ಟಿಪ್ಪು ಅಪ್ರತಿಮ ವೀರ, ಬ್ರಿಟಿಷರ ವಿರುದ್ದ ಹೋರಾಡಿ ವೀರಮರಣ ಹೊಂದಿದ: ರಾಷ್ಟ್ರಪತಿ ಕೋವಿಂದ್
ಒಂದೆಡೆ ಸಿದ್ದರಾಮಯ್ಯ ಸರ್ಕಾರದ ಟಿಪ್ಪು ಜಯಂತಿ ಆಚರಣೆಗೆ ಬಿಜೆಪಿ ಪಕ್ಷ ತೀವ್ರ ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಈ ಹಿಂದೆ ಬಿಜೆಪಿ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮೈಸೂರು ಹುಲಿ ಟಿಪ್ಪು ಸುಲ್ತಾನ್ ರನ್ನು ಕೊಂಡಾಡಿದ್ದಾರೆ.

Published On :
ಬೆಂಗಳೂರು: ಒಂದೆಡೆ ಸಿದ್ದರಾಮಯ್ಯ ಸರ್ಕಾರದ ಟಿಪ್ಪು ಜಯಂತಿ ಆಚರಣೆಗೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಈ ಹಿಂದೆ ಬಿಜೆಪಿ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮೈಸೂರು ಹುಲಿ ಟಿಪ್ಪು ಸುಲ್ತಾನ್ ರನ್ನು ಕೊಂಡಾಡಿದ್ದಾರೆ.
ಇಂದು ವಿಧಾನಸೌಧದ ವಜ್ರ ಮಹೋತ್ಸವ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಜಂಟಿ ಸದನ ಉದ್ದೇಶಿಸಿ ಭಾಷಣ ಮಾಡಿದ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು, ರಾಜ್ಯದ ಇತಿಹಾಸವನ್ನು ಮೆಲುಕು ಹಾಕಿದರು. ಸೇನೆಯಲ್ಲಿ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಂಡಿದ್ದ ಟಿಪ್ಪು ಸುಲ್ತಾನ್ ಒಬ್ಬ ಅಪ್ರತಿಮ ವೀರನಾಗಿದ್ದ. ಸ್ವಾತಂತ್ರ್ಯ ಹೋರಾಟದಲ್ಲಿ ಬ್ರಿಟಿಷರ ವಿರುದ್ಧ ಹೋರಾಡಿ ವೀರಮರಣ ಹೊಂದಿದ ಎಂದು ಕೊಂಡಾಡಿದರು.
ಟಿಪ್ಪು ಸುಲ್ತಾನ್ ಯುದ್ಧಭೂಮಿಯಲ್ಲಿ ಮೈಸೂರು ರಾಕೆಟ್ ಬಳಸಿದ ಅಪ್ರತಿಮ ನಾಯಕ. ಟಿಪ್ಪು ರೂಪಿಸಿದ್ದ ರಾಕೆಟ್ ತಂತ್ರಜ್ಞಾನವನ್ನು ಯುರೋಪಿಯನ್ನರು ನಂತರ ಬಳಸಿಕೊಂಡರು ಎಂದು ರಾಷ್ಟ್ರಪತಿಗಳು ಹೇಳಿದರು.
ಕರ್ನಾಟಕ ವೀರ ಯೋಧರ ಭೂಮಿಯಾಗಿದ್ದು, ರಾಣಿ ಅಬ್ಬಕ್ಕ, ವಿಜಯನಗರದ ಅರಸರು, ಕಿತ್ತೂರು ರಾಣಿ ಚೆನ್ನಮ್ಮ, ಕೇಂಪೇಗೌಡ ಅವರು ಇಲ್ಲಿ ರಾಜ್ಯವನ್ನಾಳಿದ್ದಾರೆ. ಅಂತೆಯೇ ಮೈಸೂರನ್ನು ಆಳಿದ್ದ ಟಿಪ್ಪು ಸುಲ್ತಾನ್ ಅಪ್ರತಿಮ ವೀರ ಯೋಧನಾಗಿದ್ದ. ರಾಕೆಟ್ ತಂತ್ರಜ್ಞಾನದ ಜನಕನಾಗಿದ್ದ ಟಿಪ್ಪು ಎಂದು ಕೋವಿಂದ್ ಕೊಂಡಾಡಿದ್ದಾರೆ.
ಅತ್ತ ಕೋವಿಂದ್ ಅವರ ಬಾಯಲ್ಲಿ ಟಿಪ್ಪು ಸುಲ್ತಾನ್ ಹೆಸರು ಕೇಳುತ್ತಿದ್ದಂತೆಯೇ ಕಾಂಗ್ರೆಸ್ ಶಾಸಕರು ಮೇಜು ತಟ್ಟಿ ತಮ್ಮ ಹರ್ಷ ವ್ಯಕ್ತಪಡಿಸಿದರೆ, ಇತ್ತ ಸದನದಲ್ಲಿದ್ದ ಬಿಜೆಪಿ ಸದಸ್ಯರು ಪೇಚು ಮೊರೆ ಹಾಕಿಕೊಂಡಿರುವುದು ಕಂಡುಬಂತು. ಕೋವಿಂದ್ ಅವರ ಈ ಭಾಷಣ ಇದೀಗ ಟಿಪ್ಪು ಜಯಂತಿ ವಿರೋಧಿಸುತ್ತಿರುವ ಬಿಜೆಪಿ ಪಕ್ಷದ ಮುಖಂಡರಿಗೆ ಮುಜುಗರವನ್ನುಂಟು ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುBengaluruKarnatakaTipu sultanಟಿಪ್ಪು ಸುಲ್ತಾನ್President Kovind60th anniversary of Vidhana Soudhaವಿಧಾನಸೌಧದ 60ನೇ ವಾರ್ಷಿಕೋತ್ಸವರಾಷ್ಟ್ರಪತಿ ರಾಮನಾಥ್ ಕೋವಿಂದ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


