ಪ್ರತ್ಯೇಕ ಧರ್ಮ ಹೋರಾಟ; ಲಿಂಗಾಯತ ಮುಖಂಡರ ಜತೆ ಸಿಎಂ ಸಿದ್ದರಾಮಯ್ಯ ಸಭೆ
ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಲಿಂಗಾಯತನ ಮತಗಳನ್ನು ಪಡೆದು ಶತಾಗತಾಯವಾಗಿ ಮತ್ತೆ ಮುಖ್ಯಮಂತ್ರಿಯಾಗುವ ಕನಸು ಕಾಣುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟಕ್ಕೆ ತಮ್ಮ ಸರ್ಕಾರದಿಂದ...

Published On :
ಬೆಂಗಳೂರು: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಲಿಂಗಾಯತನ ಮತಗಳನ್ನು ಪಡೆದು ಶತಾಗತಾಯವಾಗಿ ಮತ್ತೆ ಮುಖ್ಯಮಂತ್ರಿಯಾಗುವ ಕನಸು ಕಾಣುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟಕ್ಕೆ ತಮ್ಮ ಸರ್ಕಾರದಿಂದ ಎಲ್ಲಾ ರೀತಿಯ ಸಹಾಯ ಹಾಗೂ ಪರಿಶ್ರಮಗಳನ್ನು ಹಾಕುತ್ತಿದ್ದಾರೆ.
ಲಿಂಗಾಯತ ಸ್ವತಂತ್ರ ಧರ್ಮ ಸ್ಥಾಪನೆ ಸಂಬಂಧ ಹೋರಾಟ ನಡೆಸುತ್ತಿರುವ ಲಿಂಗಾಯತ ಮುಖಂಡರ ಜತೆಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ ರಹಸ್ಯ ಮಾತುಕತೆ ನಡೆಸಿದ್ದಾರೆಂದು ಹೇಳಲಾಗುತ್ತಿದೆ.
ಲಿಂಗಾಯತ ಸ್ವತಂತ್ರ ಧರ್ಮ ಸ್ಥಾಪನೆಗಾಗಿ ನಡೆಯುತ್ತಿರುವ ಹೋರಾಟ, ಕಾನೂನು ಬದ್ಧವಾಗಿ ಎದುರಾಗುವ ಸಮಸ್ಯೆಗಳ, ಲಿಂಗಾಯತ ಸ್ವತಂತ್ರ ಧರ್ಮ ಪುಷ್ಟೀಕರಿಸುವ ಸಂಬಂಧ ಹೋರಾಟ ಸಮಿತಿ ಬಳಿ ಇರುವ ದಾಖಲೆಗಳು ಹಾಗೂ ವೀರಶೈವ ಮಹಾಸಭಾದ ನಿಲುವು ಕುರಿತಂತೆ ವಿಸ್ತೃತವಾಗಿ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಲಿಂಗಾಯತ ಧರ್ಮ ಸ್ಥಾಪನೆ ಸಂಬಂಧ ಈಗಾಗಲೇ ಸಲ್ಲಿಕೆಯಾಗಿರುವ ಅರ್ಜಿ ಹಾಗೂ ಒಂದು ವೇಳೆ ಮತ್ತೊಮ್ಮೆ ಅರ್ಜಿ ಸಲ್ಲಿಸಿದರೆ ಪೂರಕ ದಾಖಲೆಗಳೊಂದಿಗೆ ಅರ್ಜಿಯನ್ನು ಕರ್ನಾಟಕ ಅಲ್ಪಸಂಖ್ಯಾತರ ಆಯೋಗಕ್ಕೆ ರವಾನಿಸಲಾಗುವುದು, ವೀರಶೈವ ಮಹಸಭಾ ನೀಡಿರುವ ಮನವಿಯನ್ನೂ ಅರ್ಜಿ ರೂಪದಲ್ಲಿ ಆಯೋಗಕ್ಕೆ ಶಿಫಾರಸು ಮಾಡಲಾಗುವುದು ಎಂದು ಸಭೆಯಲ್ಲಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆಂದು ತಿಳಿದುಬಂದಿದೆ. ಅಲ್ಲದೆ, ಇದೇ ವೇಳೆ ಸಮುದಾಯದೊಳಗೇ ಇರುವ ಭಿನ್ನಾಭಿಪ್ರಾಯಗಳ ಕುರಿತಂತೆ ಅಸಮಾಧಾನವನ್ನು ವ್ಯಕ್ತಪಡಿಸಿರುವ ಅವರು, ಭಿನ್ನತೆಗಳನ್ನು ಸರಿಪಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆಂದು ಹೇಳಲಾಗುತ್ತಿದೆ.
ಲಿಂಗಾಯರ ವೋಟ್ ಬ್ಯಾಂಕ್ ನಡೆಸುವ ಬಿಜೆಪಿಯ ತಂತ್ರಕ್ಕೆ ಅಂತ್ಯ ಹಾಡುವ ಅಗತ್ಯವಿದ್ದು, ಈ ನಿಟ್ಟಿನಲ್ಲಿ ಚುನಾವಣೆಗೂ ಮುನ್ನವೇ ಪ್ರತ್ಯೇಕ ಧರ್ಮ ವಿಚಾರ ಕುರಿತ ನಿರ್ಧಾರಗಳನ್ನು ಕೈಗೊಳ್ಳಬೇಕಿದೆ. ಇಲ್ಲದೇ ಹೋದರೆ, ಇದು ರಾಜ್ಯದ ಮೇಲೆ ಪರಿಣಾಮ ಬೀರಲಿದೆ ಎಂದು ಸಭೆ ವೇಳೆ ಪಕ್ಷದ ನಾಯಕರಿಗೆ ಸಿದ್ದರಾಮಯ್ಯ ಅವರು ಹೇಳಿದ್ದಾರೆಂದು ತಿಳಿದುಬಂದಿದೆ.
ಸಭೆಯಲ್ಲಿ ಸಚಿವರಾದ ಎಂ.ಬಿ. ಪಾಟೀಲ್, ವಿನಯ್ ಕುಲಕರ್ಣಿ, ಡಾ.ಶರಣ ಪ್ರಕಾಶ್ ಪಾಟೀಲ್, ಸಂಸದ ಪ್ರಕಾಶ್ ಹುಕ್ಕೇರಿ, ಶಾಸಕರಾದ ಬಸವರಾಜ ಹೊರಟ್ಟಿ, ಅಶೋಕ ಪಟ್ಟಣ ಮತ್ತಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್Siddaramaiahಸಿದ್ದರಾಮಯ್ಯKarnatakaಕರ್ನಾಟಕವಿಧಾನಸಭಾ ಚುನಾವಣೆassembly electionseparate religionಪ್ರತ್ಯೇಕ ಧರ್ಮ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


