ಬೆಂಗಳೂರು: ಆಸ್ಪತ್ರೆಯ ಮಹಿಳಾ ಸಿಬ್ಬಂದಿ ಮೇಲೆ ಹೌಸ್ ಕೀಪಿಂಗ್ ಮ್ಯಾನೇಜರ್ ಅತ್ಯಾಚಾರ; ಆರೋಪಿ ಬಂಧನ
ನಗರದ ಪ್ರತಿಷ್ಠಿತ ಆಸ್ಪತ್ರೆಯ ಮಹಿಳಾ ಸಿಬ್ಬಂದಿ ಮೇಲೆ ಹೌಸ್ ಕೀಪಿಂಗ್ ಮ್ಯಾನೇಜರ್ ಅತ್ಯಾಚಾರ ಎಸಗಿದ್ದು ಈ ಸಂಬಂಧ ಆರೋಪಿಯನ್ನು ಪೊಲೀಸರು...

Published On :
ಬೆಂಗಳೂರು: ನಗರದ ಪ್ರತಿಷ್ಠಿತ ಆಸ್ಪತ್ರೆಯ ಮಹಿಳಾ ಸಿಬ್ಬಂದಿ ಮೇಲೆ ಹೌಸ್ ಕೀಪಿಂಗ್ ಮ್ಯಾನೇಜರ್ ಅತ್ಯಾಚಾರ ಎಸಗಿದ್ದು ಈ ಸಂಬಂಧ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಅಕ್ಟೋಬರ್ 15ರಂದು ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಹೌಸ್ ಕೀಪಿಂಗ್ ಸೂಪರ ವೈಯರ್ ಆಗಿದ್ದ ರಾಮಾಂಜಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಮಹಿಳಾ ಸಿಬ್ಬಂದಿಯನ್ನು ಬಾತ್ ರೂಂ ಕ್ಲೀನ್ ಮಾಡುವಂತೆ ಆರೋಪಿ ಆಸ್ಪತ್ರೆಯ 7ನೇ ಮಹಡಿಗೆ ಕಳುಹಿಸಿದ್ದಾನೆ. ನಂತರ ಅಲ್ಲಿಗೆ ತೆರಳಿದ ಆತ ಬಾಗಿಲು ಲಾಕ್ ಮಾಡಿ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ಇನ್ನು ಪ್ರತಿರೋಧ ತೋರಿದ್ದಕ್ಕೆ ವಿಷಯ ಬಹಿರಂಗಪಡಿಸುವುದಾಗಿ ಆರೋಪಿ ಬೆದರಿಕೆ ಹಾಕಿದ್ದಾನೆ ಎಂದು ಸಂತ್ರಸ್ತ ಮಹಿಳೆ ಆರೋಪಿಸಿದ್ದಾಳೆ.
ಘಟನೆ ನಂತರ ಸಂತ್ರಸ್ತ ಮಹಿಳೆ ಮನೆಗೆ ತೆರಳಿ ಪತಿಗೆ ಅತ್ಯಾಚಾರದ ಬಗ್ಗೆ ಮಾಹಿತಿ ನೀಡಿದ್ದಳು. ಈ ಬಗ್ಗೆ ಎಸ್ಆರ್ ನಗರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಆರೋಪಿಯನ್ನು ಬಂಧಿಸಿರುವ ಪೊಲೀಸರು ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುBengaluruಅತ್ಯಾಚಾರRapeHouse keeping ManagerHospital Staffಹೌಸ್ ಕೀಪಿಂಗ್ ಮ್ಯಾನೇಜರ್ಆಸ್ಪತ್ರೆ ಮಹಿಳಾ ಸಿಬ್ಬಂದಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


