ಬೆಂಗಳೂರು: ಮಠದಲ್ಲಿ ಕಾಮಕೇಳಿ, ವೀಡಿಯೋ ಬಹಿರಂಗ
ಬೆಂಗಳೂರಿನ ಯಲಹಂಕದಲ್ಲಿರುವ ಇತಿಹಾಸ ಪ್ರಸಿದ್ದ ಮದ್ದೇವಣಾಪುರ ಮಹಾದೇವ ಸಂಸ್ಥಾನ ಮಠದ ಉತ್ತರಾಧಿಕಾರಿ ಎನ್ನಲಾಗಿದ್ದ ಗುರುನಂಜೇಶ್ವರ ಸ್ವಾಮೀಜಿ ಮಹಿಳೆಯ ಜೊತೆ...

Published On :
ಬೆಂಗಳೂರು: ಬೆಂಗಳೂರಿನ ಯಲಹಂಕದಲ್ಲಿರುವ ಇತಿಹಾಸ ಪ್ರಸಿದ್ದ ಮದ್ದೇವಣಾಪುರ ಮಹಾದೇವ ಸಂಸ್ಥಾನ ಮಠದ ಉತ್ತರಾಧಿಕಾರಿ ಎನ್ನಲಾಗಿದ್ದ ಗುರುನಂಜೇಶ್ವರ ಸ್ವಾಮೀಜಿ ಮಹಿಳೆಯ ಜೊತೆ ರಾಸಲೀಲೆಯಲ್ಲಿ ತೊಡಗಿರುವ ವಿಡಿಯೋ ಬಹಿರಂಗವಾಗಿದೆ.
ಮಠದ ಹಾಲಿ ಪೀಠಾಧಿಪತಿಯಾಗಿರುವ ಶೀವಾಚಾರ್ಯ ಸ್ವಾಮೀಜಿ ಪುತ್ರನಾಗಿರುವ ದಯಾನಂದ ಎಂಬಾತ ರಾಸಲೀಲೆಯಲ್ಲಿ ತೊಡಗಿರುವ ದೃಶ್ಯ ಇಂದು ಟೀವಿ ಮಾಧ್ಯಮಗಳಲ್ಲಿ ಪ್ರಸಾರವಾಗಿವೆ. ಮಠದ ಒಳಗೇ ಈ ರಾಸಲೀಲೆ ನಡೆದಿದೆ ಎನ್ನಲಾಗಿದೆ.
ವಿರಶೈವ ಪೀಠಕ್ಕೆ ಶಿವಾಚಾರ್ಯ ಶ್ರೀಗಳು 2011ರಲ್ಲಿ ಉತ್ತರಾಧಿಕಾರಿಯನ್ನಾಗಿ ತನ್ನ ಪುತ್ರ ದಯಾನಂದನ್ನೇ ನೇಮಕಮಾಡಿಕೊಂಡಿದ್ದರು. ಆಗಲೂ ಸಹ ಮಠದ ಆಸ್ತಿಯ ಮೇಲಿನ ಆಸೆಯಿಂದ ಮಗನಿಗೆ ಪಟ್ಟಾಧಿಕಾರ ನೀಡಿದ್ದರೆನ್ನುವ ಆರೋಪ ಕೇಳಿಬಂದಿತ್ತು. ಇದೀಗ ಭಕ್ತರು ಪೀಠಾಧಿಕಾರಿಗಳ ವಿರುದ್ಧವೇ ತಿರುಗಿ ಬಿದ್ದಿದ್ದು ಗುರುನಂಜೇಶ್ವರ ಸ್ವಾಮೀಜಿ ತಕ್ಷಣ ಮಠ ಬಿಟ್ಟು ತೆರಳಬೇಕು ಬೇರೆ ಸಭ್ಯ ಉತ್ತರಾಧಿಕಾರಿಯನ್ನು ನೇಮಿಸಬೇಕು, ಶ್ರೀಶೈಲ ಶಾಖಾ ಪೀಠದ ಶ್ರೀಗಳು ಮಠಕ್ಕೆ ಆಗಮಿಸಿ ಮಾತುಕತೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
BengaluruYelahankaThe Sex Scandal videoGurunajeshwara SwamijiMaddevanapura Mahadeva Samsthana Muttರಾಸಲೀಲೆ ವೀಡಿಯೋಗುರುನಂಜೇಶ್ವರ ಸ್ವಾಮೀಜಿಮದ್ದೇವಣಾಪುರ ಮಹಾದೇವ ಸಂಸ್ಥಾನ ಮಠಯ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


