ಪ್ರಧಾನಿ ಭೇಟಿ: 28, 29ರಂದು ಧರ್ಮಸ್ಥಳದಲ್ಲಿ ಸಾರ್ವಜನಿಕರಿಗೆ ದರ್ಶನ ನಿರ್ಬಂಧ
ಇದೇ 29ರಂದು ಪ್ರಧಾನಿ ನರೇಂದ್ರ ಮೋದಿ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನಪಡೆಯಲಿರುವುದರಿಂದ ...

Published On :
ಬೆಳ್ತಂಗಡಿ: ಇದೇ 29ರಂದು ಪ್ರಧಾನಿ ನರೇಂದ್ರ ಮೋದಿ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆಯಲಿರುವುದರಿಂದ 28ರ ಮಧ್ಯಾಹ್ನ 2 ಗಂಟೆಯಿಂದ 29ರ ಮಧ್ಯಾಹ್ನ 2 ಗಂಟೆಯ ತನಕ ಕ್ಷೇತ್ರದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಇರುವುದಿಲ್ಲ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ.
ಪ್ರಧಾನಿ ಆಗಮನ ಹಿನ್ನೆಲೆಯಲ್ಲಿ ಧರ್ಮಸ್ಥಳ ಸುತ್ತಮುತ್ತ ಭದ್ರತೆ ಕಲ್ಪಿಸಲಾಗಿದೆ. ಉಜಿರೆ ಹಾಗೂ ಧರ್ಮಸ್ಥಳದಲ್ಲಿ ಬಂದ್ ವಾತಾವರಣ ಕಂಡು ಬರಲಿದೆ. ಧರ್ಮಸ್ಥಳದಲ್ಲಿ ಶನಿವಾರ ಮಧ್ಯಾಹ್ನದಿಂದ ಭಾನುವಾರ ಮಧ್ಯಾಹ್ನದವರೆಗೆ ಅಂಗಡಿ ಮುಂಗಟ್ಟುಗಳನ್ನು ಮುಚ್ಚುವಂತೆ ಮಾಲಿಕರಿಗೆ ಸೂಚನೆ ನೀಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


