ರಾಜ್ಯ

ಧರ್ಮಸ್ಥಳದ ಮಂಜುನಾಥ ಸ್ವಾಮಿಗೆ ರುದ್ರಾಭಿಷೇಕ ಸಲ್ಲಿಸಿದ ಪ್ರಧಾನಿ ಮೋದಿ, ಉಜಿರೆಯ ಕಾರ್ಯಕ್ರಮದಲ್ಲಿ ಭಾಗಿ

ಪ್ರಧಾನಿ ನರೇಂದ್ರ ಮೋದಿ ಐಎಎಫ್ ಹೆಲಿಕಾಫ್ಟರ್ ನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ್ದು, ಹೆಲಿಪ್ಯಾಡ್ ನಲ್ಲಿ ಪ್ರಧಾನಿಗೆ ಸಾಂಪ್ರದಾಯಿಕ ಸ್ವಾಗತ ಕೋರಲಾಯಿತು.

ಧರ್ಮಸ್ಥಳದ ಮಂಜುನಾಥ ಸ್ವಾಮಿಗೆ ರುದ್ರಾಭಿಷೇಕ ಸಲ್ಲಿಸಿದ ಪ್ರಧಾನಿ ಮೋದಿ, ಉಜಿರೆಯ ಕಾರ್ಯಕ್ರಮದಲ್ಲಿ  ಭಾಗಿ
ರುಪೇ ಕಾರ್ಡ್ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿರುವ ಪ್ರಧಾನಿ ನರೇಂದ್ರ ಮೋದಿ
Published On :
ಧರ್ಮಸ್ಥಳ: ಪ್ರಧಾನಿ ನರೇಂದ್ರ ಮೋದಿ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಾಲಯವನ್ನು ಸಂದರ್ಶಿಸಿದ್ದು, ರುದ್ರಾಭಿಷೇಕ ನೆರವೇರಿಸಿದ್ದಾರೆ. 
ದೇವಾಲಯದಲ್ಲಿ 4 ಅರ್ಚಕರ ನೇತೃತ್ವದಲ್ಲಿ ರುದ್ರಾಭಿಷೇಕ ನೆರವೇರಿಸಿದ ಬಳಿಕ ಕೆಲ ಕಾಲ ಧ್ಯಾನ ಮಾಡಿದ ಪ್ರಧಾನಿ ಮೋದಿ ಈಗ ಉಜಿರೆಯಲ್ಲಿ ನಡೆಯುತ್ತಿರುವ ರುಪೇ ಕಾರ್ಡ್ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.
ಇದಕ್ಕೂ ಮುನ್ನ ಐಎಎಫ್ ಹೆಲಿಕಾಫ್ಟರ್ ನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ ಪ್ರಧಾನಿಗೆ
ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಡೆ ಅವರ ನೇತೃತ್ವದಲ್ಲಿ ವೇದಘೋಷಗಳೊಂದಿಗೆ ಪೂರ್ಣಕುಂಭ ಸ್ವಾಗತ ಕೋರಲಾಯಿತು.
ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ, ಕೇಂದ್ರ ಸಚಿವ ಅನಂತ್ ಕುಮಾರ್, ಸದಾನಂದ ಗೌಡ ಸೇರಿದಂತೆ ಹಲವು ಬಿಜೆಪಿ ನಾಯಕರು ಸ್ಥಳದಲ್ಲಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.