ವಿಧಾನಸೌಧ ವಜ್ರ ಮಹೋತ್ಸವಕ್ಕೆ ಕೋಟಿ ಕೋಟಿ ಖರ್ಚು ಪ್ರಶ್ನಿಸಿ ಹೈ ಕೋರ್ಟ್ ನಲ್ಲಿ ಪಿಐಎಲ್
ವಿಧಾನಸೌಧ ವಜ್ರಮಹೋತ್ಸವ ಆಚರಣೆಗೆ ಕೋಟಿ ಕೋಟಿ ಹಣ ವ್ಯಯಿಸುತ್ತಿರುವ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದೆ.

Published On :
ಬೆಂಗಳೂರು: ವಿಧಾನಸೌಧ ವಜ್ರಮಹೋತ್ಸವ ಆಚರಣೆಗೆ ಕೋಟಿ ಕೋಟಿ ಹಣ ವ್ಯಯಿಸುತ್ತಿರುವ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದೆ.
ರಾಜ್ಯದ ಜನರ ತೆರಿಗೆ ಹಣವನ್ನು ವಜ್ರಮಹೋತ್ಸವಕ್ಕೆ ವ್ಯಯಿಸಲಾಗುತ್ತಿದ್ದು, ಈ ಮೊತ್ತ ಭಾರಿ ದುಬಾರಿಯಾಗಿದೆ. ವಜ್ರಮಹೋತ್ಸವವನ್ನು ಸರಳವಾಗಿ ಆಚರಿಸಬಹುದಿತ್ತು ಎಂದು ಹೇಳಿ ವಕೀಲರಾದ ಎಸ್.ಎನ್ ಅರವಿಂದ ಎಂಬುವರು ಅರ್ಜಿ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ.
ಈ ಬಗ್ಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ವಿಧಾನಸಭಾಧ್ಯಕ್ಷರು ಹಾಗೂ ಆಡಳಿತ ವಿಭಾಗಕ್ಕೆ ನಿರ್ದೇಶನ ನೀಡುವಂತೆ ಎಸ್ ಎನ್ ಅರವಿಂದ್ ಅವರು ಹೈಕೋರ್ಟ್ ಗೆ ತಾವು ಸಲ್ಲಿಸಿರುವ ಅರ್ಜಿಯಲ್ಲಿ ಕೋರಿದ್ದಾರೆ. ಇನ್ನು ನಿನ್ನೆಯೇ ಈ ಅರ್ಜಿ ವಿಚಾರಣೆಗೆ ಬರಬೇಕಿತ್ತು. ಈ ಬಗ್ಗೆ ಅರ್ಜಿದಾರರ ಪರ ವಕೀಲರು ಹಂಗಾಮಿ ನ್ಯಾಯಮೂರ್ತಿ ಎಚ್ .ಜಿ ರಮೇಶ್ ಹಾಗೂ ನ್ಯಾ. ಪಿ.ಎಸ್ ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ಪೀಠಕ್ಕೆ ಜ್ಞಾಪನಾ ಪತ್ರ ಸಲ್ಲಿಸಿದ್ದರು. ಆದರೆ, ವಿಚಾರಣೆಗೆ ಬರಲಿಲ್ಲ. ಹೀಗಾಗಿ ಬಹುತೇಕ ಬುಧವಾರ ವಿಚಾರಣೆ ನಡೆಯುವ ಸಾಧ್ಯತೆಯಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುBengaluruPILKarnataka High Courtಪಿಐಎಲ್60th anniversary of Vidhana Soudhaವಿಧಾನಸೌಧದ 60ನೇ ವಾರ್ಷಿಕೋತ್ಸವಕರ್ನಾಟಕ ಉಚ್ಛ ನ್ಯಾಯಾಲಯ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


