ರಾಜ್ಯ

ತುಮಕೂರು: ರಸ್ತೆ ಅಪಘಾತ, ಸ್ಥಳದಲ್ಲೇ ಇಬ್ಬರ ಸಾವು

ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಹಿಂದಿನಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರಿನ ಬಳಿ ಸಂಭವಿಸಿದೆ

ತುಮಕೂರು: ರಸ್ತೆ ಅಪಘಾತ, ಸ್ಥಳದಲ್ಲೇ ಇಬ್ಬರ ಸಾವು
ತುಮಕೂರು: ರಸ್ತೆ ಅಪಘಾತ, ಸ್ಥಳದಲ್ಲೇ ಇಬ್ಬರ ಸಾವು
Published On :
ತುಮಕೂರು: ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಹಿಂದಿನಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರಿನ ಬಳಿ ಸಂಭವಿಸಿದೆ  
ಶಂಕರ್ ಜೋಷಿ(31), ವೇಣುಗೋಪಾಲ್(30) ಎನ್ನುವವರಿಬ್ಬರು ಘಟನೆಯಲ್ಲಿ ಸಾವನ್ನಪ್ಪಿದ್ದು  ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಮೂಲತಃ ಹಾವೇರಿ ಜಿಲ್ಲೆ ಶಿಗ್ಗಾಂವಿ ನಿವಾಸಿಗಳಾಗಿದ್ದ ಅವರು ಇಂದು ತುಮಕೂರಿನ ಸ್ನೇಹಿತರನ್ನು ಭೇಟಿ ಮಾದಲೆಂದು ಹೊರಟಿದ್ದರು.
ಎಚ್‍ಎಂಟಿ ಕಾರ್ಖಾನೆ ಹತ್ತಿರ ಬಂದಾಗ ಬೈಕ್ ನ್ನು ಸ್ಲೋ ಮಾಡಿದ ಸಂದರ್ಭ ತಮಿಳುನಾಡು ಮೂಲದ ಲಾರಿ ಒಂದು ವೇಗವಾಗಿ ಬಂದು ಹಿಂದಿನಿಂದ ಡಿಕ್ಕಿ ಹೊಡೆದಿದೆ. ಹೀಗೆ ಢಿಕ್ಕಿ ಆಗ ತಕ್ಷಣವೇ ಇಬ್ಬರೂ ಮೃತಪಟ್ಟಿದ್ದಾರೆ. 
ಅಪಘಾತದ ಸ್ಥಳದಲ್ಲಿ ಟ್ರಾಫಿಕ್ ಜಾಮ್ ಉಂತಾಗಿ ರಸ್ತೆ ಸಂಚಾರ ಅಸ್ತವ್ಯಸ್ತವಾಗಿತ್ತು. ಸಂಚಾರಿ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.