ತುಮಕೂರು: ಚೀಟಿ ವ್ಯವಹಾರದಲ್ಲಿ ಜನರಿಗೆ ವಂಚಿಸಿದ್ದ ದಂಪತಿ ಆತ್ಮಹತ್ಯೆಗೆ ಶರಣು
ಚೀಟಿ ವ್ಯವಹಾರದಲ್ಲಿ ನೂರಾರು ಜನರಿಗೆ ವಂಚಿಸಿದ್ದ ದಂಪತಿಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರಿನ ಕೊರಟಗೆರೆ ಪಟ್ಟಣದಲ್ಲಿ ನಡೆದಿದೆ...

Published On :
ತುಮಕೂರು: ಚೀಟಿ ವ್ಯವಹಾರದಲ್ಲಿ ನೂರಾರು ಜನರಿಗೆ ವಂಚಿಸಿದ್ದ ದಂಪತಿಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರಿನ ಕೊರಟಗೆರೆ ಪಟ್ಟಣದಲ್ಲಿ ನಡೆದಿದೆ.
ರವಿ (48), ಪ್ರಭಾವತಿ (44) ಆತ್ಮಹತ್ಯೆಗೆ ಶರಣಾಗಿರುವ ದಂಪತಿಗಳಾಗಿದ್ದಾರೆ. ವಿಷ ಕುಡಿದಿರುವ ಪ್ರಭಾವತಿಯವರು ಕೊಠಡಿಯಲ್ಲಿ ಸಾವನ್ನಪ್ಪಿದ್ದಾರೆ, ರವಿಯವರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.
ರವಿ ಹಾಗೂ ಪ್ರಭಾ ಅವರು ಚೀಟಿ ವ್ಯವಹಾರ ನಡೆಸುತ್ತಿದ್ದರು. ಜನರಿಗೆ ಹಣ ನೀಡದೆ ಐಷಾರಾಮಿ ಜೀವನವನ್ನು ನಡೆಸುತ್ತಿದ್ದರು. ಇದರಿಂದ ಮೋಸ ಜನರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದರಂತೆ ಜನರಿಗೆ ವಂಚನೆ ಮಾಡಿದ ಆರೋಪ ಮೇರೆಗೆ ದಂಪತಿಗಳಿಬ್ಬರನ್ನು ಜೈಲಿಗೆ ಹೋಗಿದ್ದರು. ಬಳಿಕ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದರು.
ಇದೀಗ ಜನರಿಗೆ ಹಣವನ್ನು ಹಿಂತಿರುಗಿಸಲು ಸಾಧ್ಯವಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


