ಸಿಎಂ ಸಿದ್ದರಾಮಯ್ಯ ಹ್ಯೂಬ್ಲಾಟ್ ವಾಚ್ ಪ್ರಕರಣ ಇನ್ನೂ ಮುಗಿದಿಲ್ಲ: ಅನುಪಮಾ ಶೆಣೈ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದುಬಾರಿ ಹ್ಯೂಬ್ಲಾಟ್ ವಾಚ್ ವಿವಾದ ಪ್ರಕರಣ ಇನ್ನೂ ಅಂತ್ಯಕಂಡಿಲ್ಲ ಎಂದು ಮಾಜಿ ಡಿವೈಎಸ್ ಪಿ ಅನುಪಮಾ ಶೆಣೈ...

Published On :
ಬಳ್ಳಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದುಬಾರಿ ಹ್ಯೂಬ್ಲಾಟ್ ವಾಚ್ ವಿವಾದ ಪ್ರಕರಣ ಇನ್ನೂ ಮುಗಿದಿಲ್ಲ ಎಂದು ಮಾಜಿ ಡಿವೈಎಸ್ ಪಿ ಅನುಪಮಾ ಶೆಣೈ ಹೇಳಿದ್ದಾರೆ.
ಬಳ್ಳಾರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹ್ಯೂಬ್ಲಾಟ್ ಕೇಸ್ ಇನ್ನೂ ಪೂರ್ಣಗೊಂಡಿಲ್ಲ, ಈ ಸಂಬಂಧ ತಾವು ಪ್ರಧಾನ ಮಂತ್ರಿಯ ಸಿಬ್ಬಂದಿ ಮತ್ತು ತರಬೇತಿ ವಿಭಾಗಕ್ಕೆ ಪತ್ರ ಬರೆದು ಪ್ರಕರಣದ ತನಿಖೆ ನಡೆಸುವಂತೆ ಕೋರಿರುವುದಾಗಿ ಹೇಳಿದ್ದಾರೆ.
ಜೊತೆಗೆ ಈ ಸಂಬಂಧ 34 ದಾಖಲೆಗಳನ್ನು ರವಾನಿಸಿರುವುದಾಗಿಯೂ ತಿಳಿಸಿದ್ದಾರೆ. ಈ ಮೊದಲು ಇದೇ ದಾಖಲಾತಿಗಳನ್ನು ಸಿಬಿಆ ಗೂ ಸಲ್ಲಿಸಿದ್ದರು.
ಆದರೆ ಅನುಪಮಾ ಶೆಣೈ ಅವರು ಸಲ್ಲಿಸಿದ್ದ ಈ ದಾಖಲೆಗಳ ಸಂಬಂಧ ಸಿಬಿಐ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ, ಹಾಗಾಗಿ ಪ್ರಕರಣವನ್ನು ಪ್ರಧಾನ ಮಂತ್ರಿಯ ಸಿಬ್ಬಂದಿ ಮತ್ತು ತರಬೇತಿ ವಿಭಾಗದ ಅಂಗಳಕ್ಕೆ ಕೊಂಡೊಯ್ದಿರುವುದಾಗಿ ಅವರು ತಿಳಿಸಿದ್ದಾರೆ.
ನವೆಂಬರ್ 1 ರಂದು ಕುಡ್ಲಿಗಿಯಲ್ಲಿ ತಮ್ಮ ಹೊಸ ರಾಜಕೀಯ ಪಕ್ಷ ಸ್ಥಾಪಿಸುವುದಾಗಿ ಹೇಳಿರುವ ಅನುಪಮಾ ಶೆಣೈ ರಾಜ್ಯದ ಎಲ್ಲಾ 224 ವಿಧಾನಸಭೆ ಕ್ಷೇತ್ರಗಳಿಂದ ತಮ್ಮ ಪಕ್ಷದ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ ಎಂದು ಹೇಳಿದ್ದಾರೆ.
ಇನ್ನೂ ಡಿವೈಎಸ್ ಪಿ ಗಣಪತಿ ಆತ್ಮಹತ್ಯೆ ಪ್ರಕರಣ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ ಜಾರ್ಜ್ ಅವರ ವಿರುದ್ಧ ಸಿಐಡಿ ಈ ಮೊದಲೇ ಕೇಸ್ ಬುಕ್ ಮಾಡಬೇಕಿತ್ತು ಎಂದು ಅಭಿಪ್ರಾಯ ಪಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Siddaramaiahಸಿದ್ದರಾಮಯ್ಯಬಳ್ಳಾರಿAnupama shenoyಅನುಪಮಾ ಶೆಣೈBallariಹ್ಯೂಬ್ಲಾಟ್ ವಾಚ್ ಪ್ರಕರಣHublot Watch case
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


