ರಾಜ್ಯ

ಮಹಾಮಳೆಗೆ ಬೆಂಗಳೂರು ತತ್ತರ: 1,880 ಕೋಟಿ ರು ಪ್ಯಾಕೇಜ್ ಗೆ ಕೇಂದ್ರಕ್ಕೆ ಜಾರ್ಜ್ ಮನವಿ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಹಾಮಳೆಯಿಂದ ಉಂಟಾಗಿರುವ ನಷ್ಟದ ಪ್ರಮಾಣವನ್ನು ಸರಿದೂಗಿಸಲು ಕೇಂದ್ರ ಸರ್ಕಾರ 1,880 ಕೋಟಿ ರು. ...

ಮಹಾಮಳೆಗೆ ಬೆಂಗಳೂರು ತತ್ತರ: 1,880 ಕೋಟಿ ರು ಪ್ಯಾಕೇಜ್ ಗೆ ಕೇಂದ್ರಕ್ಕೆ ಜಾರ್ಜ್ ಮನವಿ
ಕೆ.ಜೆ ಜಾರ್ಜ್
Published On :
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಹಾಮಳೆಯಿಂದ ಉಂಟಾಗಿರುವ ನಷ್ಟದ ಪ್ರಮಾಣವನ್ನು ಸರಿದೂಗಿಸಲು ಕೇಂದ್ರ ಸರ್ಕಾರ 1,880 ಕೋಟಿ ರು. ಪ್ಯಾಕೇಜ್ ನೀಡಬೇಕೆಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಮನವಿ ಮಾಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಒಂದು ತಿಂಗಳಿನಿಂದ ನಗರದಲ್ಲಿ ಸುರಿಯುತ್ತಿರುವ ಮಹಾಮಳೆಯಿಂದ 1,880 ಕೋಟಿ ರೂ.ಗೂ ಅಧಿಕ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ. ಈಗಾಗಲೇ ರಾಜ್ಯ ಸರ್ಕಾರ 100 ಕೋಟಿ ರು. ಬಿಡುಗಡೆ ಮಾಡಿದೆ.ರಾಜ್ಯ ಸರ್ಕಾರವೇ ಎಲ್ಲವನ್ನು ಭರಿಸಲು ಸಾಧ್ಯವಿಲ್ಲ. ಹಾಗಾಗಿ ಕೇಂದ್ರ ಸರ್ಕಾರವೂ ಕೈಜೋಡಿಸಬೇಕು, ಈ ನಿಟ್ಟಿನಲ್ಲಿ ರಾಜ್ಯವನ್ನು ಪ್ರತಿನಿಧಿಸುತ್ತಿರುವ ನಾಯಕರು ಕೇಂದ್ರಕ್ಕೆ ಒತ್ತಾಯಿಸಬೇಕು ಎಂದು ಮನವಿ ಮಾಡಿದ್ದಾರೆ.
ಆದರೆ ಕೇಂದ್ರಸರ್ಕಾರ  ಶಾಸಕರ  ಕ್ಷೇತ್ರಗಳ ಅಭಿವೃದ್ಧಿಗೆ  ಅನುದಾನ ಬಿಡುಗಡೆ ಮಾಡುತ್ತಿಲ್ಲ ಎಂದು ಹೇಳಿದ ಅವರುಸ 24 ಸಾವಿರ ಗುಂಡಿಗಳನ್ನು ಗುರುತಿಸಲಾಗಿದ್ದು, ಅದರಲ್ಲಿ 12 ಸಾವಿರಕ್ಕೂ ಹೆಚ್ಚು ಗುಂಡಿಗಳನ್ನು ಮುಚ್ಚಲಾಗಿದೆ ಎಂದು ಹೇಳಿದ್ದಾರೆ.
ಸಾರ್ವಜನಿಕರು ತಮ್ಮ ಕುಂದುಕೊರತೆಗಳನ್ನು ದಾಖಲಿಸಿಲು ಸಲುವಾಗಿ  ಜಾರ್ಜ್ ಬೆಂಗಳೂರು ಮಹಾನಗರ ಪ್ರಾದೇಶಿಕ ಅಭಿವೃದ್ಧಿ ಪ್ರಾಧಿಕಾರ ಕಚೇರಿಯಲ್ಲಿ  ಸಾಮಾಜಿಕ ಮಾಧ್ಯಮ ಕೇಂದ್ರಕ್ಕೆ ಚಾಲನೆ ನೀಡಿದರು. ಈ ಕೇಂದ್ರದಲ್ಲಿ  ನಾಗರಿಕರು ತಮಗೆ ಉಂಟಾಗುವ ಸಮಸ್ಯೆಗಳನ್ನು ಫೇಸ್ ಬುಕ್, ಟ್ವಿಟ್ಟರ್ ಮೂಲಕ, ಬಿಬಿಎಂಪಿ, ಬಿಡಿಎ ಹಾಗೂ ಬಿಡಬ್ಲ್ಯೂ ಎಸ್ ಎಸ್ ಬಿ ಗೆ ಸಲ್ಲಿಸಬಹುದು. ದೂರುಗಳನ್ನು ಆಲಿಸು ಅಧಿಕಾರಿಗಳು ಸಂಬಂಧಪಟ್ಟ ಇಲಾಖೆಗೆ ಮಾಹಿತಿ ನೀಡಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.