ಪ್ರಜಾಪ್ರಭುತ್ವ ಇತಿಹಾಸದಲ್ಲಿ ಇದೊಂದು ಸ್ಮರಣೀಯ ದಿನ: ರಾಷ್ಟ್ರಪತಿ ಕೋವಿಂದ್
ಪ್ರಜಾಪ್ರಭುತ್ವ ಇತಿಹಾಸದಲ್ಲಿ ಇದೊಂದು ಸ್ಮರಣೀಯ ದಿನವಾಗಿದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಬುಧವಾರ ಹೇಳಿದ್ದಾರೆ.

Published On :
ಬೆಂಗಳೂರು: ಪ್ರಜಾಪ್ರಭುತ್ವ ಇತಿಹಾಸದಲ್ಲಿ ಇದೊಂದು ಸ್ಮರಣೀಯ ದಿನವಾಗಿದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಬುಧವಾರ ಹೇಳಿದ್ದಾರೆ.
ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸಿರುವ ರಾಷ್ಟ್ರಪತಿ ಕೋವಿಂದ್ ಅವರು, ರಾಜ್ಯದ ಶಕ್ತಿ ಸೌಧ ವಿಧಾನಸೌಧಕ್ಕೆ 60 ವರ್ಷ ತುಂಬಿರುವ ಹಿನ್ನಲೆಯಲ್ಲಿ ಇಂದು ನಡೆಯುತ್ತಿರುವ ವಿವಿಧ ವಿಶೇಷ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದಾರೆ. ಅಂತೆಯೇ ಇಂದು ವಿಧಾನಮಮಂಡಲ ವಿಶೇಷ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ಕೋವಿಂದ್ ಅವರು, ಪ್ರಜಾಪ್ರಭುತ್ವ ಇತಿಹಾಸದಲ್ಲಿ ಇದೊಂದು ಸ್ಮರಣೀಯ ದಿನವಾಗಿದೆ. 3 ತಿಂಗಳ ಹಿಂದೆ ಇದೇ ದಿನ ನಾನು ಅಧಿಕಾರ ಸ್ವೀಕಾರ ಮಾಡಿದ್ದೆ, ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಕರ್ನಾಟಕಕ್ಕೆ ನನ್ನ ಮೊದಲ ಭೇಟಿ ಎಂದು ಹೇಳಿದ್ದಾರೆ.
ವಿಜ್ಞಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಕರ್ನಾಟಕದ ಕೊಡುಗೆ ಅಪಾರವಾಗಿದ್ದು, ಸರ್ ಎಂ ವಿಶ್ವೇಶ್ವರಯ್ಯನವರು ನವ ಕರ್ನಾಟಕದ ನಿರ್ಮಾತೃಗಳಾಗಿದ್ದಾರೆ. ಅಂತೆಯೇ ಕರ್ನಾಟಕದ ಕಲಬುರಗಿ ಸೂಫಿ ಸಂತರ ನೆಲೆ ವೀಡಾಗಿದೆ ಎಂದು ಕೋವಿಂದ್ ಹೇಳಿದರು. ಇನ್ನು ತಮ್ಮ ಭಾಷಣದಲ್ಲಿ ಕೋವಿಂದ್ ರಾಜ್ಯದ ಸಿಎಂಗಳನ್ನು ಸ್ಮರಿಸಿದರು.
ದೇವೇಗೌಡರ ಹೆಸರಿಲ್ಲದ್ದಕ್ಕೆ ಜೆಡಿಎಸ್ ಆಕ್ಷೇಪ, ನಗುತ್ತಲೇ ಉತ್ತರಿಸಿದ ಕೋವಿಂದ್
ಇದೇ ವೇಳೆ ರಾಷ್ಟ್ರಪತಿ ಕೋವಿಂದ್ ಅವರ ಭಾಷಣದಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರ ಹೆಸರನ್ನು ಪ್ರಸ್ತಾಪಿಸಲಿಲ್ಲ ಎಂದು ಆರೋಪಿಸಿ ಜೆಡಿಎಸ್ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. ಇದಕ್ಕೆ ನಗುತ್ತಲೇ ಉತ್ತರಿಸಿದ ರಾಷ್ಟ್ರಪತಿ ಕೋವಿಂದ್ ಅವರು, "ದೇವೇಗೌಡರು ಪ್ರಧಾನಿಯಾಗಿದ್ದವರು ಮತ್ತು ನನ್ನ ಸ್ನೇಹಿತರು. ನಾನಿಲ್ಲಿ ಕೆಲವರ ಹೆಸರನ್ನು ಮಾತ್ರ ಹೇಳಿದ್ದೇನೆ ಅಷ್ಟೇ.. ಆದರೆ ಕರ್ನಾಟಕಕ್ಕೆ ದೇವೇಗೌಡರ ಕೊಡುಗೆ ಮರೆಯಲು ಸಾಧ್ಯವಿಲ್ಲ ಎಂದು ಹೇಳಿ ಜೆಡಿಎಸ್ ಸದಸ್ಯರ ಸಮಾಧಾನಗೊಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುBengaluruKarnatakaರಾಷ್ಟ್ರಪತಿ ರಾಮನಾಥ್ ಕೋವಿಂದ್President Kovind60th anniversary of Vidhana Soudhaವಿಧಾನಸೌಧದ 60ನೇ ವಾರ್ಷಿಕೋತ್ಸವ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


