ರಾಜ್ಯ

ಲಿಂಗಾಯತರು ಹಿಂದೂ ಧರ್ಮದ ಭಾಗವಲ್ಲ: ಎಸ್.ಎಂ ಜಾಮದಾರ್

ಲಿಂಗಾಯತರು ಹಿಂದೂ ಧರ್ಮದ ಭಾಗವೇ ಆಗೀದ್ದಾರೆ ಎಂಬ ಪೇಜಾವರ ಶ್ರೀಗಳ ಹೇಳಿಕೆ ಬಗ್ಗೆ ನಿವೃತ್ತ ಐಎಎಸ್ ಅಧಿಕಾರಿ ಹಾಗೂ ಲಿಂಗಾಯಿತ ಧರ್ಮ...

ಲಿಂಗಾಯತರು ಹಿಂದೂ ಧರ್ಮದ ಭಾಗವಲ್ಲ: ಎಸ್.ಎಂ ಜಾಮದಾರ್
ಎಸ್.ಎಂ ಜಾಮದಾರ್
Published On :
ಬೆಂಗಳೂರು:  ಲಿಂಗಾಯತರು ಹಿಂದೂ ಧರ್ಮದ ಭಾಗವೇ ಆಗೀದ್ದಾರೆ ಎಂಬ ಪೇಜಾವರ ಶ್ರೀಗಳ ಹೇಳಿಕೆ ಬಗ್ಗೆ  ನಿವೃತ್ತ ಐಎಎಸ್ ಅಧಿಕಾರಿ ಹಾಗೂ ಲಿಂಗಾಯಿತ ಧರ್ಮ ಹೋರಾಟ ಸಮಿತಿ ಕಾರ್ಯದರ್ಶಿ ಎಸ್ .ಎಂ ಜಾಮದಾರ್ ಕಿಡಿಕಾರಿದ್ದಾರೆ.
ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟದ ಬಗ್ಗೆ ಪೇಜಾವರ ಶ್ರೀಗಳು ಅನಗತ್ಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅವರು ಲಿಂಗಾಯತ ಹೋರಾಟಕ್ಕೆ ಭಯಗೊಂಡಿರುವರೇ ಅಥವಾ ಇದರ ಹಿಂದೆ ಏನಾದರೂ ಹುನ್ನಾರ ಇದೆಯೇ' ಎಂದು ಪ್ರಶ್ನಿಸಿದ್ದಾರೆ.
21ನೇ ಶತಮಾನದಿಂದಲೂ ಸಮುದಾಯ ಪ್ರತ್ಯೇಕವಾಗಿಯೇ ಇದೆ. ಹಿಂದೂ ಮಠಾಧೀಶರು ಮತ್ತು ಆರ್ ಎಸ್ ಎಸ್ ಮುಖಂಡರು, ಇದನ್ನು ವಿರೋಧಿಸುತ್ತಲೇ ಬಂದಿದ್ದಾರೆ. ಹಿಂದೂ ಧರ್ಮವನ್ನು ಬಿಟ್ಟರೇ ಯಾವುದೇ ಜಾತಿವಾದವಿಲ್ಲ, ಲಿಂಗಾಯತ ಧರ್ಮದಲ್ಲಿರುವ ಹೋಮ, ಯಜ್ಞ, ಸಂಪ್ರದಾಯಗಳಿಗೆ ಯಾವುದೇ ಮಹತ್ವವಿಲ್ಲ, ಶಿವ ಭಕ್ತರೆಲ್ಲ ಹಿಂದೂಗಳಲ್ಲ. ಶಿವನನ್ನು ಪೂಜಿಸುವ ಕೆಲವು ಜನರನ್ನು ಮಾತ್ರ ಹಿಂದೂಗಳೆನ್ನಬಹುದು ಎಂದು ಹೇಳಿದ್ದಾರೆ.
ಪ್ರಕರಣ ಸಂಬಂಧ ಪೇಜಾವರ ಶ್ರಿಗಳಿಗೆ ಬಹಿರಂಗ ಸವಾಲು ಹಾಕಿರುವ ಜಾಮದಾರ್ ಲಿಂಗಾತ ಧರ್ಮ ಹಿಂದೂ ಧರ್ಮಕ್ಕಿಂತ ಭಿನ್ನವಾದದ್ದು, ಈ ಸಂಬಂಧ ಸಾರ್ವಜನಿಕ ಚರ್ಚೆಗೆ ಶ್ರೀಗಳು ಬರಲಿ ಎಂದು ಆಹ್ವಾನ ನೀಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.