಿಯಲ್ಲಿ ಕೊಚ್ಚಿಹೋದ 16 ವರ್ಷದ ಬಾಲಕಿ
ಬೆಂಗಳೂರು ಮಹಾಮಳೆಗೆ ಮತ್ತೊಂದು ಜೀವ ಬಲಿಯಾಗಿದ್ದು, ಸಿವಿ ರಾಮನ್ ನಗರದ ಬಾಗ್ಮನೆ ಟೆಕ್ ಪಾರ್ಕ್ ಹಿಂಭಾಗದಲ್ಲಿರುವ ಒಳಚರಂಡಿಯಲ್ಲಿ 16 ವರ್ಷದ ಬಾಲಕಿ ನರಸಮ್ಮ ಕೊಚ್ಚಿಹೋಗಿದ್ದಾಳೆ.

Published On :
ಬೆಂಗಳೂರು: ಬೆಂಗಳೂರು ಮಹಾಮಳೆಗೆ ಮತ್ತೊಂದು ಜೀವ ಬಲಿಯಾಗಿದ್ದು, ಸಿವಿ ರಾಮನ್ ನಗರದ ಬಾಗ್ಮನೆ ಟೆಕ್ ಪಾರ್ಕ್ ಹಿಂಭಾಗದಲ್ಲಿರುವ ಚರಂಡಿಯಲ್ಲಿ 16 ವರ್ಷದ ಬಾಲಕಿ ನರಸಮ್ಮ ಕೊಚ್ಚಿಹೋಗಿದ್ದಾಳೆ.
ಭಾನುವಾರ ಬೆಳಿಗ್ಗೆ ಯುವತಿ ಚರಂಡಿಯ ಬಳಿ ಬಹಿರ್ದೆಸೆಗೆ ತೆರಳಿದ್ದಾಗ ಈ ಘಟನೆ ನಡೆದಿದ್ದು, ಸ್ಥಳೀಯರು ಬಾಲಕಿಯನ್ನು ರಕ್ಷಿಸಲು ಯತ್ನಿಸಿದರಾದರೂ ಸಹ ರಕ್ಷಣೆ ಯಶಸ್ವಿಯಾಗಲಿಲ್ಲ, ಗಂಟೆಗಳ ನಂತರ ಆಕೆಯ ಮೃತದೇಹ ಘಟನಾ ಸ್ಥಳದಿಂದ 400 ಮೀಟರ್ ದೂರದಲ್ಲಿ ಪತ್ತೆಯಾಗಿದೆ. ಸ್ಥಳೀಯರಿಗೆ ಮೃತದೇಹ ಪತ್ತೆಯಾಗಿರುವುದರಿಂದ ತುರ್ತು ಪರಿಸ್ಥಿತಿ ನಿರ್ವಹಣೆ ಮಾಡುವ ಸಿಬ್ಬಂದಿಗಳಿಗೆ ಮಾಹಿತಿ ನೀಡಿರಲಿಲ್ಲ ಎಂದು ಬೈಯ್ಯಪ್ಪನಹಳ್ಳಿ ಪೊಲೀಸರು ತಿಳಿಸಿದ್ದಾರೆ.
ಚರಂಡಿ ಬಳಿ ಬೇಲಿ ಹಾಕದಿದ್ದಕ್ಕೆ ಮೃತ ಯುವತಿಯ ಕುಟುಂಬ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದ್ದು ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


