ರಾಜ್ಯ

ಬಿಜೆಪಿ ನಾಯಕರ ವಿರುದ್ಧ ವೈಯಕ್ತಿಕ ಟೀಕೆ ಮಾಡದಂತೆ ರಾಹುಲ್ ಗಾಂಧಿ ಹೇಳಿದ್ದಾರೆ: ಡಾ.ಜಿ.ಪರಮೇಶ್ವರ್

ಬಿಜೆಪಿ ನಾಯಕರ ವಿರುದ್ಧ ವೈಯಕ್ತಿಕ ಟೀಕೆ ಮಾಡಬೇಡಿ ಬದಲಿಗೆ ಮುಂಬರುವ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ...

ಬಿಜೆಪಿ ನಾಯಕರ ವಿರುದ್ಧ ವೈಯಕ್ತಿಕ ಟೀಕೆ ಮಾಡದಂತೆ ರಾಹುಲ್ ಗಾಂಧಿ ಹೇಳಿದ್ದಾರೆ: ಡಾ.ಜಿ.ಪರಮೇಶ್ವರ್
ಡಾ.ಜಿ.ಪರಮೇಶ್ವರ್
Published On :
ಬೆಂಗಳೂರು: ಬಿಜೆಪಿ ನಾಯಕರ ವಿರುದ್ಧ ವೈಯಕ್ತಿಕ ಟೀಕೆ ಮಾಡಬೇಡಿ ಬದಲಿಗೆ ಮುಂಬರುವ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಸ್ಥಳೀಯ ಮತ್ತು ರಾಷ್ಟ್ರದ ಆದ್ಯತೆಯ ವಿಷಯಗಳ ಕುರಿತು ಮಾತನಾಡಿ ಎಂದು ರಾಹುಲ್ ಗಾಂಧಿ ಕಿವಿಮಾತು ಹೇಳಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಹಿರಿಯ ನಾಯಕ ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯತಂತ್ರದ ಕುರಿತು ಚರ್ಚೆ ನಡೆಸಲು ಕಳೆದ 12ರಂದು ಕೆಪಿಸಿಸಿ ನಾಯಕ ಪರಮೇಶ್ವರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಪಕ್ಷದ ರಾಜ್ಯ ಉಸ್ತುವಾರಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ದೆಹಲಿಯಲ್ಲಿ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿದ್ದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ನ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಆಸ್ಕರ್ ಫೆರ್ನಾಂಡಿಸ್ ಮತ್ತು ಬಿ.ಕೆ.ಹರಿಪ್ರಸಾದ್ ಕೂಡ ಇದ್ದರು.
ಬಿಜೆಪಿ ನಾಯಕರ ವಿರುದ್ಧ ಯಾವುದೇ ರೀತಿಯ ವೈಯಕ್ತಿಕ ಟೀಕೆಗಳನ್ನು ಮಾಡಬೇಡಿ ಬದಲಿಗೆ ಸ್ಥಳೀಯ ಮತ್ತು ರಾಷ್ಟ್ರೀಯ ವಿಷಯಗಳ ಕುರಿತು ಬಿಜೆಪಿ ನಾಯಕರುಗಳನ್ನು ಇಕ್ಕಟ್ಟಿಗೆ ಸಿಲುಕಿಸಿ ಎಂದು ರಾಹುಲ್ ಗಾಂಧಿ ಹೇಳಿರುವುದಾಗಿ ಪರಮೇಶ್ವರ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.