100 ಸಿಸಿ ಗಿಂತ ಕಡಿಮೆ ಸಾಮರ್ಥ್ಯದ ದ್ವಿಚಕ್ರ ವಾಹನ, ಹಿಂಬದಿ ಸವಾರರಿಗೆ ಅವಕಾಶವಿಲ್ಲ
100 ಸಿಸಿ.ಗೆ ಕಡಿಮೆ ಎಂಜಿನ್ ಸಾಮರ್ಥ್ಯದ ದ್ವಿಚಕ್ರ ವಾಹನಗಳಲ್ಲಿ ಹಿಂಬದಿ ಸವಾರರು ಪ್ರಯಾಣಿಸುವುದನ್ನು ನಿಷೇಧಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

Published On :
ಬೆಂಗಳೂರು: 100 ಸಿಸಿ.ಗೆ ಕಡಿಮೆ ಎಂಜಿನ್ ಸಾಮರ್ಥ್ಯದ ದ್ವಿಚಕ್ರ ವಾಹನಗಳಲ್ಲಿ ಹಿಂಬದಿ ಸವಾರರು ಪ್ರಯಾಣಿಸುವುದನ್ನು ನಿಷೇಧಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. 100 ಸಿಸಿ ಗಿಂತಲೂ ಕಡಿಮೆ ಸಾಮರ್ಥ್ಯವಿರುವ ದ್ವಿಚಕ್ರ ವಾಹನಗಳಲ್ಲಿ ಹಿಂಬದಿ ಸೀಟುಗಳನ್ನು ಸೇರಿಸಬಾರದೆಂದು ರಾಜ್ಯ ಸರ್ಕಾರ ದ್ವಿಚಕ್ರ ವಾಹನ ತಯಾರಕರಲ್ಲಿ ಮನವಿ ಮಾಡಿದೆ.
ಕರ್ನಾಟಕ ಹೈಕೋರ್ಟ್‌ನ ಇತ್ತೀಚಿನ ಆದೇಶದ ಅನುಸಾರ , 100 ಸಿಸಿ.ಗೆ ಕಡಿಮೆ ಎಂಜಿನ್ ಸಾಮರ್ಥ್ಯದ ದ್ವಿಚಕ್ರ ವಾಹನಗಳಲ್ಲಿ, ಹಿಂಬದಿ ಸವಾರರ ಸೀಟು ಹೊಂದಿರುವ ದಿಚಕ್ರ ವಾಹನಗಳ ನೋಂದಣಿ ಮಾಡದಂತೆ ಎಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಸಾರಿಗೆ ಇಲಾಖೆ ನಿರ್ದೇಶನ ನೀಡಿದೆ.
"ಕರ್ನಾಟಕ ಮೋಟಾರು ವಾಹನ ಕಾಯ್ದೆ–1989 ಪ್ರಕಾರ 100 ಸಿಸಿ ಗಿಂತ ಕಡಿಮೆ ಸಾಮರ್ಥ್ಯದ ಎಂಜಿನ್ ಹೊಂದಿರುವ ದ್ವಿಚಕ್ರ ವಾಹನಗಳಲ್ಲಿ ಹಿಂಬದಿಯ ಸವಾರರು ಪ್ರಯಾಣ ಮಾಡುವಂತಿಲ್ಲ. ಆದರೆ, ದಿಚಕ್ರ ವಾಹನ ತಯಾರಿಕಾ ಸಂಸ್ಥೆಗಳು ಈ ಕಾನೂನು ಪಾಲಿಸುತ್ತಿರಲಿಲ್ಲ" ಎಂದು ಸಾರಿಗೆ ಇಲಾಕೆ ಅಧಿಕಾರಿಯೊಬ್ಬರು ತಿಳಿಸಿದರು.
ಇತ್ತೀಚೆಗೆ ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ಕರ್ನಾಟಕ ಮೋಟಾರು ವಾಹನ ಕಾಯ್ದೆ–1989 ಅನ್ನು ಕಟ್ಟು ನಿತ್ತಾಗಿ ಜಾರಿಗೆ ತರುವಂತೆ ಆದೇಶಿಸಿತ್ತು. ಇದೀಗ ರಾಜ್ಯ ಸರ್ಕಾರ ಕಾಯ್ದೆ ಜಾರಿಗೆ ಮುಂದಾಗಿದ್ದು ಈ ಕುರಿತಂತೆ ಇದೇ 16 ರಂದು ಸಾರಿಗೆ ಇಲಾಖೆ ನೋಟೀಸ್ ಹೊರಡಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
two-wheelersದ್ವಿಚಕ್ರ ವಾಹನ100cc enginespillion seatsKarnataka Motor Vehicle Rules100 ಸಿಸಿ ಎಂಜಿನ್ಹಿಂಬದಿಯ ಸೀಟುಕರ್ನಾಟಕ ಮೋಟಾರ್ ವಾಹನ ಕಾಯ್ದೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


