ರಾಮನಗರ: ಮಳೆಗೆ ಮೂವರು ಬಲಿ
ರಾಮನಗರ ತಾಲ್ಲೂಕಿನ ತಿಮ್ಮಸಂದ್ರ ಗ್ರಾಮದ ಬಳಿ ಹಳ್ಳದಲ್ಲಿ ಮಳೆ ನೀರು ಹರಿಯುವುದನ್ನು

Published On :
ರಾಮನಗರ: ಜಿಲ್ಲೆಯಾದ್ಯಂತ ಸುರಿದ ಮಳೆಗೆ ಮೂವರು ಬಲಿಯಾಗಿದ್ದಾರೆ. ರಾಮನಗರ ತಾಲ್ಲೂಕಿನ ತಿಮ್ಮಸಂದ್ರ ಗ್ರಾಮದ ಬಳಿ ಹಳ್ಳದಲ್ಲಿ ಮಳೆ ನೀರು ಹರಿಯುವುದನ್ನು ಕಾಣಲು ಹೋಗಿದ್ದ ವೇಳೆ ಮಣ್ಣಿನ ದಿಬ್ಬ ಕುಸಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಅರಳೀಮರದ ದೊಡ್ಡಿ ಗ್ರಾಮದ ನಿವಾಸಿ ನಂದೀಶ್ (40) ಮೃತರು.
ಇಂದು ಬೆಳಿಗ್ಗೆ 9ರ ಸುಮಾರಿಗೆ ಮೊಬೈಲ್‌ನಲ್ಲಿ ಹಳ್ಳದ ಚಿತ್ರ ತೆಗೆಯುವಲ್ಲಿ ಮೈಮರೆತ ಸಂದರ್ಭ ಈ ಘಟನೆ ನಡೆಯಿತು ಎಂದು ಸ್ಥಳೀಯರು ತಿಳಿಸಿದರು. ಶವವನ್ನು ಹೊರಗೆ ತೆಗೆಯುವ ಕಾರ್ಯಾಚರಣೆ ನಡೆದಿದೆ.
ಸ್ಥಳಕ್ಕೆ ರಾಮನಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿದ್ದಾರೆ.ಬಿಡದಿಯ ನೆಲ್ಲಿಗುಡ್ಡ ಕೆರೆಯಲ್ಲಿ ಶನಿವಾರ ಸಂಜೆ ಮೀನಿನ ಬಲೆ ಹಾಕಲು ತೆರಳಿದ್ದ ಇಬ್ಬರು ಯುವಕರು ದೋಣಿ ಸಮೇತ ಕಾಣೆಯಾಗಿದ್ದಾರೆ.
ಅವರೆಗೆರೆ ಗ್ರಾಮದ ಉಮೇಶ(32) ಮತ್ತು ರವಿ(19) ಕಾಣೆಯಾದವರು. ಇತ್ತೀಚೆಗೆ ಕೋಡಿ ಹೊಡೆದಿದ್ದ ಕೆರೆಯ ನೀರಿನಲ್ಲಿ ಇಬ್ಬರೂ ಮುಳುಗಿ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶೋಧ ಕಾರ್ಯಾಚರಣೆ ನಡೆದಿದೆ.
ವಿದ್ಯುತ್ ತಗುಲಿ ಯುವಕ ಸಾವು
ಬಸವಕಲ್ಯಾಣದಲ್ಲಿ ನಿನ್ನೆ ಎಂಜಿನಿಯೆರಿಂಗ್ ಕಾಲೇಜಿನ ಕಟ್ಟಡದಲ್ಲಿ ನಿಂತಿದ್ದ ಮಳೆ ನೀರು ಖಾಲಿ ಮಾಡುವಾಗ ವಿದ್ಯುತ್ ಪ್ರವಹಿಸಿ ಯುವಕನೊಬ್ಬ ಮೃತಪಟ್ಟಿದ್ದಾನೆ. ಕೌಡಿಯಾಳದ ಅವಿನಾಶಿ ಹಿರೊಳ್ಳೆ (23) ಸಾವಿಗೀಡಾಗಿದ್ದು, ಬಸವಕಲ್ಯಾಣ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


