ಕಲ್ಬುರ್ಗಿ: ಎರಡು ಪ್ರತ್ಯೇಕ ಪ್ರಕರಣ, ಇಬ್ಬರ ಹತ್ಯೆ
ಕಲ್ಬುರ್ಗಿ ಜಿಲ್ಲೆಯಲ್ಲಿ ನಡೆದ ಎರಡು ಪ್ರತ್ಯೇಕ ಕೊಲೆ ಪ್ರಕರಣಗಳಲ್ಲಿ ಓರ್ವ ಮಹಿಳೆ ಮತ್ತು ಯುವಕನೊಬ್ಬ ಮೃತಪಟ್ಟಿದ್ದಾರೆ.

Published On :
ಕಲ್ಬುರ್ಗಿ: ಕಲ್ಬುರ್ಗಿ ಜಿಲ್ಲೆಯಲ್ಲಿ ನಡೆದ ಎರಡು ಪ್ರತ್ಯೇಕ ಕೊಲೆ ಪ್ರಕರಣಗಳಲ್ಲಿ ಓರ್ವ ಮಹಿಳೆ ಮತ್ತು ಯುವಕನೊಬ್ಬ ಮೃತಪಟ್ಟಿದ್ದಾರೆ.
ಜಿಲ್ಲೆಯ ಚಿತ್ತಾಪುರ ತಾಲ್ಲೂಕು ಶಹಾಬಾದ ಪಟ್ಟಣದಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕೊಲೆ ಮಾಡಿದ ಘಟನೆ ನಡೆದರೆ ಇನ್ನೊಂದೆಡೆ ಕಲ್ಬುರ್ಗಿಯ ಬ್ರಹ್ಮಪುರ ಬಡಾವಣೆಯಲ್ಲಿ ಚಾಕುವಿನಿಂದ ಇರಿದು ಯುವಕನೊಬ್ಬನನ್ನು ಕೊಲೆ ಗೈಯಲಾಗಿದೆ.
ಮೊದಲ ಪ್ರಕರಣದಲ್ಲಿ ನಾಗಪ್ಪ ಎನ್ನುವ ವ್ಯಕ್ತಿ ಸಾಕಷ್ಟು ಸಾಲ ಮಾಡಿದ್ದ ಕಾರಣ ಇದನ್ನು ಪ್ರಶ್ನಿಸಿದ್ದ ತನ್ನ ಪತ್ನಿ ಶಿವಮ್ಮನನ್ನು ಕೊಡಲಿಯಿಂದ ಹೊಡೆದು ಕೊಂದಿದ್ದಾನೆ. ಶಿವಮ್ಮ (30) ಸ್ಥಳದಲ್ಲೇ ಸಾವನ್ನಪ್ಪಿದ್ದು ನಾಗಪ್ಪ ತಲೆ ಮರೆಸಿಕೊಂಡಿದ್ದಾನೆ. ಶಹಾಬಾದ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲ್ಬುರ್ಗಿಯ ಬ್ರಹ್ಮಪುರದ ರಾಯರ ಗುಡಿ ಹತ್ತಿರದಲ್ಲಿ ದುಷ್ಕರ್ಮಿಗಳ ಗುಂಪು ಯುವಕನೊಬ್ಬನ ಮೇಲೆ ದಾಳಿ ನಡೆಸಿದ್ದು ಸಂಗಮೇಶ ಸಿದ್ರಾಮಪ್ಪ ನಂದರಗಿ (18) ದಾಳಿಗೊಳಗಾದ ಯುವಕ. ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಯುವಕ ಮೃತಪಟ್ಟಿದ್ದಾನೆ. ಇದು ಗ್ಯಾಂಗ್ ವಾರ್ ಎನ್ನಲಾಗಿದ್ದು ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
gulbargaಕಲ್ಬುರ್ಗಿtwo separate murder caseShahabadThe group attacked a young manಎರಡು ಪ್ರತ್ಯೇಕ ಕೊಲೆ ಪ್ರಕರಣಶಹಾಬಾದಪುಂದರ ಗುಂಪಿನಿಂದ ಯುವಕನ ಮೇಲೆ ಹಲ್ಲೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


