ರಾಜ್ಯ

ತಂತ್ರಜ್ಞಾನ ಅಧ್ಯಯನಕ್ಕೆ ಆರೋಗ್ಯ ಸಂಶೋಧನಾ ಇಲಾಖೆಯೊಂದಿಗೆ ರಾಜ್ಯ ಸರ್ಕಾರ ಒಪ್ಪಂದ

ಆರೋಗ್ಯ ತಂತ್ರಜ್ಞಾನ ಮೌಲ್ಯಮಾಪನ ನಡೆಸಲು ಅಕ್ಟೋಬರ್ 10ರಂದು ರಾಜ್ಯ ಸರ್ಕಾರ....

ತಂತ್ರಜ್ಞಾನ ಅಧ್ಯಯನಕ್ಕೆ ಆರೋಗ್ಯ ಸಂಶೋಧನಾ ಇಲಾಖೆಯೊಂದಿಗೆ ರಾಜ್ಯ ಸರ್ಕಾರ ಒಪ್ಪಂದ
ಸಾಂದರ್ಭಿಕ ಚಿತ್ರ
Published On :
ಬೆಂಗಳೂರು: ಆರೋಗ್ಯ ತಂತ್ರಜ್ಞಾನ ಮೌಲ್ಯಮಾಪನ ನಡೆಸಲು ಅಕ್ಟೋಬರ್ 10ರಂದು ರಾಜ್ಯ ಸರ್ಕಾರ ಕೇಂದ್ರ ಆರೋಗ್ಯ ಸಚಿವಾಲಯ ಜೊತೆಗೆ ಮೂರು ವರ್ಷಗಳ ಒಪ್ಪಂದಕ್ಕೆ ಸಹಿ ಹಾಕಿದೆ. 
ಭಾರತದ ಮೊದಲ ಆರೋಗ್ಯ ತಂತ್ರಜ್ಞಾನ ಮೌಲ್ಯಮಾಪನವಾದ ಆರೋಗ್ಯ ತಂತ್ರಜ್ಞಾನ ಮೌಲ್ಯಮಾಪನ ಮಂಡಳಿ(ಎಂಟಿಎಬಿ)ಯನ್ನು ಇತ್ತೀಚೆಗೆ ಆರೋಗ್ಯ ಇಲಾಖೆ ಸ್ಥಾಪಿಸಿ ಇದು ಆರೋಗ್ಯ ಸಂಬಂಧಿ ಖರ್ಚು ವೆಚ್ಚಗಳನ್ನು ನಿಭಾಯಿಸುತ್ತದೆ. ರೋಗಿಗಳ ಆರೈಕೆ ವೆಚ್ಚ. ವೈದ್ಯಕೀಯ ವೆಚ್ಚ ಮತ್ತು ಒಟ್ಟಾರೆ ವೈದ್ಯಕೀಯ ವೆಚ್ಚವನ್ನು ತಗ್ಗಿಸಲು ಎಂಟಿಎಬಿ ಉದ್ದೇಶ ಹೊಂದಿದೆ.
ಇಂತಹ ಒಪ್ಪಂದಕ್ಕೆ ಸಹಿ ಹಾಕಿದ ರಾಜ್ಯಗಳಲ್ಲಿ ಕರ್ನಾಟಕ ನಾಲ್ಕನೇ ಸ್ಥಾನದಲ್ಲಿದೆ ಎಂದು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನ ವೈದ್ಯಕೀಯ ನಿರ್ವಹಣೆಯ ನಿರ್ದೇಶಕ ಸುಧಾ ಚಂದ್ರಶೇಖರ್ ಹೇಳುತ್ತಾರೆ. ಒಪ್ಪಂದದ ಭಾಗವಾಗಿ ಇದರಡಿಯಲ್ಲಿ ವೈದ್ಯಕೀಯ ಸಾಧನಗಳು, ಔಷಧಗಳು, ವೈದ್ಯಕೀಯ ಮತ್ತು ಸರ್ಜಿಕಲ್ ವಿಧಾನಗಳನ್ನು ಮೌಲ್ಯಮಾಪನ ಒಳಗೊಳ್ಳುತ್ತದೆ.
ಈ ಸಾಕ್ಷ್ಯಾಧಾರಿತ ಅಧ್ಯಯನ ನೀತಿ ನಿರೂಪಣೆಗೆ ಬಳಸಿಕೊಳ್ಳಲಾಗುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.