ದೇವನಹಳ್ಳಿ: ಕೆರೆಯಲ್ಲಿ ನೀರು ತರಲು ಹೋಗಿದ್ದ ಇಬ್ಬರು ಬಾಲಕಿಯರು ಸಾವು
ನೀರು ತರಲು ತೆರಳಿದ್ದ ಇಬ್ಬರು ಬಾಲಕಿಯರು ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

Published On :
ದೇವನಹಳ್ಳಿ: ನೀರು ತರಲು ತೆರಳಿದ್ದ ಇಬ್ಬರು ಬಾಲಕಿಯರು ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಐಬಸಾಪುರ ಗ್ರಾಮದಲ್ಲಿ ಈ ದುರ್ಘಟನೆ ಸಂಬವಿಸಿದ್ದು ಗ್ರಾಮದ ನಿವಾಸಿಗಳಾದ ಮಾನಸಾ (12), ಲಕ್ಷ್ಮೀ (13) ಮೃತರು ಎಂದು ಗುರುತಿಸಲಾಗಿದೆ.
ಜೋಳದ ಬೆಳೆಗೆ ನೀರು ಹಾಕುವುದಕ್ಕಾಗಿ ಕೆರೆಗೆ ತೆರಳಿದ್ದ ಮಾನಸಾ, ಲಕ್ಷ್ಮೀ ಮತ್ತು ಶಶಾಂಕ್ ಕೆರೆಯಿಂದ ನೀರು ಎತ್ತಿಕೊಂಡು ಹೋಗುತ್ತಿದ್ದಾಗ ಕಾಲು ಜಾರಿದ ಕಾರಣ ಮೂವರೂ ನೀರಿಗೆ ಬಿದ್ದಿದ್ದರು. ಸ್ಥಳದಲ್ಲಿದ್ದ ರಾಜಣ್ಣ ಎನ್ನುವವರು ಬಾಲಕ ಶಶಾಂಕ್ ನನ್ನ ರಕ್ಷಣೆ ಮಾಡಿದ್ದಾರೆ. ಆದರೆ ಅಷ್ಟ್ರಲ್ಲಾಗಲೇ ನೀರಿನಲ್ಲಿ ಮುಳುಗಿದ್ದ ಮಾನಸಾ ಮತ್ತು ಲಕ್ಷ್ಮೀ ಮೃತಪಟ್ಟಿದ್ದಾರೆ.
ಚನ್ನರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Devanahalliದೇವನಹಳ್ಳಿTwo girls were drowned and deadlake waterChannarayapatna Police Stationಇಬ್ಬರು ಬಾಲಕಿಯರು ನೀರಲ್ಲಿ ಮುಳುಗಿ ಸಾವುಕೆರೆಯ ನೀರುಚೆನ್ನರಾಯಪಟ್ತಣ ಪೋಲೀಸ್ ಠಾಣೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


